ಸಕಾಲ ಯೋಜನೆ ಮಾಹಿತಿ ಅಂಗೈನಲ್ಲಿ; ಹೊಸ ಅಪ್‌ಡೇಟ್
ಬೆಂಗಳೂರು, ಡಿಸೆಂಬರ್ 05; ಕರ್ನಾಟಕ ಸರ್ಕಾರ ಸಕಾಲ ಯೋಜನೆಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಎಸ್‌ಎಂಎಸ್ ಮೂಲಕ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಕಾಲ ಮಿಷನ್‌ನ ಹೊಸ ಅಪ್‌ಡೇಟ್ ಬಗ್ಗೆ ವಿವರಗಳು ಇಲ್ಲಿವೆ.
ಸಕಾಲ ಮಿಷನ್‌ನ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕುರಾತಿ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್‌ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ.

ಮೇಲ್ಮನವಿ ಸಲ್ಲಿಕೆ ಹೇಗೆ?; ಸಕಾಲ ದಡಿ ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರಿಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಅಪೀಲು ಹಾಕಲು ಲಿಂಕ್ ಅನ್ನು ಎಸ್‌ಎಂಎಸ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ವಯಂಚಾಲಿತವಾಗಿ ಎಸ್‌ಎಂಎಸ್ ಕಳುಹಿಸುವ ಸೇವೆಯನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಚಾಲನೆ ನೀಡಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಇದುವರೆಗೆ ಒಟ್ಟು 3,18,420 ಎಸ್‌ಎಂಎಸ್‌ಗಳನ್ನು ಕಳುಹಿಸಲಾಗಿದೆ.
ಸಾರಿಗೆ ಇಲಾಖೆಯಲ್ಲಿ ಅರ್ಜಿಗಳ ಮಾಹಿತಿಯನ್ನು ಸಕಾಲ ತಂತ್ರಾಂಶಕ್ಕೆ ಮ್ಯಾನ್ಯುಯಲ್ ಆಗಿ ಪುಶ್ ಮಾಡುತ್ತಿದ್ದು, ಇದನ್ನು ಈಗ ಬದಲಾಯಿಸಲಾಗಿದೆ. ಇದರಿಂದ, ಸಕಾಲದಲ್ಲಿ ಬಾಕಿ ಇದ್ದ ಅರ್ಜಿಗಳ ಸಂಖ್ಯೆಯು ಗಣನೀಯವಾಗಿ ಇಳಿಕೆಗೊಂಡು 9691 ರಿಂದ 2682 ಗಳಿಗೆ ಇಳಿಕೆಯಾಗಿದೆ ಎಂದು ಪಲ್ಲವಿ ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿರುವ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆಯನ್ನು ಗಮನಿಸಿ ಸಕಾಲ ಮಿಷನ್ ಹೊಸ ಹೊಸ ಸೇವೆಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಸ್ತಿತ್ವದಲ್ಲಿರುವ ದೂರ ಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ ನಿಯಮಿತಗೊಳಿಸುವಿಕೆ ಮತ್ತು ಹೊಸ/ ಅಸ್ತಿತ್ವದಲ್ಲಿರುವ ಓವರ್‌ಗ್ರೌಂಡ್ ಕೇಬಲ್ ಮೂಲಸೌಕರ್ಯ/ ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ/ ನಿಯಮಿತಗೊಳಿಸುವಿಕೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಲ್ಪ ಸಂಖ್ಯಾತರ ಇಲಾಖೆಯಿಂದ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆ, ಎಂಫಿಲ್ ಮತ್ತು ಪಿಹೆಚ್‌ಡಿ ಫೆಲೋಶಿಪ್ ಯೋಜನೆ ಹಾಗೂ ಐಐಟಿ, ಐಐಎಂ, ಐಐಎಸ್‌ಸಿ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಸಹ ಸಕಾಲದ ಅಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಸ್ಟಾರ್ಟ್ ಅಪ್ ನೋಂದಣಿ ಮತ್ತು ಗೃಹ ಇಲಾಖೆಯಿಂದ ಬಾಡಿಗೆದಾರರ ಪೂರ್ವಾಪರ ಪರಿಶೀಲನೆ ಸೇರಿದಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಉದ್ಯೋಗಾಕಾಂಕ್ಷಿಯ ನೋಂದಣಿ ದಾಖಲೆಯ ವರ್ಗಾವಣೆ, ಉದ್ಯೋಗಾಕಾಂಕ್ಷಿಗಳ ನೋಂದಣಿ, ಉದ್ಯೋಗಾಕಾಂಕ್ಷಿಗಳ ಮರುನೋಂದಣಿ ಮತ್ತು ಉದ್ಯೋಗಾಕಾಂಕ್ಷಿಗಳ ನೋಂದಣಿ ಪತ್ರದ ನವೀಕರಣ ಯೋಜನೆಗಳನ್ನು ಸಹ ಸಕಾಲ ವ್ಯಾಪ್ತಿಗೆ ತರಲಾಗಿದೆ.
ಸಕಾಲ ಯೋಜನೆ ಅನುಷ್ಠಾನದಲ್ಲಿ ನವೆಂಬರ್ 2023ರಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನವನ್ನುಗಳಿಸಿದೆ. ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಜೂನ್-2023ರ ತಿಂಗಳಿನಲ್ಲಿ ಅರ್ಜಿ ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್‌ನಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ ನೀಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications