ವೈದ್ಯರ ಮುಷ್ಕರ, ಇಂದು OPDಗಳು ಬಂದ್

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 16 : ಖಾಸಗಿ ವೈದ್ಯರ ಮುಷ್ಕರ ಮುಂದುವರೆದಿದ್ದು ಇಂದು ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸಾ ಸೌಲಭ್ಯ (ಒಪಿಡಿ) ಬಂದ್ ಮಾಡಲಾಗುತ್ತದೆ.

ನಾಳೆಯಿಂದ(ನ. 16) ಬೆಂಗಳೂರಿನ ಎಲ್ಲಾ ಖಾಸಗಿ 'ಒಪಿಡಿ'ಗಳು ಬಂದ್

ಭಾರತೀಯ ವೈದ್ಯಕೀಯ ಸಂಘ-ಕರ್ನಾಟಕ ಶಾಖೆ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಸಂಘ (ಪನಾ), ಡಯಾಗ್ನಸ್ಟಿಕ್ ಕೇಂದ್ರಗಳ ಸಂಘ ಸೇರಿ ಈ ತೀರ್ಮಾನ ತೆಗೆದುಕೊಂಡಿವೆ.

ವೈದ್ಯರ ಮುಷ್ಕರಕ್ಕೆ ಕಾರಣವಾಯಿತೇ ಈ ಅಂಶಗಳು

KMPA issue : OPD services remain closed

ತುರ್ತು ಚಿಕಿತ್ಸೆ, ಡಯಾಲಿಸಿಸ್, ಕ್ಯಾನ್ಸರ್ ರೋಗಿಗಳಿಗೆ ಕೀಮೊಥೆರಪಿ, ರೇಡಿಯೊಥೆರಪಿ, ತುರ್ತು ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳನ್ನು ಮಾತ್ರ ಮಾಡಲಾಗುತ್ತದೆ ಎಂದು ಖಾಸಗಿ ಆಸ್ಪತ್ರೆಗಳು ಸ್ಪಷ್ಟಪಡಿಸಿವೆ.'

ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯುವ ತನಕ ಪ್ರತಿಭಟನೆಯನ್ನು ಮುಂದುವರೆಸಲಾಗುತ್ತದೆ' ಎಂದು ಪನಾ ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಹೇಳಿದ್ದಾರೆ.

ಸರ್ಕಾರಿ ವೈದ್ಯರ ರಜೆ ರದ್ದು : ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರದ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರ ರಜೆಗಳನ್ನು ರದ್ದುಗೊಳಿಸಲಾಗಿದೆ. ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ರಜೆ ಮೇಲೆ ತೆರಳದಂತೆ ಆರೋಗ್ಯ ಇಲಾಖೆ ಆಯುಕ್ತ ಮನೋಜ್ ಕುಮಾರ್ ಮೀನಾ ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.

ಪಿಐಎಲ್ ಸಲ್ಲಿಕೆ : ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ನಡೆಸುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಲಾಗಿದೆ. ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Except for the emergency services all other services in private hospitals remained closed after doctor protest against proposed amendments to the Karnataka Private Medical Establishments Act, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ