ಕೊಡಗು ನಿಜವಾಗಿಯೂ ಕಾಂಗ್ರೆಸ್ ಮುಕ್ತವಾಯಿತೆ? ಹೇಗೆ?

ಕೊಡಗು, ಫೆಬ್ರವರಿ 24 : ಪ್ರಧಾನಿ ನರೇಂದ್ರ ಮೋದಿ ಅವರ ಕಾಂಗ್ರೆಸ್ ಮುಕ್ತ ಭಾರತದ ಕನಸು ಕೊಡಗಿನಲ್ಲಿ ನನಸಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಕೊಡಗು ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತಗೊಳಿಸಿದೆ.

29 ಸದಸ್ಯ ಬಲದ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ 18 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ. ಜಿಲ್ಲೆಯ 3 ತಾಲೂಕು ಪಂಚಾಯಿತಿಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಿದೆ. ಈ ಮೂಲಕ ಕೊಡಗು ಜಿಲ್ಲೆ ಕಾಂಗ್ರೆಸ್ ಮುಕ್ತವಾಗಿದೆ. [ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಅಮಿತ್ ಶಾ ಕರೆ]

bjp

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಈ ಕುರಿತು ಟ್ವಿಟ್ ಮಾಡಿದ್ದಾರೆ. ನರೇಂದ್ರ ಮೋದಿ ಅವರ ಹ್ಯಾಂಡಲ್ ಹಾಕಿ ಟ್ವಿಟ್ ಮಾಡಿ ಕೊಡಗು ಕಾಂಗ್ರೆಸ್ ಮುಕ್ತವಾಗಿದೆ ಎಂದು ಹೇಳಿದ್ದಾರೆ. [ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯ ಈಡೇರದ ಕನಸು!]

2014ರ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮತ್ತು ನಂತರದ ದಿನಗಳಲ್ಲಿ ಭಾರತವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು ಎಂದು ನರೇಂದ್ರ ಮೋದಿ ಕರೆ ನೀಡಿದ್ದರು. 2015ರ ಜನವರಿಯಲ್ಲಿ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು 'ಕಾಂಗ್ರೆಸ್ ಮುಕ್ತ ಕರ್ನಾಟಕ' ನಮ್ಮ ಗುರಿ ಎಂದು ಹೇಳಿದ್ದರು. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ಕಾಂಗ್ರೆಸ್ ಮುಕ್ತ ಹೇಗೆ? : ಕೊಡಗು ಜಿಲ್ಲೆಯಲ್ಲಿ ಒಬ್ಬ ಸಂಸದ, ಒಬ್ಬರು ವಿಧಾನಪರಿಷತ್ ಸದಸ್ಯರು, ಇಬ್ಬರು ಶಾಸಕರು ಬಿಜೆಪಿಯವರಾಗಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲೂ ಬಿಜೆಪಿ ಅಧಿಕಾರ ಪಡೆದಿದೆ. ಆದ್ದರಿಂದ ಕೊಡಗು ಕಾಂಗ್ರೆಸ್ ಮುಕ್ತವಾಗಿದೆ.

ಕಾಂಗ್ರೆಸಿಗೆ ಅಧಿಕಾರವಿಲ್ಲ : ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಗಳಿಸಿಲ್ಲ. ಪಕ್ಷಕ್ಕೆ ಯಾವುದೇ ಅಧಿಕಾರವಿಲ್ಲ. ಆದ್ದರಿಂದ ಕಾಂಗ್ರೆಸ್ ಮುಕ್ತ ಕೊಡಗು ಎಂದು ವಿಶ್ಲೇಷಿಸಬಹುದಾಗಿದೆ.

ಕೊಡಗಿನಲ್ಲಿ ಬಿಜೆಪಿ ಬಲಾಬಲ

* ಸಂಸದ - ಪ್ರತಾಪ್ ಸಿಂಹ
* ವಿಧಾನಪರಿಷತ್ ಸದಸ್ಯ - ಸುನೀಲ್ ಸುಬ್ರಮಣಿ
* ಶಾಸಕರು : ಅಪ್ಪಚ್ಚು ರಂಜನ್ (ಮಡಿಕೇರಿ), ಕೆ.ಜಿ.ಬೋಪಯ್ಯ (ವಿರಾಜಪೇಟೆ)
* ಜಿಲ್ಲೆಯ 3 ತಾಲೂಕು ಪಂಚಾಯಿತಿಯಲ್ಲಿ ಬಿಜೆಪಿಗೆ ಜಯ
* ಜಿಲ್ಲಾ ಪಂಚಾಯಿತಿ 29 ಕ್ಷೇತ್ರಗಳ ಪೈಕಿ 18ರಲ್ಲಿ ಬಿಜೆಪಿಗೆ ಜಯ (ಕಾಂಗ್ರೆಸ್ 10, ಜೆಡಿಎಸ್ 1)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+