Nandini Milk Price: ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ 2 ರೂಪಾಯಿ ಏರಿಕೆ
ಬೆಂಗಳೂರು ನವೆಂಬರ್ 23: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆಯಾಗಲಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 2 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ ಹಾಗೂ ಮೊಸರಿನ ಬೆಲೆಯೂ ಕೂಡ 2 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಿಸಿದ್ದಾರೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 2 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 50 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 39 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 45 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 47 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ(ನ.24) ಜಾರಿಗೆ ಬರಲಿದೆ. ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.

ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 44 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 50 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 52 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 38 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications