ಕರ್ನಾಟಕಕ್ಕೆ ಮಾರಕವಾಗಲಿರುವ ಕಾವೇರಿ ನಿರ್ವಹಣಾ ಮಂಡಳಿ ರಚನೆ
ಬೆಂಗಳೂರು, ಸೆ. 22: ಕಾವೇರಿ ನಿರ್ವಹಣಾ ಮಂಡಳಿ ರಚನೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡು ಆಗ್ರಹಪೂರ್ವಕ ಮನವಿ ಸಲ್ಲಿಸಿದ್ದರೆ, ಕರ್ನಾಟಕ ವಿರೋಧಿಸುತ್ತಾ ಬಂದಿದೆ. ಒಮ್ಮೆ ಏನಾದರೂ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದರೆ, ಕರ್ನಾಟಕಕ್ಕೆ ಮಾರಕವಾಗಲಿದೆ.
ವಿಸ್ತೃತ ನ್ಯಾಯಪೀಠದ ತೀರ್ಪು ಬಾಕಿ ಇರುವಾಗ ದ್ವಿಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸುವ ಅವಕಾಶವಿತ್ತು. ಆದರೆ, ಕರ್ನಾಟಕದ ವಕೀಲರು ಈ ಬಗ್ಗೆ ಅರ್ಜಿಯನ್ನು ಸಲ್ಲಿಸಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಅರ್ಜಿ ಸಲ್ಲಿಸದಿರುವುದು ಈಗ ಮುಳುವಾಗಲಿದೆ

ಕಾವೇರಿ ನಿರ್ವಹಣಾ ಮಂಡಳಿ(ಸಿಎಂಬಿ) ರಚನೆ: ಈ ಮಂಡಳಿಯಲ್ಲಿ ನಾಲ್ಕು ರಾಜ್ಯಗಳ ಸದಸ್ಯರು, ಕೃಷಿ ಮತ್ತು ನೀರಾವರಿ ತಜ್ಞರು, ಜಲ ಆಯೋಗದ ಅಧಿಕಾರಿಗಳು ಇರಲಿದ್ದಾರೆ. ಎಲ್ಲರನ್ನು ಕೇಂದ್ರ ಸರ್ಕಾರ ನೇಮಿಸಲಿದೆ.
ಒಮ್ಮೆ ಈ ಮಂಡಳಿ ರಚನೆಯಾದರೆ ಕಾವೇರಿ ಮೇಲುಸ್ತುವಾರಿ ಸಮಿತಿ ಬೆಲೆ ಕಳೆದುಕೊಳ್ಳಲಿದೆ. ಕಾವೇರಿ ನೀರು ಇರುವ ಕೆಆರ್ ಎಸ್, ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟಿನ ಮೇಲೆ ಕರ್ನಾಟಕ ಸರ್ಕಾರ ನಿಯಂತ್ರಣ ಕಳೆದುಕೊಳ್ಳಲಿದೆ. ಅಲ್ಲದೇ ಉದ್ದೆಶಿತ ಮೇಕೇದಾಟು ಯೋಜನೆ ಸ್ಥಗಿತಗೊಳಿಸಬೇಕಾಗುತ್ತದೆ. ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆಯಿದೆ. ಜತೆಗೆ ತಮಿಳುನಾಡಿಗೆ ಯಾವಾಗ ನೀರು ಬಿಡಬೇಕು? ಎಷ್ಟು ನೀರು ಬಿಡಬೇಕು ಎಂಬುದನ್ನು ಮಂಡಳಿ ನಿರ್ಧರಿಸಲಿದೆ.
ಕರ್ನಾಟಕದ ಅಗತ್ಯ ಎಷ್ಟಿದೆ?: ಮೇ 2017ರ ತನಕ 30ಟಿಎಂಸಿಅಡಿ ನೀರಿನ ಅಗತ್ಯವಿದೆ ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 48 ನಗರ ಪ್ರದೇಶ, 635 ಗ್ರಾಮೀಣ ಭಾಗಗಳು ಕಾವೇರಿ ಜಲಾನಯನ ಪ್ರದೇಶದ ಮೇಲೆ ಅವಲಂಬಿತವಾಗಿವೆ. ತಮಿಳುನಾಡಿಗೆ 192 ಟಿಎಂಸಿ ಅಡಿ ನೀರು ಹರಿಸಬೇಕು ಎಂದು ಪ್ರಾಧಿಕಾರ ನೀಡಿದ ತೀರ್ಪಿಗೆ ತಲೆಬಾಗುವುದಿರಲಿ, ಪೂತ್ರಿ ಬೋರಲು ಮಲಗಬೇಕಾಗುತ್ತದೆ.












Click it and Unblock the Notifications