Kodi Mutt Swamiji Prediction: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕೋಡಿಮಠ ಶ್ರೀ ಭವಿಷ್ಯ
Kodi Mutt Swamiji Prediction: ರಾಜಕೀಯ, ಮಳೆ ಬಗ್ಗೆ ಆಗಾಗ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿಯುತ್ತಲಿರುತ್ತಾರೆ. ಇನ್ನೂ ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಾವು ಹಿಂದೆ ನುಡಿದ ಭವಿಷ್ಯವನ್ನು ಮತ್ತೆ ಪುನರುಚ್ಚಾರ ಮಾಡಿದ್ದಾರೆ. ಸದ್ಯ ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಕೋಡಿಶ್ರೀಗಳು ಯುಗಾದಿ ಹಬ್ಬದ ವೇಳೆ ಭವಿಷ್ಯ ನುಡಿದಿದ್ದರು.

ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ, ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನಲೆಗೆ ಬರುತ್ತಲಿದೆ. ಇದೇ ವೇಳೆಯೇ ಕೋಡಿಮಠ ಶ್ರೀಗಳು ಹೇಳಿರು ಹೇಳಿಕೆಯೊಂದು ಭಾರೀ ಕುತೂಹಲ ಸೃಷ್ಟಿಸಿದೆ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದು ಹೇಳಿದ್ದರು. ಉತ್ತರದ ನಾಡಿನಲ್ಲಿ ಹಗೆಯ ಬೇಗೆ ಎದ್ದೀತು, ಸುತ್ತುವರಿದು ಬರುವಾಗ ಜಗವೆಲ್ಲಾ ಕೋಳಾದೀತು ಎಂದು ಕೋಡಿಮಠದ ಶ್ರೀಗಳು ಹೇಳಿದ್ದರು.
ಸಾಮೂಹಿಕ ಹತ್ಯೆ ಆಗುತ್ತದೆ ಎಂದು ಹೇಳಿದ್ದೆ, ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು, ಪ್ರವಾಸಿಗರನ್ನು ಕೊಂದರು. ಸುತ್ತುವರಿದು ಬಂದಾಗ ಜಗವೆಲ್ಲಾ ಕೋಳಾದೀತು ಎಂದರೆ, ಆ ಕೃತ್ಯ ಜಗತ್ತಿನಾದ್ಯಂತ ಹರಡುತ್ತದೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಅಲ್ಲದೆ, ಮತೀಯ ಗಲಭೆಗಳು ಹೆಚ್ಚಾಗಿ, ಜನರಲ್ಲಿ ಅಶಾಂತಿ ಮೂಡುತ್ತದೆ ಎಂದು ಹಿಂದೆ ಹೇಳಿದ್ದೆ. ಹಿಂದೆಲ್ಲಾ, ರಾಜರು, ಮಹಾರಾಜರು, ಚಕ್ರವರ್ತಿಗಳಿದ್ದರು. ಅವರು ಒಂದು ಸ್ಥಾನವನ್ನು ಗುರುಗಳಿಗಾಗಿ ಮೀಸಲಿಡುತ್ತಿದ್ದರು. ಅವರು ಕೊಡುವ ಮಾರ್ಗದರ್ಶನದಲ್ಲಿ ಸಾಗುತ್ತಿದ್ದರು, ರಾಜ್ಯಭಾರ ಮಾಡುತ್ತಿದ್ದರು. ಈಗ ಅದು ಇಲ್ಲ ಎಂದು ಹೇಳಿದ್ದಾರೆ.
ನಾವು ಸನ್ಯಾಸಿಗಳು, ಯಾವ ದೇಶದಲ್ಲಿ ಇರುತ್ತೇವೆ, ಯಾವ ಮಣ್ಣಿನಲ್ಲಿ ಇರುತ್ತೇವೆ, ಎಲ್ಲಿ ಅನ್ನ ತಿನ್ನುತ್ತೇವೆ ಅಲ್ಲಿಗೆ ಒಳ್ಳೆದಾಗಬೇಕು ಎಂದು ನಾವು ಪ್ರಾರ್ಥನೆಯನ್ನು ಮಾಡುತ್ತೇವೆ. ಸರಿಯಾದ ಸಮಯಕ್ಕೆ ಮಳೆ ಸುರಿಯುತ್ತಿರುವುದರಿಂದ ಸಕಾಲದಲ್ಲಿ ಮಳೆ ಬರದೇ ಇರಬಹುದು ಎಂದು ಕೋಡಿಮಠದ ಸ್ವಾಮೀಜಿಗಳು ಹೇಳಿದ್ದಾರೆ.
ಹಾಲು ಕೆಟ್ಟರೂ, ಹಾಲುಮತ ಕೆಡುವುದಿಲ್ಲ ಎನ್ನುವ ಮಾತು ನಮ್ಮಲ್ಲಿ ಇದೆ. ಹಾಲುಮತದವರ ಬಳಿ ಅಧಿಕಾರವಿದ್ದರೆ, ಅದನ್ನು ವಾಪಸ್ ತೆಗೆದುಕೊಳ್ಳುವುದು ತುಂಬಾ ಕಷ್ಟ. ಅವರಾಗಿಯೇ ಕೊಟ್ಟರೆ, ಬದಲಾಗಬಹುದೇ ಹೊರತು ಇಲ್ಲದಿದ್ದರೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ. ಅವರಿಗೆ ಯಾವುದೇ ಕಂಟಕ ಇಲ್ಲ ಎಂದು ಹೇಳಿದ್ದಾರೆ.
ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದರು. ಅವರಿಂದಲೇ ವಿಜಯದಶಮಿ ಆಚರಣೆ ಮಾಡಲು ಆರಂಭ ಆಯಿತು. ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ ಸಹ ಹಾಲುಮತ ಸಮುದಾಯದವರು. ಹಾಲುಮತ ಸಮಾಜದಲ್ಲಿ ಲೋಕೋತ್ತರ ಕಾಣಿಕೆಗಳು ಇವೆ. ಅವರಿಗೆ ದೈವಬಲ ಇದೆ ಎಂದು ಕೋಡಿಮಠ ಶ್ರೀಗಳು ಹೇಳಿದ್ದಾರೆ.
ಕಳೆದ ಬಾರಿ 5 ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಆದ್ದರಿಂದ ಹೇಳುತ್ತಿದ್ದೇನೆ, ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವ ಇದೆ. ಅಧಿಕಾರ ಬಂದರೆ, ಹಿಂತೆಗೆದುಕೊಳ್ಳುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.
ಇದೀಗ ಅವರು ಮತ್ತೆ ರಾಜ್ಯವನ್ನು ಆಳುತ್ತಿದ್ದಾರೆ, ಅವರನ್ನು ಕೆಳಗಿಳಿಸುವುದು ಕಷ್ಟ. ಅವರಾಗಿಯೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಹೇಳಿದ್ದಾರೆ. ಹೀಗೆ ರಾಜಕೀಯ ಕುರಿತು ಇದೇ ಮೊದಲೇನಲ್ಲ ಸುಮಾರು ಬಾರಿ ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಅವರು ನುಡಿಯುವ ಭವಿಷ್ಯಗಳು ನಿಜವಾಗುತ್ತವೆ ಎನ್ನುವ ನಂಬಿಕೆಯೂ ಬಹುತೇಕ ಮಂದಿಯಲ್ಲಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications