ಕೊಡಗು ಪ್ರವಾಹದಿಂದ 3 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ

ಬೆಂಗಳೂರು, ಆಗಸ್ಟ್ 24: ಕೊಡಗಿನಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತ ಮುಂತಾದವುಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂಬುದಾಗಿ ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಕೊಡಗಿನಲ್ಲಿ ಪ್ರವಾಹ ದುರಂತದಿಂದ ಮೂರು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ನೆರವಾಗಲು 2 ಸಾವಿರ ಕೋಟಿ ರೂ. ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರು ಮತ್ತು ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

kodagu floods Rs 3000 crores loss hd kumaraswamy

ಮುಖ್ಯಮಂತ್ರಿಗಳ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಇದುವರೆಗೂ 25.16 ಕೋಟಿ ರೂಪಾಯಿ ದೇಣಿಗೆ ಬಂದಿದೆ. ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನದಿಂದ 102 ಕೋಟಿ ರೂ. ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇದಕ್ಕೂ ಮೊದಲು ಕೊಡಗಿಗೆ ಭೇಟಿ ನೀಡಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಲ್ಲಿ ಉಂಟಾದ ಹಾನಿಯನ್ನು ಪರಿಶೀಲಿಸಿದ್ದರು. ಬಳಿಕ ತಮ್ಮ ಸಂಸದರ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡುವುದಾಗಿ ಪ್ರಕಟಿಸಿದ್ದರು.

ರಕ್ಷಣಾ ಕಾರ್ಯತಂಡಕ್ಕೆ ಏಳು ಕೋಟಿ ರೂ. ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕೊಡಗಿಗೆ ಭೇಟಿ ನೀಡಲಿದ್ದು, ಅಧ್ಯಯನ ನಡೆದಿ ವರದಿ ಸಲ್ಲಿಸಲಿದೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+