Gram Panchayat Service: ಗ್ರಾಮ ಪಂಚಾಯಿತಿಯಲ್ಲಿ ಸಿಗುವ ಸೌಲಭ್ಯಗಳು
Gram Panchayat Service: ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವ ಜನರು ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಯಲ್ಲಿ ಹಲವು ಸೌಲಭ್ಯಗಳನ್ನು ಪಡೆಯಬಹುದು. ಹಾಗಾದ್ರೆ ಯಾವೆಲ್ಲಾ ಸೇವೆಗಳು ನಿಮಗೆ ಲಭ್ಯ ಆಗಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಒಮ್ಮೆ ಕಣ್ಣಾಡಿಸಿ.
ಈವರೆಗೆ ಗ್ರಾಮ ಪಂಚಾಯಿತಿ ಸೇವೆಗಳ ಕುರಿತಂತೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ, ಇದೀಗ ಗ್ರಾಮ ಪಂಚಾಯಿತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭಗೊಳಿಸಲಾಗಿದೆ. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯ ಆಗುತ್ತದೆ. ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಯಾವೆಲ್ಲಾ ಸೌಲಭ್ಯಗಳು ಇವೆ?
1. ತೆರಿಗೆ ಪಾವತಿ
2. ಕಟ್ಟಡ ಪರವಾನಗಿ
3. ವಾಣಿಜ್ಯ ಪರವಾನಗಿ
4. ಕುಡಿಯುವ ನೀರಿನ ನಿರ್ವಹಣೆ, ಸಣ್ಣ ಪ್ರಮಾಣದ ರಿಪೇರಿಗಳು
5. ಬೀದಿ ದೀಪಗಳ ನಿರ್ವಹಣೆಗೆ, ಈ ಸಂಬಂಧ ಸಣ್ಣ ಪ್ರಮಾಣದ ರಿಪೇರಿಗಳು
6. ಗ್ರಮ ನೌರ್ಮಲ್ಯ
7. ಜನಗಣತಿ, ಜಾನುವಾರು ಗಣತಿ, ಬಡತನ ರೇಖೆಗಿಂತ ಕೆಳಗಿರುವ ವ್ಯಕ್ತಿಗಳಿಗೆ ದಸ್ತಾವೇಜುಗಳು ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಕಡ್ಡಾಯವಾಗಿ ನಿರ್ವಹಿಸಬೇಕಾದ ಇತರ ದಸ್ತಾವೇಜುಗಳನ್ನು ನೀಡುವುದು.
8. ಅಕುಶಲ ಕಾರ್ಮಿಕರಿಗೆ ಉದ್ಯೋಗವನ್ನು ಒದಗಿಸುವುದು (ಎಂಜಿಎನ್‌ಆರ್ ಇಜಿಎಸ್)
9. ಎಸ್ಕಾಂಗೆ ನಿರಾಪೇಕ್ಷಣಾ ಪ್ರಮಾಣ ಪತ್ರ
10. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸಿದ ಅಕುಶಲ ಕಾರ್ಮಿಕರ ನೋಂದಣಿ ಮತ್ತು ಉದ್ಯೋಗ ಚೀಟಿಗಳನ್ನು ನೀಡುವುದು.
11. ನಮೂನೆ- 9/ 11ಎ
12. ನಮೂನೆ - 11(ಬಿ)
ಗ್ರಾಮೀಣ ಜನರಿಗೆ ಗುಡ್ ನ್ಯೂಸ್: ಸರ್ಕಾರವು ಬಿ-ಖಾತಾ ನೀಡುವ ಅಭಿಯಾನ ಹಮ್ಮಿಕೊಂಡಿದೆ. ಗ್ರಾಮೀಣ ಆಸ್ತಿ ಮಾಲೀಕರಿಗೆ ಬಿ ಖಾತಾ ನೀಡುವ ಕುರಿತು ಸರ್ಕಾರ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವೊಂದನ್ನು ಇತ್ತೀಚೆಗಷ್ಟೇ ತೆಗೆದುಕೊಂಡಿದೆ. ಈ ಮೂಲಕ ಗುಡ್ ನ್ಯೂಸ್ ಕೂಡ ಕೊಟ್ಟಿದೆ.
ಅನಧಿಕೃತ ಬಡಾವಣೆ, ನಿವೇಶನ, ಮನೆಗಳಲ್ಲಿ ಜೀವನ ನಡೆಸುತ್ತಿರುವ ಗ್ರಾಮೀಣ ಪ್ರದೇಶದ ಜನತೆಗೆ ಬಿ ನಮೂನೆ ಇ-ಖಾತಾ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ -2025ಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸರ್ಕಾರದ ಈ ನಿರ್ಧಾರದ ಅನ್ವಯದ ಗ್ರಾಮೀಣ ಪ್ರದೇಶದ ಅನಧಿಕೃತ ಆಸ್ತಿಗಳಿಗೆ ಶುಲ್ಕ ಪಡೆದುಕೊಂಡು ಬಿ ನಮೂನೆಯಲ್ಲಿ ಇ-ಖಾತಾ ವಿತರಿಸಲಾಗುತ್ತದೆ. ಈ ಮೂಲಕ ಅವುಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುವುದು. ಈ ಕ್ರಮದಿಂದ ಆಸ್ತಿ ಮಾಲೀಕರ ಆತಂಕ ದೂರ ಆದಂಯತಾಗಲಿದೆ. ಜೊತೆಗೆ ಆಯಾ ಗ್ರಾಮ ಪಂಚಾಯತಿಗಳಿಗೆ ಆದಾಯ ಹೆಚ್ಚಲಿದೆ. ಸೌಲಭ್ಯ ಕಲ್ಪಿಸಲು ಸಹ ಅನುಕೂಲ ಆಗುತ್ತದೆ.
ಗ್ರಾಮೀಣ ಪ್ರದೇಶದಲ್ಲಿ 96 ಲಕ್ಷ ಅನಧಿಕೃತ ಆಸ್ತಿಗಳಿವೆ ಎಂದು ಹೇಳಲಾಗಿದ್ದು, ಗ್ರಾಮ ಪಂಚಾಯಿತಿಗಳು ಅಗತ್ಯ ಸೌಲಭ್ಯ ಕಲ್ಪಿಸಿದ್ದರೂ ಇ- ಸ್ವತ್ತು, ಗುರುತಿನ ಸಂಖ್ಯೆ ಅಥವಾ ಬಿ -ಖಾತಾ ಇಲ್ಲದ ಕಾರಣ ತೆರಿಗೆ ವಸೂಲಿ ಮಾಡಲು ಸಮಸ್ಯೆ ಆಗಿತ್ತು. ಆಸ್ತಿಗಳನ್ನು ಹೊಂದಿದ ಮಾಲೀಕರಿಗೆ ವಹಿವಾಟು, ಬ್ಯಾಂಕ್ ಸಾಲ ಪಡೆಯಲು ತೊಂದರೆ ಆಗಿತ್ತು. ಇ-ಖಾತಾ ನೀಡುವುದರಿಂದ ಈ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಲಾಗಿದೆ.












Click it and Unblock the Notifications