ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಪ್ರವಾಹ : ಸಹಕಾರದ ಭರವಸೆ ನೀಡಿದ ನರೇಂದ್ರ ಮೋದಿ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 19 : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿದರು. ಕೊಡಗಿನಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಾಹಿತಿ ಪಡೆದರು.

ಭಾನುವಾರ ಮಡಿಕೇರಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸುವಾಗ ನರೇಂದ್ರ ಮೋದಿ ಅವರು ಕರೆ ಮಾಡಿದರು. ಕೆಲವು ನಿಮಿಷಗಳ ಕಾಲ ನಡೆದ ಸಂಭಾಷಣೆಯಲ್ಲಿ ಕುಮಾರಸ್ವಾಮಿ ಅವರು ಕೊಡಗಿನ ಸದ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದರು.

ಕೊಡಗು ಪ್ರವಾಹ : ಪರಿಸ್ಥಿತಿ ಮಾಹಿತಿ ಪಡೆದ ರಾಷ್ಟ್ರಪತಿಗಳು ಕೊಡಗು ಪ್ರವಾಹ : ಪರಿಸ್ಥಿತಿ ಮಾಹಿತಿ ಪಡೆದ ರಾಷ್ಟ್ರಪತಿಗಳು

ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ ಮಾತನಾಡಿದ ಮೋದಿ, ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದು ಕೇಂದ್ರ ಸರ್ಕಾರವು ರಕ್ಷಣೆಗೆ ಹಾಗೂ ಪರಿಹಾರ ಕಾರ್ಯಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

Kodagu floods : PM Narendra Modi call to HD Kumaraswamy

ಕೊಡಗಿನ ಜಲಪ್ರಳಯವನ್ನೂ ನರೇಂದ್ರ ಮೋದಿಯವರು ವೀಕ್ಷಿಸಲಿಕೊಡಗಿನ ಜಲಪ್ರಳಯವನ್ನೂ ನರೇಂದ್ರ ಮೋದಿಯವರು ವೀಕ್ಷಿಸಲಿ

ಈ ಕುರಿತು ಮಾಹಿತಿ ನೀಡಿದ ಕುಮಾರಸ್ವಾಮಿ ಅವರು, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆ ಯಲ್ಲಿ ತೊಡಗಿದ್ದು 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ನರೇಂದ್ರ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

English summary
Prime Minister of India Narendra Modi called for Karnataka Chief Minister H.D.Kumaraswamy and discuss about Kodagu floods. Narendra Modi said that ready to extended all possible support in the rescue and relief operations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X