• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ: ಕೋಡಿ ಶ್ರೀ ಭವಿಷ್ಯ

|
Google Oneindia Kannada News

ದಾವಣಗೆರೆ, ನವೆಂಬರ್ 23: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ರಾಜಕೀಯ ಬದಲಾವಣೆಗೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ.

ಕೋಡಿಶ್ರೀಗಳು ನುಡಿದಿದ್ದ ಭವಿಷ್ಯ: ಬಹಳ ಜಾಗರೂಕತೆಯಿಂದ ಇರಬೇಕಾದ ಈ 2 ತಿಂಗಳುಕೋಡಿಶ್ರೀಗಳು ನುಡಿದಿದ್ದ ಭವಿಷ್ಯ: ಬಹಳ ಜಾಗರೂಕತೆಯಿಂದ ಇರಬೇಕಾದ ಈ 2 ತಿಂಗಳು

ಅದೇ ರೀತಿ ನಮ್ಮಲ್ಲಿಯೂ ಬದಲಾವಣೆಗಳು ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸುಳಿವು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಗ್ರಹಣ ಫಲ ರಾಜಕೀಯ ವರ್ಗದ ಬಗ್ಗೆ ವಿಪ್ಲವ ಅಂತ ಬಂದಿದೆ. ಇದೇ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕುರಿತು ಕೇಳಿದ ಪ್ರಶ್ನೆಗೆ, ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಉತ್ತರಿಸಿದರು.

ಈಗಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ವಿಳಂಬದ ಕುರಿತು ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಇನ್ನು ಬಿಜೆಪಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಆದರೆ ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮಾಧಾನಕರ ನುಡಿಗಳನ್ನು ಆಡಿ ವಿಷಯವನ್ನು ತಣ್ಣಗಾಗಿಸುವ ಪ್ರಯತ್ನವನ್ನೂ ಮಾಡಿದ್ದಾರೆ.

   ಮನ್ಸೂರ್ ವಿಡಿಯೋ ಅಲ್ಲಿ ಹೇಳಿರೋದಾದ್ರು ಏನು? | Oneindia Kannada

   ಬಿಜೆಪಿ ನಾಯಕತ್ವದ ಬಗ್ಗೆ ಯಾವುದೇ ಗೊಂದಲವಿಲ್ಲ, ಸಿಎಂ ಯಡಿಯೂರಪ್ಪ ಅವರು ಕೇಂದ್ರದ ನಾಯಕರ ಜತೆ ಮಾತನಾಡಿದ್ದಾರೆ, ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.

   ರಾಜ್ಯದ ರಾಜಕೀಯದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿರುವಾಗಲೇ ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದು, ಆತಂಕ ಉಂಟಾಗಿದೆ.

   English summary
   Kodi mutt seer Shivanand Shivayogi Rajendra swami On Monday predicted that there is a possibility of Revolution In State And Country Politics.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X