Siddaramaiah: ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕೊಡವ ಕೌಟುಂಬಿಕ ಹಾಕಿ: ಸಿದ್ದರಾಮಯ್ಯ ಸಂತಸ

ಬೆಂಗಳೂರು, ಜನವರಿ 9: ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ವರ್ಷ ಕುಂಡ್ಯೋಳಂಡ ಕೊಡವ ಕುಟುಂಬದ ವತಿಯಿಂದ ನಡೆಯುವ ಈ ಪಂದ್ಯಾವಳಿ ವಿಶ್ವ ದಾಖಲೆಯಾಗಿ
ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪಂದ್ಯಾವಳಿ ಸಂಘಟಿಸಲು ಕುಂಡ್ಯೋಳಂಡ ಕೊಡವ ಕುಟುಂಬಕ್ಕೆ 1 ಕೋಟಿ ರೂಪಾಯಿಗಳ ಚೆಕ್ ಅನ್ನು ಯುವ ಸಬಲೀಕರಣ ಇಲಾಖೆ ವತಿಯಿಂದ ವಿತರಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾಕಿ ಹುಟ್ಟಿದ್ದು ಭಾರತ ದೇಶದಲ್ಲಿ.ಧ್ಯಾನಚಂದ್‌ ಅವರಂತಹ ಹಾಕಿ ಮಾಂತ್ರಿಕ ಹುಟ್ಟಿದ ದೇಶ ನಮ್ಮದು. ಕ್ರಿಕೆಟ್ ಅಷ್ಟೇ ಅಲ್ಲ, ಹಾಕಿ ಯಾರೂ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಈ ಪರಂಪರೆ ಮುಂದುವರೆಸಿಕೊಂಡು ಹೋಗಿ ಎಂದು ಹಾರೈಸಿದರು.

Kodava Family Hockey In The Guinness Book Of Records

ಕೊಡಗು ಜಿಲ್ಲೆಯಲ್ಲಿ ಕುಂಡ್ಯೋಳಂಡ ಕೊಡವ ಕುಟುಂಬಗಳು ಪ್ರತಿ ವರ್ಷ ಸಾಂಪ್ರದಾಯಿಕ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಬಹಳಷ್ಟು ಕೊಡವರು ರಾಷ್ಟ್ರೀಯ ಹಾಕಿ ತಂಡದಲ್ಲಿ ಆಟ ಆಡಿದ್ದಾರೆ. ರಾಜ್ಯ ಸರ್ಕಾರ ಹಾಕಿ ಪಂದ್ಯಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕಳೆದ ವರ್ಷ ಕೊಡವ ಹಾಕಿ ಕ್ರೀಡಾಕೂಟದಲ್ಲಿ 360 ತಂಡಗಳು, 4800 ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಇದು ಗಿನ್ನೆಸ್‌ ಬುಕ್‌ನಲ್ಲಿ ದಾಖಲಾಗಿದೆ. ಹಾಕಿ ಪಂದ್ಯಾವಳಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲಾ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

‌ಸಂಸದ ಅಜಯ್ ಮಾಕನ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣು ಪ್ರಕಾಶ್ ಪಾಟೀಲ್, ಸಚಿವರಾದ ಬೈರತಿ ಸುರೇಶ್ , ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ : ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ

ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆಯನ್ನ ನೀಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚಿಸಿದರು.

2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+