ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್ : ಮೇಕೆದಾಟು ಯೋಜನೆ ವಿವಾದವೇನು?

|
Google Oneindia Kannada News

ಬೆಂಗಳೂರು, ಏ. 17 : ಕರ್ನಾಟಕ ಸರ್ಕಾರದ ಉದ್ದೇಶಿತ ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ತಮಿಳುನಾಡು ವಿರೋಧ ಖಂಡಿಸಿ ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಏ. 22ರಂದು ಸಿದ್ದರಾಮಯ್ಯ ಅವರು ಯೋಜನೆ ಜಾರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. [ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್]

ಕರ್ನಾಟಕದ ಮೇಕೆದಾಟು ಯೋಜನೆ ಕುರಿತು ಯೋಜನಾ ವರದಿಯನ್ನು ತಯಾರಿಸುತ್ತಿದೆ. ಆಗಲೇ ತಮಿಳುನಾಡು ಸರ್ಕಾರ ಇದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಯೋಜನೆ ಜಾರಿಗೊಳಿಸದಂತೆ ಕರ್ನಾಟಕಕ್ಕೆ ಸೂಚನೆ ನೀಡಿ ಎಂದು ಮನವಿ ಮಾಡಿದೆ. [ಮೇಕೆದಾಟು ಯೋಜನೆ ಏನು?]

ಕರ್ನಾಟಕ ಸರ್ಕಾರ 2013ರ ಸೆಪ್ಟೆಂಬರ್‌ನಲ್ಲಿ ಮೊದಲು ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾಪ ಮುಂದಿಟ್ಟಿತು. ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶ. [ಕರ್ನಾಟಕ ಬಂದ್ : 500 ಸಂಘಟನೆಗಳ ಬೆಂಬಲ]

ತಮಿಳುನಾಡಿನ ವಿರೋಧದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಯೋಜನೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ. ಏ.22ರಂದು ಪ್ರಧಾನಿ ಭೇಟಿಗೆ ಸಿಎಂ ಅವಕಾಶ ಕೋರಿದ್ದು, ಒಪ್ಪಿಗೆ ಸಿಕ್ಕಿದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಕರ್ನಾಟಕ ಸರ್ಕಾರದ ಉದ್ದೇಶಿತ ಯೋಜನೆ

ಕರ್ನಾಟಕ ಸರ್ಕಾರದ ಉದ್ದೇಶಿತ ಯೋಜನೆ

ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶ. ಈ ಯೋಜನೆ ಇನ್ನೂ ಪ್ರಸ್ತಾವನೆ ಹಂತದಲ್ಲಿದೆ.

ತಮಿಳುನಾಡು ವಿರೋಧವೇಕೆ?

ತಮಿಳುನಾಡು ವಿರೋಧವೇಕೆ?

ಕಾವೇರಿ ನದಿ ಪಾತ್ರದ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ಅದು ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಉಲ್ಲಂಘನೆಯಾಗುತ್ತದೆ ಮತ್ತು ನಮ್ಮ ರಾಜ್ಯಕ್ಕೆ ಹರಿದು ಬರುವ ನೀರಿನಲ್ಲಿ ಕೊರತೆ ಉಂಟಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ವಾದವೇನು?

ಕರ್ನಾಟಕದ ವಾದವೇನು?

ಕರ್ನಾಟಕ ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಒದಗಿಸಲು ಈ ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಇದರಿಂದ ತಮಿಳುನಾಡಿಗೆ ಹರಿದು ಹೋಗುವ ನೀರಿಗೆ ಅಡಚಣೆ ಉಂಟಾಗುವುದಿಲ್ಲ. ಮಳೆಗಾಲದಲ್ಲಿ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಯೋಜನೆಗೆ ಬಳಸಿಕೊಳ್ಳುತ್ತೇವೆ ಎಂದು ಕರ್ನಾಟಕ ಸ್ಪಷ್ಟನೆ ನೀಡುತ್ತಿದೆ.

ಪರಿಸರ ಇಲಾಖೆ ಅನುಮತಿಯನ್ನು ಪಡೆದಿಲ್ಲ

ಪರಿಸರ ಇಲಾಖೆ ಅನುಮತಿಯನ್ನು ಪಡೆದಿಲ್ಲ

ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮತಿಯನ್ನು ಕರ್ನಾಟಕ ಇನ್ನೂ ಪಡೆದಿಲ್ಲ. ಕೇಂದ್ರ ಪರಿಸರ ಸಚಿವ ಪ್ರಕಾಶ್ ಜವಡೇಕರ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಅಣೆಕಟ್ಟು ನಿರ್ಮಾಣ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಬಳಿ ಅನುಮತಿ ಕೇಳಿಲ್ಲ. ಸರ್ಕಾರ ಯೋಜನಾ ವರದಿ ತಯಾರಿಸುತ್ತಿರುವುದು ಸೇರಿದಂತೆ ಯಾವುದೇ ವಿಚಾರಗಳು ತಮಗೆ ತಿಳಿದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಮುಖ್ಯಮಂತ್ರಿಗಳಿಂದ ಪ್ರಧಾನಿ ಭೇಟಿ

ಮುಖ್ಯಮಂತ್ರಿಗಳಿಂದ ಪ್ರಧಾನಿ ಭೇಟಿ

ಏ.22ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಮೋದಿ ಅವರಿಗೆ ಮೇಕೆದಾಟು ಯೋಜನೆಯ ಉದ್ದೇಶದ ಬಗ್ಗೆ ಅವರು ವಿವರಣೆ ನೀಡಲಿದ್ದಾರೆ. ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರ ಜೊತೆ ಪ್ರಧಾನಿ ಭೇಟಿಯಾಗುವ ಸಾಧ್ಯತೆ ಇದೆ.

ಏ.18ರ ಶನಿವಾರ ಕರ್ನಾಟಕ ಬಂದ್

ಏ.18ರ ಶನಿವಾರ ಕರ್ನಾಟಕ ಬಂದ್

ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಏ.17ರ ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ತಮಿಳುನಾಡಿನಲ್ಲಿ ಕೆಲವು ದಿನಗಳ ಹಿಂದೆ ಬಂದ್ ನಡೆಸಲಾಗಿತ್ತು. ಇದಕ್ಕೆ ತಿರುಗೇಟು ನೀಡಲು ಬಂದ್‌ಗೆ ಕರೆ ನೀಡಲಾಗಿದೆ.

English summary
Pro-Kannada organizations called for Karnataka bandh on April 18, 2015 against Tamil Nadu government that opposed Mekedatu drinking water project. Mekedatu project here is details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X