Breaking; ಮೇ 1 ರಿಂದ ಕರ್ನಾಟಕದಲ್ಲಿ ಹಾಲಿನ ದರ ಏರಿಕೆ?
ಬೆಂಗಳೂರು, ಏಪ್ರಿಲ್ 27; ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಕರ್ನಾಟಕ ಸರ್ಕಾರ ಹಾಲಿನ ದರ ಏರಿಕೆಗೆ ಮುಂದಾಗಿದೆ. ಪ್ರತಿ ಲೀಟರ್‌ಗೆ 3 ರೂ. ಏರಿಕೆ ಮಾಡಲು ಅವಕಾಶ ನೀಡಬೇಕು ಎಂದು ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಾಲಿನ ದರ ಏರಿಕೆಗೆ ಅನುಮತಿ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ವಿವಿಧ ಹಾಲು ಒಕ್ಕೂಟಗಳ ಜೊತೆ ಸಭೆ ನಡೆಸಿದ ಬಳಿಕ ಈ ಮನವಿ ಸಲ್ಲಿಕೆ ಮಾಡಲಾಗಿದೆ.
ನಂದಿನ ಹಾಲಿನ ದರಕ್ಕೆ ಹೋಲಿಕೆ ಮಾಡಿದರೆ ಖಾಸಗಿ ಸಂಸ್ಥೆಗಳ ದರ 8 ರಿಂದ 10 ರೂ. ಹೆಚ್ಚಿದೆ. ಈ ಹಿನ್ನಲೆಯಲ್ಲಿ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್‌ಗೆ 5 ರೂ. ದರ ಏರಿಕೆ ಮಾಡು ಮನವಿ ಮಾಡಿವೆ. ಕನಿಷ್ಠ 3 ರೂ. ಏರಿಕೆಗೆ ಅನುಮತಿ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮೇ 1 ರಿಂದಲೇ ಅನ್ವಯವಾಗುವಂತೆ ಹಾಲಿನ ದರ ಏರಿಕೆಗೆ ಅನುಮತಿ ನೀಡಬೇಖು ಎಂದು ಮನವಿ ಮಾಡಲಾಗಿದೆ. ಹಾಲಿನ ಸಂಸ್ಕರಣೆ ವೆಚ್ಚ, ಕಚ್ಚಾ ಸಾಮಾಗ್ರಿಗಳ ದರ, ವಿದ್ಯುತ್ ದರಗಳು ಸೇರಿದಂತೆ ಹಲವಾರು ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖ ಮಾಡಲಾಗಿದೆ.
ಕೆಎಂಎಫ್ ಹಾಲಿನ ದರವನ್ನು ಲೀಟರ್‌ಗೆ 3 ರೂ. ಏರಿಕೆ ಮಾಡಲು ಅನುಮತಿ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. #KMF #Milk #MilkPrice #Nandini @BSBommai pic.twitter.com/8QpnUwW0jA
— oneindiakannada (@OneindiaKannada) April 27, 2022
ಬಾಲಚಂದ್ರ ಜಾರಕಿಹೊಳಿ ಸಲ್ಲಿಕೆ ಮಾಡಿರುವ ಮನವಿ ಸ್ವೀಕಾರ ಮಾಡಿರುವ ಮುಖ್ಯಮಂತ್ರಿಗಳು ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ಹೇಳಿದ್ದಾರೆ.












Click it and Unblock the Notifications