Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ & ತಿದ್ದುಪಡಿ ವಿಧಾನಗಳ ಕುರಿತು ಮಹತ್ವದ ಮಾಹಿತಿ ಇಲ್ಲಿದೆ
Ration Card: ಇದೀಗ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದೀಗ ಈ ಕಾರ್ಯವಿಧಾನ ಆರಂಭವಾಗಿದ್ದು, ಅರ್ಹರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಪಡಿತರ ಚೀಟಿಯಲ್ಲಿ ಏನಲ್ಲ ತಿದ್ದುಪಡಿ ಮಾಡಿಸಬಹುದು ಹಾಗೂ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಬಹುತೇಕ ಮಂದಿ ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಚೀಟಿಯಲ್ಲಿ ಸದಸ್ಯರನ್ನು ತೆಗೆದು ಹಾಕಲು ಹಾಗೂ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಕಾಯುತ್ತಿದ್ದಾರೆ. ಅಂತಹವರಿಗೆ ರಾಜ್ಯ ಸರ್ಕಾರ ಇದೋಗ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸುಧೀರ್ಘ ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಲ್ಲಿ ಸುದೀರ್ಘ ಪಡಿತರ ಚೀಟಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಆದರೆ, ತುಂಬಾ ಜನ ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿಯನ್ನಯ ತಿದ್ದುಪಡಿ ಮಾಡಲು ಸಾಧ್ಯವಾಗಿರಲಿಲ್ಲ ಅಂತವರಿಗೆ ಇದೀಗ ಮತ್ತೆ ಜನವರಿ 31 2025 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಮಾಡಿಕೊಡಿಕೊಟ್ಟಿದೆ.
ಪಡಿತರ ಚೀಟಿ ತಿದ್ದುಪಡಿ ಮಾಡಲು ಬಯಸುವವರು ಜನವರಿ 31ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್‌ಲೈನ್ ಕೇಂದ್ರಗಳಿಗೆ ತೆರಳಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5:30ರ ವೆರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದೆ.
ಪಡಿತರ ಚೀಟಿಯಲ್ಲಿ ಏನಲ್ಲಾ ತಿದ್ದುಪಡಿಗೆ ಅವಕಾಶವಿದೆ?
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಪಡಿತರ ಚೀಟಿ ವಿಳಾಸ ಬದಲಾವಣೆ
* ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿ ಬದಲಾವಣೆ
* ಕುಟುಂಬದ ಹೊಸ ಸದಸ್ಯರ ಸೇರ್ಪಡೆ
* ರೇಷನ್ ಕಾರ್ಡ್‌ನಿಂದ ಸದಸ್ಯರ ತೆಗೆದು ಹಾಕುವುದು
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಈ ಕೆವೈಸಿ ಮಾಡಲು ಅವಕಾಶ
* ರೇಷನ್ ಕಾರ್ಡ್‌ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
* ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇತರ ಬದಲಾವಣೆಗೆ ಮಾಡಿಸಬಹುದಾಗಿದೆ
ಹೊಸ ಸದಸ್ಯರ ಸೇರ್ಪಡೆ ಹೇಗೆ?
* ಅಧಿಕೃತ ವೆಬ್‌ಸೈಟ್ https://ahara.karnataka.gov.in/ ಭೇಟಿ ನೀಡಿ.
* ಪಬ್ಲಿಕ್ ಯೂಸ್ ಎಂಬ ಮೆನು ಬಾರ್ ಕೆಳಗೆ ಜಿಲ್ಲಾವಾರು ಮಾಹಿತಿ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಮತ್ತು ಪಡಿತರ ಚೀಟಿ ತಿದ್ದುಪಡಿ ಅಯ್ಕೆ ವಿಭಾಗಗಳು ಇವೆ.
* ಹೊಸ ರೇಷನ್ ಕಾರ್ಡ್ ಬೇಕಾದರೆ ಅಪ್ಲೈ ಫಾರ್ ನ್ಯೂ ರೇಷನ್ ಕಾರ್ಡ್ ಮತ್ತು ಪಡಿತರ ಚೀಟಿ ತಿದ್ದುಪಡಿಗಾದರೆ ಅಪ್ಲೈ ಫಾರ್ ರೇಷನ್ ಕಾರ್ಡ್ ಕರೆಕ್ಷನ್ಸ್ ಆಯ್ಕೆ ಸೆಲೆಕ್ಟ್ ಮಾಡಬೇಕಾಗುತ್ತದೆ.
* ಹೊಸ ಪೇಜ್‌ನಲ್ಲಿ ಕಾಣಸುವ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ.
* ನಂತರ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಬೇಕು.
* ಪರಿಷ್ಕೃತ ಪಡಿತರ ಚೀಟಿ, ಹೊಸ ಪಡಿತರ ಚೀಟಿ ವಿತರಣೆ ಆಗುತ್ತದೆ.
ಯಾರೆಲ್ಲಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು?: ಕರ್ನಾಟಕದ ರಾಜ್ಯದ ಕಾಯಂ ನಿವಾಸಿಗಳು ಮಾತ್ರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಮಾತ್ರವಲ್ಲದೆ, ಕರ್ನಾಟಕ ರಾಜ್ಯದ ನಾಗರಿಕರು ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು ಇ-ಪಡಿತರ ಚೀಟಿಯನ್ನು ಡೌನ್‌ಲೋಡ್ ಮಾಡಬಹುದು. ಇ-ಪಡಿತರ ಚೀಟಿಯನ್ನೇ ಬಳಕೆ ಮಾಡಬಹುದು. ಅರ್ಜಿದಾರರು ತಮ್ಮ ಮೂಲ ಪಡಿತರ ಚೀಟಿಯನ್ನು ಎಲ್ಲೆಡೆ ಕೊಂಡೊಯ್ಯಬೇಕಾಗಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳು
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್
* ಕುಟುಂಬದ ಸದಸ್ಯರ ಜಾತಿ ಪ್ರಮಾಣ ಪತ್ರ
* ಕುಟುಂಬದ ಸದಸ್ಯರ ಆದಾಯ ಪ್ರಮಾಣ ಪತ್ರ
* ಮಕ್ಕಳ ಜನನ ಪ್ರಮಾಣ ಪತ್ರ
* ಮೊಬೈಲ್ ನಂಬರ್
* ರೇಷನ್ ಕಾರ್ಡ್
* ಇತರ ಅಗತ್ಯ ದಾಖಲಾತಿಗಳು












Click it and Unblock the Notifications