Gruha Lakshmi Scheme: ಗೃಹಲಕ್ಷ್ಮಿ ಹಣ ಹೆಚ್ಚಳ: ಸಂಪೂರ್ಣ ವಿವರ ತಿಳಿಯಿರಿ

ಬೆಂಗಳೂರು, ಜುಲೈ 04: ರಾಜ್ಯ ಕಾಂಗ್ರೆಸ್‌ ಸರ್ಕಾರದ 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳನ್ನ ಜಾರಿಗೊಳಿಸುವುದಾಗಿ ಭರವಸೆಯನ್ನ ನೀಡಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುವಲ್ಲಿ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ ಪ್ರತಿ ಮನೆಯ ಯಜಮಾನಿಗೆ 2000 ರೂಪಾಯಿಯನ್ನ ರಾಜ್ಯ ಸರ್ಕಾರ ನೀಡುತ್ತಾ ಬಂದಿದೆ.

ಇನ್ನೂ ಆರಂಭದಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಖಾತೆಗೆ ಹಣವನ್ನ ಜಮಾ ಮಾಡುತ್ತಿತ್ತು, ಇದೀಗ ಕಳೆದ ನಾಲ್ಕೈದು ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗದ ಹಿನ್ನೆಲೆ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ವಿಚಾರವಾಗಿ ಆಗಾಗ ರಾಜ್ಯದ ಜನರಲ್ಲಿ ಭಾರೀ ಗೊಂದಲದ ಪ್ರಶ್ನೆಗಳು ಉದ್ಭವಿಸುತ್ತವೆ. ಇದಕ್ಕೆ ಪ್ರಮುಖ ಕಾರಣ ಗೃಹಲಕ್ಷ್ಮಿ ಹಣ ಸರಿಯಾದ ಸಮಯಕ್ಕೆ ಬಿಡುಗಡೆಯಾಗದೆ ವಿಳಂಬವಾಗುತ್ತಿರುವುದು.

Know about the increase in the amount of Gruhalakshmi Yojana

ಇತ್ತ ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರವು ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದೆ. ಇದರ ನಡುವೆ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ ಹಣವನ್ನ ಹೆಚ್ಚಳ ಮಾಡುತ್ತಾರಾ ಎನ್ನುವ ಪ್ರಶ್ನೆಯನ್ನ ಮುಂದಿಟ್ಟಿದ್ದಾರೆ. ಆದರೆ, ಇದರ ಬಗ್ಗೆ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನ ನೀಡಿಲ್ಲ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಹೆಸರು ಕೈಬಿಡಲಾಗುತ್ತಿದೆ ಎಂಬ ವದಂತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ. ಹಣ ಸಂದಾಯದಲ್ಲಿ ತಾಂತ್ರಿಕ ಸಮಸ್ಯೆ ಇಲ್ಲ. ಮೇ ತಿಂಗಳ ಹಣ ವರ್ಗಾವಣೆಗೆ ಹಣಕಾಸು ಇಲಾಖೆಯಿಂದ ಬಿಡುಗಡೆ ಆಗಬೇಕಿದೆ. ಫಲಾನುಭವಿಗಳಿಗೆ ಹಣ ತಲುಪಲು ವಿಳಂಬವಾಗುತ್ತಿದ್ದು, ಯೋಜನೆಗೆ ಯಾವುದೇ ತೊಂದರೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+