ಕರ್ನಾಟಕದಲ್ಲಿ ಕಾರ್ಮಿಕರು ಸರ್ಕಾರದ ಇಷ್ಟೆಲ್ಲಾ ಸೌಲಭ್ಯಗಳನ್ನು ಪಡೆಯಬಹುದು
ಬೆಂಗಳುರು, ಫೆಬ್ರವರಿ, 12: ಸರ್ಕಾರಿ ನೌಕರರಿಗೆ ಆಗಾಗ ಸರ್ಕಾರವು ಗುಡ್ ನ್ಯೂಸ್‌ಗಳನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಹಾಗಾದರೆ ನೋಂದಣಿಯಾದ ಕಾರ್ಮಿಕರು ಯಾವೆಲ್ಲಾ ಸರ್ಕಾರಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಫಲಾನುಭವಿಗಳಿಗೆ ಯಾವೆಲ್ಲಾ ಸೌಲಭ್ಯಗಳು ಸಿಗಲಿವೆ?
* ಪಿಂಚಣಿ ಸೌಲಭ್ಯ: 3 ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ 1,000 ರೂಪಾಯಿ.
* ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ 1,000 ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ 2,00,000 ರೂಪಾಯಿವರೆಗೆ ಅನುಗ್ರಹ ರಾಶಿ ಸಹಾಯಧನ.
* ಟ್ರೈನಿಂಗ್-ಕಮ್-ಟೂಲ್ಕಿಟ್ ಸೌಲಭ್ಯ: 20,000 ರೂಪಾಯಿವರೆಗೆ.
* ವಸತಿ ಸೌಲಭ್ಯ: 2,00,000 ರೂಪಾಯಿವರೆಗೆ ಮುಂಗಡ ಸೌಲಭ್ಯ.
* ಹೆರಿಗೆ ಸೌಲಭ್ಯ: ಮಹಿಳಾ ಫಲಾನುಭವಿಯ ಮೊದಲ ಎರಡು ಮಕ್ಕಳಿಗೆ ಹೆಣ್ಣು ಮಗುವಿನ ಜನನಕ್ಕೆ 30,000 ರೂಪಾಯಿ ಮತ್ತು ಗಂಡು ಮಗುವಿನ ಜನನಕ್ಕೆ 20,000 ರೂಪಾಯಿ.
* ಅಂತ್ಯಕ್ರಿಯೆ ವೆಚ್ಚ: 4,000 ರೂಪಾಯಿ ಹಾಗೂ ಅನುಗ್ರಹ ರಾಶಿ 50,000 ಸಹಾಯಧನ

ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಹಾಯಧನ
* 1, 2 ಹಾಗೂ 3ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ 2,000 ರೂಪಾಯಿ
* 4, 5 ಹಾಗೂ 6ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ 3,000 ರೂಪಾಯಿ
* 7 ಹಾಗೂ 8ನೇ ತರಗತಿ ಉತ್ತೀರ್ಣರಾದವರಿಗೆ 4,000 ರೂಪಾಯಿ
* 9, 10 ನೇ ತರಗತಿ ಹಾಗೂ ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6,000 ರೂಪಾಯಿ
* ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8,000 ರೂಪಾಯಿ
* ಐಟಿಐ ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7,000 ರೂಪಾಯಿ
* ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000 ರೂಪಾಯಿ
* ಸ್ನಾತಕೋತ್ತರ ಪದವಿ ಸೇರ್ಪಡೆಗೆ 20,000 ಹಾಗೂ ಪ್ರತಿ ವರ್ಷ 10,000 ರೂಪಾಯಿಗಳಂತೆ (ಎರಡು ವರ್ಷಗಳಿಗೆ)
* ಇಂಜಿನಿಯರಿಂಗ್ ಕೋರ್ಸ್‌ಗೆ ಸೇರ್ಪಡೆಯಾಗಲು 25,000 ಹಾಗೂ ಪ್ರತಿ ವರ್ಷ ತೇರ್ಗಡೆಗೆ 20,000 ರೂಪಾಯಿ
* ವೈದ್ಯಕೀಯ ಕೋರ್ಸ್‌ಗೆ ಸೇರ್ಪಡೆಗೆ 30,000 ರೂಪಾಯಿ ಹಾಗೂ ಪ್ರತಿ ವರ್ಷ ತೇರ್ಗಡೆಗೆ 25,000 ರೂಪಾಯಿ
* ಪಿಹೆಚ್‌ಡಿ ಕೋರ್ಸ್‌ಗೆ ಪ್ರತಿ ವರ್ಷಕ್ಕೆ 20,000 ರೂಪಾಯಿ (ಗರಿಷ್ಠ ಎರಡು ವರ್ಷಗಳು) ಮತ್ತು ಪಿಹೆಚ್‌ಡಿ ಪ್ರಬಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ 20,000 ರೂಪಾಯಿ
ಪ್ರತಿಭಾವಂತ ಮಕ್ಕಳಿಗೆ ಸಿಗುವ ಸಹಾಯಧನ
* ಎಸ್ಎಸ್‌ಎಸ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇಕಡ 75ರಷ್ಟು ಅಂಕ ಪಡೆದವರಿಗೆ 5,000 ರೂಪಾಯಿ
* ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇಕಡ 75ರಷ್ಟು ಅಂಕ ಪಡೆದವರಿಗೆ 7,000 ರೂಪಾಯಿ
* ಪದವಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಶೇಕಡ 75ರಷ್ಟು ಅಂಕ ಪಡೆದವರಿಗೆ 10,000 ರೂಪಾಯಿ
* ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಶೇಕಡ 75ರಷ್ಟು ಅಂಕ ಪಡೆದವರಿಗೆ 15,000 ರೂಪಾಯಿ
* ವೈದ್ಯಕೀಯ ಸಹಾಯಧನ: ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ 300ರಿಂದ 10,000 ರೂಪಾಯಿವರೆಗೆ
* ಅಪಘಾತ ಪರಿಹಾರ: ಮರಣ ಹೊಂದಿದ್ದಲ್ಲಿ 5,00,000 ರೂಪಾಯಿ, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ 2,00,000 ರೂಪಾಯಿ ಮತ್ತು ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ 1,00,000 ರೂಪಾಯಿ.
* ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ: ಹೃದ್ರೊಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತçಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಮೂಳೆ ಶಸ್ತ್ರಚಿಕಿತ್ಸೆ,, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸರ್, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇ.ಎನ್.ಟಿ. ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ, ಮೂಳೆ ಮುರಿತ/ಡಿಸ್ಲೊಕೇಶನ್ ಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆಗಳಿಗೆ 2,00,000 ರೂಪಾಯಿವರೆಗೆ
* ಮದುವೆ ಸಹಾಯಧನ: ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ 50,000 ರೂಪಾಯಿ
* LPG ಸಂಪರ್ಕ ಸೌಲಭ್ಯ: ಅನಿಲ ಸಂಪರ್ಕದೊಂದಿಗೆ ಎರಡು ಬರ್ನರ್ ಸ್ಟೌವ್
* ಬಿಎಂಟಿಸಿ ಬಸ್ ಪಾಸ್ ಸೌಲಭ್ಯ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವಂತಹ/ವಾಸಸ್ಥಳದಿಂದ ಬೆಂಗಳೂರಿಗೆ ಪ್ರಯಾಣಿಸುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ.
* ಕೆಎಸ್‌ಆರ್‌ಟಿಸಿ ಬಸ್ ಪಾಸ್ ಸೌಲಭ್ಯ
* ರಾಜ್ಯದಾದ್ಯಂತ ವಿದ್ಯಾಭ್ಯಾಸದಲ್ಲಿ ತೊಡಗಿರುವ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ.
* ತಾಯಿ ಮಗು ಸಹಾಯ ಹಸ್ತ: ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಠಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ 6,000 ರೂಪಾಯಿಗಳ ಸಹಾಯಧನ.












Click it and Unblock the Notifications