Kodi Mutt Swamiji: ಕಾಂಗ್ರೆಸ್ ಸರ್ಕಾರ, ಸಿಎಂ ಅಧಿಕಾರದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ!
Kodi Mutt Swamiji: ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯವಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಜೋರಾಗಿ ಚರ್ಚೆ ನಡೆಯುತ್ತಿದೆ. ಮಹಿಳಾ ಮುಖ್ಯಮಂತ್ರಿ ಹಾಗೂ ದಲಿತ ಮುಖ್ಯಮಂತ್ರಿ ವಿಚಾರಗಳು ಚರ್ಚೆಯ ಮುನ್ನಲೆಗೆ ಬಂದಿವೆ. ಯಾವ ಬದಲಾವಣೆಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎನ್ನುವ ಪರಿಸ್ಥಿತಿ ಇದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾದಿಂದ ಮುಕ್ತಿ ಸಿಗುತ್ತಿಲ್ಲ. ಈ ರೀತಿ ಇರುವಾಗಲೇ ರಾಜ್ಯ ಸರ್ಕಾರದ ಬಗ್ಗೆ ರಾಜ್ಯ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಹಲವು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯಮಂತ್ರಿಯ ಬದಲಾವಣೆಗೆ ಕೆಲವರು ಪಟ್ಟುಹಿಡಿದು ಕುಳಿತಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ದಲಿತ ನಾಯಕರು ದೆಹಲಿ ಪ್ರವಾಸವನ್ನು ಮಾಡುತ್ತಿದ್ದಾರೆ. ಪದೇ ಪದೇ ಕೆಲವು ಕಾಂಗ್ರೆಸ್ ನಾಯಕರು ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡುತ್ತಿರುವುದು ಸಹ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ರೀತಿ ಇರುವಾಗಲೇ ಈ ಸರ್ಕಾರ ಹಾಗೂ ಮುಖ್ಯಮಂತ್ರಿ ಮುಂದುರಿಯುವ ಸಾಧ್ಯತೆ ಹೇಗೆ, ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಯಾವ ರೀತಿ ಇರಲಿದೆ ಎಂದು ಕೋಡಿಶ್ರೀ ಅವರು ಭವಿಷ್ಯ ನುಡಿದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಹವಾಮಾನ ಪರಿಸ್ಥಿತಿ ಯಾವ ರೀತಿ ಇರಲಿದೆ ಎನ್ನುವ ಬಗ್ಗೆಯೂ ಅವರು ಭವಿಷ್ಯ ನುಡಿಸಿದ್ದಾರೆ. ಅವರು ಈ ಬಗ್ಗೆ ಹೇಳಿದ್ದೇನು ಅಂತ ನೋಡೋಣ..
ಕೋಡಿಶ್ರೀಗಳು ಹೇಳುವ ಭವಿಷ್ಯವಾಣಿ ಬಹುತೇಕ ಸಂದರ್ಭಗಳಲ್ಲಿ ನಿಜವಾಗಿರುವುದು ಇದೆ. ನಟ ದರ್ಶನ್ ಅವರ ವಿಚಾರದಲ್ಲಿ ಹಾಗೂ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಏನಾಗಲಿದೆ ಎನ್ನುವ ವಿಚಾರಗಳ ಬಗ್ಗೆ ಅವರು ಹೇಳಿದ್ದ ಭವಿಷ್ಯವಾಣಿಯು ಬಹುತೇಕ ನಿಜವಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ಅವಧಿಯ ಬಗ್ಗೆ ಕೋಡಿಶ್ರೀ ಅವರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇಲ್ಲಿನ ಹಳೆ ಹುಬ್ಬಳ್ಳಿಯಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಬಳಿಕ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ್ದಾರೆ. ಈಗ ಏನು ಬಹಳ ಹೇಳಲ್ಲ ಯುಗಾದಿಗೆ ಎಲ್ಲವನ್ನೂ ಹೇಳ್ತೇನೆ ಎಂದಿದ್ದಾರೆ.
ಅಲ್ಲದೆ ಈಗ ಮಧ್ಯದಲ್ಲಿಯೇ ಹೇಳೋಕೆ ಬರಲ್ಲ. ಬರುವ ದಿನಗಳು ಶುಭ ಮತ್ತು ಅಶುಭ ಗಳಿಂದ ಕೂಡಿದ್ದು. ಮುಂದಿನ ದಿನಗಳಲ್ಲಿ ಭೂಮಿಯ ಧಗೆ ಹೆಚ್ಚಾಗಲಿದೆ ಯುಗಾದಿಗೆ ಎಲ್ಲವನ್ನೂ ವಿವರಿಸಿ ಹೇಳ್ತೇನೆ . ಆದರೆ, ಮೈಲಾರ ಕಾರ್ಣಿಕಕ್ಕು ಇದಕ್ಕೂ ಏನು ಸಂಬಂಧವಿಲ್ಲ ಎಂದರು. ಇನ್ನು
ಸರ್ಕಾರದ ಪ್ರತಿನಿಧಿಗಳ ನಡುವಿನ ಕಿತ್ತಾಟದ ಬಗ್ಗೆ ಪ್ರತಿಕ್ರಿಸಲು ಅವರು ನಿರಾಕರಿಸಿದರು.












Click it and Unblock the Notifications