ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಂದ ಸೆಲೆಬ್ರಿಟಿಗಳು ಯಾರೆಂದು ತಿಳಿಯಿರಿ
ಬೆಂಗಳೂರು, ಮೇ 20: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಲವಾರು ಜನಪ್ರಿಯ ನಟರು ಮತ್ತು ಗಣ್ಯರು ಭಾಗವಹಿಸಿದ್ದರು.
ಮಕ್ಕಳ್ ನೀದಿ ಮೈಯಂ ಮುಖ್ಯಸ್ಥ ಹಿರಿಯ ನಟ ಕಮಲ್ ಹಾಸನ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಅವರು ಕನ್ನಡದ ನಟ ದುನಿಯಾ ವಿಜಯ್ ಅವರ ಪಕ್ಕದಲ್ಲಿ ಕುಳಿತಿದ್ದರು. ಕಮಲ್ ಹಾಸನ್ ಅವರು ಬಹುಭಾಷಾ ನಟರು. ಅವರು ತಮ್ಮ ನಟನೆಗೆ ಭಾರೀ ಜನಮನ್ನಣೆ ಗಳಿಸಿದ್ದಾರೆ. ದುನಿಯಾ ವಿಜಯ್ ಅವರು ಕನ್ನಡದ ಖ್ಯಾತ ನಟ. ಸಿಎಂ ಸಿದ್ದರಾಮಯ್ಯ ಪರ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು.

ಕನ್ನಡದ ಜನಪ್ರಿಯ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರ ಸಹೋದರ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ನಟ ಶಿವರಾಜ್‌ಕುಮಾರ್ ಅವರು ಮಧು ಬಂಗಾರಪ್ಪ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.
ಹಾಸ್ಯ ನಟ ಸಾಧು ಕೋಕಿಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ಸಿನ ಮಾಜಿ ಶಾಸಕಿ ಹಾಗೂ ಸಚಿವೆ ಉಮಾಶ್ರೀ ಅವರು ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಉಮಾಶ್ರೀ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ವಿಜಯಪುರ ಜಿಲ್ಲೆಯ ತೇರದಾಳದಿಂದ ಈ ಹಿಂದೆ ಶಾಸಕಿಯಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ.

ಕಾಂಗ್ರೆಸ್‌ನ ಮಾಜಿ ಸಂಸದೆ, ನಟಿ ರಮ್ಯಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಮ್ಯಾ ಅವರು ಮಂಡ್ಯ ಲೋಕಸಭಾ ಸದಸ್ಯರಾಗಿ ಒಮ್ಮೆ ಆಯ್ಕೆಯಾಗಿದ್ದರು. ಅವರು ಕಾಂಗ್ರೆಸ್‌ನ ಸೋಶಿಯಲ್ ಮಿಡಿಯಾವನ್ನು ಹ್ಯಾಂಡಲ್ ಮಾಡುತ್ತಿದ್ದರು.
ಶನಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸೇರಿದಂತೆ ಎಂಟು ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಅಧಿಕಾರ ವಹಿಸಿಕೊಂಡ ಎಂಟು ಶಾಸಕರು
ಜಿ ಪರಮೇಶ್ವರ (ಎಸ್‌ಸಿ), ಕೆಎಚ್ ಮುನಿಯಪ್ಪ (ಎಸ್‌ಸಿ), ಕೆಜೆ ಜಾರ್ಜ್ (ಅಲ್ಪಸಂಖ್ಯಾತ-ಕ್ರಿಶ್ಚಿಯನ್), ಎಂ ಬಿ ಪಾಟೀಲ್ (ಲಿಂಗಾಯತ), ಸತೀಶ್ ಜಾರಕಿಹೊಳಿ (ಎಸ್‌ಟಿ-ವಾಲ್ಮೀಕಿ), ಪ್ರಿಯಾಂಕ್ ಖರ್ಗೆ (ಎಸ್‌ಸಿ, ಮತ್ತು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ) ರಾಮಲಿಂಗಾ ರೆಡ್ಡಿ (ರೆಡ್ಡಿ), ಮತ್ತು ಜಮೀರ್ ಅಹಮದ್ ಖಾನ್ (ಅಲ್ಪಸಂಖ್ಯಾತ-ಮುಸ್ಲಿಂ)












Click it and Unblock the Notifications