Labour’s Pension: ಕಾರ್ಮಿಕರು ಮಾಸಿಕ ಪಿಂಚಣಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು?
Labour's Pension: ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಕಾರ್ಮಿಕ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ.
ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ ಅಥವಾ ಪತ್ನಿ ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂದು ಇಲ್ಲಿ ತಿಳಿಯಿರಿ.

ಅರ್ಜಿ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು
* ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ
* ಪಿಂಚಣಿ ಮಂಜೂರಾತಿ ಆದೇಶ
* ರೇಷನ್ ಕಾರ್ಡ್ ಪ್ರತಿ
* ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ
* ಅವಲಂಬಿತರ ಬ್ಯಾಂಕ್ ಖಾತೆ ವಿವರ
* ಮರಣ ಪ್ರಮಾಣ ಪತ್ರ
* ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ
* ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ
* ಅರ್ಜಿದಾರರ ಕೋರಿಕೆ ಪತ್ರ
ನಿವೃತ್ತಿ ವೇತನಕ್ಕೆ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು: ಪ್ರತಿಯೊಂದು ದೇಶದಲ್ಲಿರುವಂತೆ ನಮ್ಮ ದೇಶದಲ್ಲೂ ಸಹ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರಿಗೆ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿ ಮಾಡಲಾಲಾಗುತ್ತಿದೆ. ಇದಕ್ಕಾಗಿಯೇ ಅಯವ್ಯಯದಲ್ಲಿ ಸರ್ಕಾರ ಹಣವನ್ನು ಕಾಯ್ದಿರಿಸುತ್ತದೆ. ಹಾಗಾದರೆ ಈ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖೆಲೆಗಳು ಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿವೃತ್ತಿ ವೇತನವನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರಿ ಕಚೇರಿ ಮುಖ್ಯಸ್ಥರಾಗಿರುತ್ತಾರೆ. ನಿವೃತ್ತಿ ವೇತನ ಪಡೆಯಲು ಸರ್ಕಾರಿ ನೌಕರ ಉತ್ತಮ ನಡತೆಯನ್ನು ಹೊಂದಿರಬೇಕಾಗುತ್ತದೆ. ನಿವೃತ್ತಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಇರಬೇಕು. ನಿವೃತ್ತಿ ವೇತನ ಅರ್ಜಿ ಜೊತೆಯಲ್ಲಿ ಇರಬೇಕಾದ ದಾಖಲಾತಿಗಳ ವಿವರವನ್ನು ಇಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಯಥಾವಿಧಿ ಪೂರ್ತಿ ಆಗಿರುವ ಸೇವಾ ಪುಸ್ತಕ
* ನಮೂನೆ-1
* ಅಶಕ್ತತಾ ಪ್ರಮಾಣಪತ್ರ
* ಸೇವಾ ವಿವರಣೆಗಳ ತಃಖ್ಯೆ ನಮೂನೆ-7
* ಪಿಂಚಣಿ ಲೆಕ್ಕಾಚಾರ ತಃಖ್ಯೆ
* ಸರಾಸರಿ ಉಪಲಬ್ದಗಳ ವಿವರ
* ಕೊನೆಯ ವೇತನ ಪ್ರಮಾಣ ಪತ್ರ
* ಕುಟುಂಬದ ಸದಸ್ಯರ ವಿವರ ತಃಖ್ಯೆ
* ಖಾಯಂ ವಿಳಾಸ
* ಖಜಾನೆ ವಿಳಾಸ
* ಯಾವುದೇ ಉಪದಾನ ಸ್ವೀಕರಿಸಿಲ್ಲದಿರುವ ಬಗ್ಗೆ ಘೋಷಣೆ
* ವಸೂಲಾತಿಗಾಗಿ ಒಪ್ಪಿಗೆ ಪತ್ರ
* ಬೇಬಾಕಿ ಪ್ರಮಾಣ ಪತ್












Click it and Unblock the Notifications