ಉತ್ತರಕರ್ನಾಟಕ ಈ ನಾಯಕನಿಗೆ ಸಿಎಂ ಆಗುವ ಯೋಗ: ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ವಿಜಯಪುರ, ಏಪ್ರಿಲ್‌ 08: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಲಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. 2023 ರ ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರ ರಚನೆ ಮಾಡಿದ ಸಂದರ್ಭದಲ್ಲಿ ಹೈಕಮಾಂಡ್‌ ಮುಂದೆ ಡಿ ಕೆ ಶಿವಕುಮಾರ್‌ ಅವರು ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಇದೀಗ ಮೇ ತಿಂಗಳಿಗೆ ಸರ್ಕಾರ ರಚನೆಯಾಗಿ ಬರೋಬ್ಬರಿ ಎರಡು ವರ್ಷ ಪೂರೈಸಲಿದ್ದು, ಇದೀಗ ಸಿಎಂ ಸ್ಥಾನಕ್ಕಾಗಿ ಹೈಕಮಾಂಡ್‌ ಮುಂದೆ ಡಿ ಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದಾರೆ. ಆದರೆ, ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಗುವ ಯೋಗವು ಯಾರಿಗಿದೆ ಎಂಬ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ವೇಳೆಯಲ್ಲಿಯೇ ಸ್ವಾಮೀಜಿ ಸೂಚಿಸಿದ ಹೆಸರು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಸ್ವಾಮೀಜಿಗಳು ಉತ್ತರ ಕರ್ನಾಟಕದ ಈ ನಾಯಕನಿಗೆ ಭವಿಷ್ಯದಲ್ಲಿ ಸಿಎಂ ಆಗುವ ಯೋಗ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

Kodi Mutt Swamiji Prediction Future Chief Minister Of Karnataka Mb Patil

ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಆದರೆ, ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ತ್ಇತೀಚೆಗೆ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದೆ. ಈ ವೇಳೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರಸ್ತಾಪವಾಯಿತು. ಈ ವೇಳೆ ಉತ್ತರ ಕರ್ನಾಟಕದಿಂದ ಯಾರಿಗೆ ಮುಖ್ಯಮಂತ್ರಿ ಸ್ಥಾನ ಎಂದು ಕೇಳಿದಾಗ ಸಚಿವ ಎಂ.ಬಿ.ಪಾಟೀಲ್‌ ಅವರ ಹೆಸರು ಬಂತು. ಎಂಬಿ ಪಾಟೀಲ್‌ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಕೋಡಿಶ್ರೀಗಳು ಅವರು ಭವಿಷ್ಯ ನುಡಿದಿದ್ದಾರೆ.

ಇನ್ನೂ, ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ ಎಂದು ಕೋಡಿಮಠದ ಶ್ರೀಗಳು ಹೇಳಿಕೆ ನೀಡಿದ್ದಾರೆ. ಅಲ್ಲದೆ ಎಂಬಿ ಪಾಟೀಲ್‌ ಅವರ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ನಾಯಕರ ಪೈಕಿ ಎಂ ಬಿ ಪಾಟೀಲ್‌ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಹೇಳಿಕೆ ನೀಡಿರುವುದು, ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಸಚಿವ ಎಂಬಿ ಪಾಟೀಲ್‌ ಮಾತ್ರವಲ್ಲ, ಅವರ ತಂದೆ ಬಿಎಂ ಪಾಟೀಲ್‌ ಅವರೂ ಉತ್ತಮ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಬಿಎಂ ಪಾಟೀಲ್‌ ಅವರ ತಂದೆ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ, ಆಗಲಿಲ್ಲ ಈಗ ಸಚಿವ ಎಂಬಿ ಪಾಟೀಲ್‌ ಅವರು ರಾಜಕೀಯದಲ್ಲಿದ್ದಾರೆ. ಉತ್ತರ ಕರ್ನಾಟಕದಿಂದ ಯಾರನ್ನಾದರೂ ಮುಖ್ಯಮಂತ್ರಿ ಮಾಡಬೇಕೆಂದರೆ ಅದು ಎಂಬಿ ಪಾಟೀಲ್‌ ಅವರನ್ನು ಮಾಡಬೇಕು ಎಂದು‌ ಸ್ವಾಮೀಜಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+