Dengue cases: ಜುಲೈ 13ರಂದು ಕರ್ನಾಟಕದಲ್ಲಿ ದಾಖಲಾದ ಡೆಂಗ್ಯೂ ಪ್ರಕರಣಗಳು: ಜಿಲ್ಲಾವಾರು ಅಂಕಿಅಂಶಗಳ ವಿವರ ಇಲ್ಲಿದೆ
Dengue cases on July 13th: ಈ ಹಿಂದೆ ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ನಲುಗಿ ಹೋಗಿತ್ತು. ಅದರಲ್ಲೂ ವ್ಯಾಪಾರಸ್ಥರ ಜೀವನವನ್ನೇ ಕಿತ್ತುಕೊಂಡುಬಿಟ್ಟಿತ್ತು. ಇದೀಹ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣದ ಹಾವಳಿ ದಿನದಿಂದ ದಿಬನಕ್ಕೆ ಹೆಚ್ಚಾಗುತ್ತಲೇ ಇವೆ. ಇನ್ನು ಕಳೆದ 24 ಗಂಟೆಗಳಲ್ಲಿ ಒಟ್ಟು 424 ಡೆಂಗಿ ಪ್ರಕರಣಗಳು ದಾಖಲಾಗಿದ್ದು, 119 ಜನ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. ಹಾಗಾದರೆ ಜಿಲ್ಲಾವಾರು ಪ್ರಕರಣಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಶನಿವಾರ ಒಂದೇ ದಿನ ಒಟ್ಟು 2,557 ಡೆಂಗಿ ಪ್ರಕರಣಗಳನ್ನು ಪರೀಕ್ಷಿಸಲಾಗಿದೆ. ಇನ್ನು ಒಟ್ಟಾರೆ ಈ ವರೆಗೆ ರಾಜ್ಯದಲ್ಲಿ 66,298 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇದು ವರೆಗೆ 9,052 ಡೆಂಗಿ ಪ್ರಕರಣಗಳು ಸಕ್ರಿಯವಾಗಿದ್ದು, 353 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಮಾಹಿತಿ: ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಶನಿವಾರ ಒಟ್ಟು 202 ಪ್ರಕರಣಗಳು ದಾಖಲಾಗಿದ್ದು, 16 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ 2830ಕ್ಕೆ ಏರಿಕೆ ಆಗಿದೆ. ಉಳಿಂದ ಬೆಂಗಳೂರು ನಗರದಲ್ಲಿ 5, ಬೆಂಗಳೂರು ಗ್ರಾಮಂತರದಲ್ಲಿ 1 ಪ್ರಕರಣಗಳು ದಾಖಲಾಗಿವೆ.
ಇನ್ನು ಕಳೆದ 24 ಗಂಟೆಯಲ್ಲಿ ಕಾಣಿಸಿಕೊಂಡ ಪ್ರಕರಣಗಳಲ್ಲಿ ಕೋಲಾರದಲ್ಲಿ 17, ತುಮಕೂರು 12, ದಾವಣಗೆರೆ 8, ಶಿವಮೊಗ್ಗ 16, ಬೆಳಗಾವಿ 6, ವಿಜಯಪುರ 2, ಬಾಗಲಕೋಟೆ 12, ಧಾರವಾಡ 20, ಉತ್ತರ ಕನ್ನಡ 3, ಕಲಬುರಗಿ 12, ಯಾದಗಿರಿ 3, ಚಾಮರಾಜನಗರ 4, ಹಾಸನ 20, ದಕ್ಷಿಣ ಕನ್ನಡ 20, ಚಿಕ್ಕಮಗಳೂರು 9, ಕೊಡಗು ಜಿಲ್ಲಯಲ್ಲಿ 9 ಪ್ರಕರಣಗಳು ದಾಖಲಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್: ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರ ಆಗಾಗಾ ಗುಡ್ ನ್ಯೂಸ್ ನೀಡುತ್ತಲೇ ಇರುತ್ತದೆ. ಇನ್ನೂ ಇದೀಗ ರಾಜ್ಯದಲ್ಲಿ ಡೆಂಗ್ಯೂ ಉಲ್ಬಣಿಸುತ್ತಿದ್ದು, ಈ ಹಿನ್ನೆಲೆ ಇದೀಗ ಮುಂಜಾಗ್ರತಾ ಕ್ರಮವಾಗಿ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ.
ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯ ಮಟ್ಟದ ವಾರ್ ರೂಮ್‌ಗೆ ಸಲ್ಲಿಕೆ ಮಾಡಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್‌ಗಳನ್ನು ತುರ್ತಾಗಿ ಪ್ರಾರಂಭ ಮಾಡಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications