Ration Card: ಹೊಸ ಬಿಪಿಎಲ್, ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ?-ಇಲ್ಲಿದೆ ಮಾಹಿತಿ
Ration Card: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಇನ್ನು ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿನಿಸಿ.
ಲೋಕಸಭೆ ಚುನಾವಣೆ ಬಳಿಕ ಹೊಸ ಪಡಿತರ ಚೀಟಿಗೆ ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೆ ಸರ್ವರ್ ಡೌನ್ ಆಗಿದ್ದರಿಂದ ಹೆಚ್ಚಿನ ಜನ ಅರ್ಜಿ ಸಲ್ಲಿಸದೇ ವಂಚಿತರಾಗಿದ್ದರು. ಇದೀಗ ಹೊಸ ರೇಷನ್ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ಕಲ್ಪಿಲಾಗಿದೆ.

ahara.kar.nic.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾ ಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ ಈ ರೇಷನ್ ಕಾರ್ಡ್‌ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್‌ಗಳ ವಿತರಣೆಯನ್ನು ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15ರಿಂದ 30ರೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.
ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ಅರ್ಹತೆಗಳೇನು?
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಿರಲಿದೆ.
ಯಾವೆಲ್ಲಾ ದಾಖಲೆಗಳು ಬೇಕು?
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದೇಗೆ?
* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
* ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ.
* ಅಲ್ಲದೇ https://ahara.kar.nic.in/Home/EServices ವೆಬ್‌ಸೈಟ್‌ಗೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
* ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ, ಕೆಳಗಡೆ ಸ್ಕ್ರಾಲ್ ಮಾಡಿ.
* ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿ, ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
* ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
* ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ.











Click it and Unblock the Notifications