ಕೊಡಗು ಪ್ರವಾಹ : ಸಹಕಾರದ ಭರವಸೆ ನೀಡಿದ ನರೇಂದ್ರ ಮೋದಿ
ಬೆಂಗಳೂರು, ಆಗಸ್ಟ್ 19 : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದರು. ಕೊಡಗಿನಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಾಹಿತಿ ಪಡೆದರು.
ಭಾನುವಾರ ಮಡಿಕೇರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸುವಾಗ ನರೇಂದ್ರ ಮೋದಿ ಅವರು ಕರೆ ಮಾಡಿದರು. ಕೆಲವು ನಿಮಿಷಗಳ ಕಾಲ ನಡೆದ ಸಂಭಾಷಣೆಯಲ್ಲಿ ಕುಮಾರಸ್ವಾಮಿ ಅವರು ಕೊಡಗಿನ ಸದ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದರು.
ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ ಮಾತನಾಡಿದ ಮೋದಿ, ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದು ಕೇಂದ್ರ ಸರ್ಕಾರವು ರಕ್ಷಣೆಗೆ ಹಾಗೂ ಪರಿಹಾರ ಕಾರ್ಯಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಕುರಿತು ಮಾಹಿತಿ ನೀಡಿದ ಕುಮಾರಸ್ವಾಮಿ ಅವರು, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆ ಯಲ್ಲಿ ತೊಡಗಿದ್ದು 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.
ನರೇಂದ್ರ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.
Spoke to Karnataka CM Shri @hd_kumaraswamy Ji regarding the flood situation in parts of the state. Extended all possible support in the rescue and relief operations. I pray for the safety and well-being of those in the flood affected areas. @CMofKarnataka
— Narendra Modi (@narendramodi) August 19, 2018












Click it and Unblock the Notifications