ಡಾ.ಕಸ್ತೂರಿ ರಂಗನ್ ವರದಿಗೆ ಕೊಡವರ ವಿರೋಧ

ಕೊಡಗು, ನ.27 : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಡಾ.ಕಸ್ತೂರಿರಂಗನ್‌ ಸಮಿತಿ ನೀಡಿರುವ ವರದಿಯ ಬಗ್ಗೆ ಕೊಡಗು ಜಿಲ್ಲೆಯ ಜನರ ಅಹವಾಲು ಆಲಿಸಲು ರಾಜ್ಯಮಟ್ಟದ ತಜ್ಞರ ಸಮಿತಿ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಲಿದೆ. ವರದಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೊಡಗಿನ ಜನರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಜನರ ಅಹವಾಲು ಆಲಿಸಲು ರಾಜ್ಯಮಟ್ಟದ ತಜ್ಞರ ಸಮಿತಿಯ ಸದಸ್ಯರಾಗಿರುವ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌ ಹಾಗೂ ವಿಪಿನ್‌ ಸಿಂಗ್‌ ಶುಕ್ರವಾರ ಆಗಮಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಕೋಟೆ ಸಭಾಂಗಣದಲ್ಲಿ ಜನರನ್ನು ಭೇಟಿ ಮಾಡಲಿದ್ದಾರೆ.

Kodagu

ಕಸ್ತೂರಿ ರಂಗನ್ ವರದಿ ವಿರೋಧಿಸುತ್ತಿರುವ ಸಮಿತಿ ಅಹವಾಲು ಸಲ್ಲಿಸುವವರ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಈ ಸಮಿತಿ ಜನರ ಅಹವಾಲನ್ನು ಆಲಿಸಿ ಸರ್ಕಾರಕ್ಕೆ ನೀಡಲಿದ್ದು, ಸರ್ಕಾರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ. [ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ]

ಸಮಿತಿ ಭೇಟಿಯ ಕುರಿತು ಜಿಲ್ಲಾಧಿಕಾರಿ ಅನುರಾಗ್‌ ತಿವಾರಿ ಅವರು ಮಾಹಿತಿ ನೀಡಿದ್ದು, ಜನರ ಅಭಿಪ್ರಾ­ಯವನ್ನು ಪಡೆಯಲು ನೇರವಾಗಿ ರಾಜ್ಯ ಸಮಿತಿ ಸದಸ್ಯರೇ ಇಲ್ಲಿಗೆ ಆಗಮಿಸು­ತ್ತಿದ್ದಾರೆ. ಜನರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊ­ಳ್ಳಬ­ಹುದು. ಆಕ್ಷೇಪಣೆ ಇದ್ದರೂ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಸಭೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ ಮತ್ತು ಇದರ ಒಂದು ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಯಾವುದೇ ರೀತಿಯ ಗಲಾಟೆಗೆ ಅವಕಾಶ ನೀಡುವುದಿಲ್ಲ, ಅಗತ್ಯ ಪೊಲೀಸ್‌ ಬಂದೋಬಸ್ತ್‌ ಮಾಡಲಾಗುತ್ತದೆ ಎಂದು ಅನುರಾಗ್ ತಿವಾರಿ ತಿಳಿಸಿದ್ದಾರೆ.

ಏನಿದು ವರದಿ : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಮಾಧವ ಗಾಡ್ಗೀಳ್ ವರದಿ ಬಂದ ನಂತರ ಕೇಂದ್ರ ಸರ್ಕಾರ 2012 ಆಗಸ್ಟ್ 17ರಂದು ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಉನ್ನತ ಹಂತದ ಸಮಿತಿ ರಚಿಸಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸಬಾರದು ಎಂದು ಕೊಡಗಿನಲ್ಲಿ ಜನರು ಒತ್ತಾಯಿಸುತ್ತಿದ್ದಾರೆ.

ಪಶ್ಚಿಮಘಟ್ಟದಲ್ಲಿ ಗಣಿಗಾರಿಕೆ ನಿಷೇಧಿಸು­ವುದು, ಪರಿಸರದ ಮೇಲೆ ಹಾನಿ­ಯುಂಟು ಮಾಡುವ ಕೈಗಾರಿಕೆಗಳನ್ನು ನಿಷೇಧಿಸುವುದು, ನಗರೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲೆ ನಿಯಂತ್ರಣ, ಕೃಷಿಯಲ್ಲಿ ರಾಸಾಯನಿಕ ಕೀಟನಾಶಕ ಬಳಸದಂತೆ ನಿಷೇಧ ಮುಂತಾದ ಪ್ರಸ್ತಾವನೆಗಳಿವೆ.

ಸಮಿತಿ ಪಶ್ಚಿಮ ಘಟ್ಟದಲ್ಲಿ ಹಲವು ಪ್ರದೇಶಗಳನ್ನು ಸೂಕ್ಷ್ಮ ವಲಯ ಎಂದು ಗುರುತಿಸಿದೆ. ಕೊಡಗು ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳು ಈ ಸೂಕ್ಷ್ಮ ವಲಯದಲ್ಲಿವೆ. ಒಟ್ಟು 1,550 ಗ್ರಾಮಗಳು ಇದರ ವ್ಯಾಪ್ತಿಯೊಳಗೆ ಬರುತ್ತವೆ. ಕೊಡುಗು ಜಿಲ್ಲೆಯ 53 ಗ್ರಾಮಗಳ ಇದರಲ್ಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+