Kogilu Eviction Row | ಕೇರಳ ಚುಣಾವಣೆಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡುತ್ತಿರುವ ಕಾಂಗ್ರೆಸ್: ವಿಜಯೇಂದ್ರ
ಬೆಂಗಳೂರು: ಯಲಹಂಕ ವಲಯದ ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವುಗೊಳಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮವು ಅಂತಾರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದೆ. ಈ ನಡೆಯನ್ನು ರಾಜ್ಯದ ಸಿಎಂ, ಡಿಸಿಎಂ ನಾಯಕರು ಸಮರ್ಥಿಸಿಕೊಂಡರು. ಅದರ ಬೆನ್ನಲ್ಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಈ ಮೂಲಕ ಕೇರಳ ಚುನಾವಣೆ ಪೂರ್ವದಲ್ಲಿ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ. ರಾಜ್ಯ ರಾಜಕೀಯ ಹಿತಾಸಕ್ತಿಯನ್ನು ಬಲಿ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಈ ಬೆಳವಣಿಗೆ ಸಂಬಂಧ ಭಾನುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಮರ್ಥಿಸಿಕೊಂಡು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯನ್ನು ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದಾಗುತ್ತಿದ್ದಂತೆ ಕೆ.ಸಿ ವೇಣುಗೋಪಾಲ್ ಅವರ ಹೇಳಿಕೆಗೆ ಡಿಸಿಎಂ ಮಣಿದಂತೆ ಪ್ರತಿಕ್ರಿಯಿಸಿದ್ದಾರೆ. ಊಸರವಳ್ಳಿಯಂತೆ ಬಣ್ಣದ ಮಾತುಗಳನ್ನಾಡಿದ್ದು, ಇದು ಕರ್ನಾಟಕದ ಸ್ವಾಭಿಮಾನದ ಘನತೆಯನ್ನು ಕುಗ್ಗಿಸಿದೆ ಎಂದರು.

ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆ ಎಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಕೇರಳ ದರ್ಬಾರ್ಗೆ ಅವಕಾಶ
ರಾಜ್ಯ ಸರ್ಕಾರ ಮಾನವೀಯ ದೃಷ್ಠಿಕೋನ ಹರಿಸಿಲ್ಲ ಎಂದು ಅಸಮಾಧಾನಿಸಿ ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿಕೊಡುವ ಭರವಸೆ ನೀಡುವ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದೆಲ್ಲ ನೋಡಿದರೆ ಕೇರಳ ಚುನಾವಣಾ ರಾಜಕೀಯಕ್ಕೆ ಕರ್ನಾಟಕದ ಹಿತಾಸಕ್ತಿ ಬಲಿಕೊಡಲು ಕಾಂಗ್ರೆಸ್ ಹೈ ಕಮಾಂಡ್ ಸಿದ್ದವಾದಂತೆ ಕಾಣುತ್ತಿದೆ. ಈ ಹಿಂದೆ ಅಂದಿನ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಖುಷಿ ಪಡಿಸಲು ಕೇರಳದಲ್ಲಿ ಆನೆ ದಾಳಿಗೊಳಗಾದವರು ಹಾಗೂ ನೆರೆ ಹಾವಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಮನೆ ಕಟ್ಟಿಕೊಡುವ ಕಾರ್ಯದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಶೇಷ ಆಸಕ್ತಿ ವಹಿಸಿತ್ತು. ಪ್ರತೀ ಹಂತದಲ್ಲೂ ಕರ್ನಾಟಕದಲ್ಲಿ ಕೇರಳ ದರ್ಬಾರ್ ನಡೆಯಲು ಅವಕಾಶ ಮಾಡಿಕೊಡುತ್ತಿರುವುದು ಕನ್ನಡಿಗರ ಸ್ವಾಭಿಮಾನವನ್ನು ಅಡವಿಟ್ಟಂತಾಗಿದೆ ಎಂದು ದೂರಿದರು.
ಕನ್ನಡ ನಾಡು ಪುಣ್ಯಕೋಟಿಯ ಪುಣ್ಯಭೂಮಿ. ಮಾನವೀಯತೆ ತೋರಿಸುವುದರಲ್ಲಿ ನಾವು ಜಗತ್ತಿಗೆ ಮಾದರಿ. ಆದರೆ ವಲಸಿಗರ ಅಕ್ರಮ ಕಾನೂನು ಉಲ್ಲಂಘನೆಗಳನ್ನು ಸಹಿಸಿಕೊಳ್ಳಬೇಕೆಂದು ನಿರೀಕ್ಷಿಸುವುದು ಮಾನವೀಯತೆ ಎಂದು ಎನಿಸಿಕೊಳ್ಳದು. ಇಂತಹಾ ಚಟುವಟಿಕೆಗಳನ್ನು ಪುನರ್ವಸತಿ ಹೆಸರಿನಲ್ಲಿ ಉತ್ತೇಜಿಸಿದರೆ ಸರ್ಕಾರದ ಖಾಲಿ ಭೂಮಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಇನ್ನು ಮುಂದೆ ಯಾವುದೇ ರಕ್ಷಣೆ ಸಿಗಲಾರದು.
ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಹೈ ಕಮಾಂಡ್ ನ ಒತ್ತಡಗಳಿಗೆ ಮಣಿದು ಕರ್ನಾಟಕದ ಹಿತಾಶಕ್ತಿಯನ್ನು ಬಲಿಕೊಟ್ಟರೆ ಅಲ್ಪಸಂಖ್ಯಾತರ ಹೆಸರಿನಲ್ಲಿ ಕೋಗಿಲು ಬಡಾವಣೆಯಲ್ಲಿ ರಾಜಕೀಯ ಓಲೈಕೆಯ ಚಟುವಟಿಕೆ ಮುಂದುವರೆದರೆ ಅದು ಕರ್ನಾಟಕದ ಸ್ವಾಭಿಮಾನ ಹಾಗೂ ಈ ನೆಲದ ಕಾನೂನನ್ನು ಬಲಿಕೊಟ್ಟಂತಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ವ್ಯತಿರಿಕ್ತವಾಗಿ ನಡೆದುಕೊಂಡರೆ ಕನ್ನಡಿಗರ ಪ್ರತಿಭಟನೆ ಎದುರಿಸಲು ಸಿದ್ದವಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಬೆಳವಣಿಗೆ ಹಿನ್ನೆಲೆ
ಈ ಬೆಳವಣಿಗೆ ಹಿನ್ನೆಲೆ ನೋಡುವುದಾದರೆ, ಜಿಬಿಎ ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇರಳ ಸಿಎಂ, ಕರ್ನಾಟಕದಲ್ಲಿ ಕಾಂಗ್ರೆಸ್ ಬುಲ್ಯೋಜರ್ ನ್ಯಾಯ ಕ್ರಮ ಜಾರಿಗೆ ತಂದಂತಿದೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಸಿದ್ದ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ರಮ, ವಾಸಕ್ಕೆ ಯೋಗ್ಯವಲ್ಲದ ಸ್ಥಳದಲ್ಲಿದ್ದವರನ್ನು ತೆರವುಗೊಳಿಸಲಾಗಿದೆ. ಮಾನವೀಯತೆ ದೃಷ್ಟಿಯಿಂದ ಅವರಿಗೆ ಮೂಲಸೌಕರ್ಯ ಕಲ್ಪಿಸಿಕೊಡಲಾಗುವುದು ಎಂದು ಹೇಳಿ ತಿರುಗೇಟು ನೀಡಿದ್ದರು. ನಂತರ ಕೆಸಿ ವೇಣುಗೋಪಾಲ್ ಅವರು ಪ್ರತಿಕ್ರಿಯಿಸಿದರು. ಇದರ ಹಿಂದೆ ಕೇರಳ ಚುನಾವಣಾ ರಾಜಕೀಯದ ಲೆಕ್ಕಾಚಾರ ಇದೆ ಎಂದು ಬಿಜೆಪಿ ದೂರಿತು.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಕರ್ನಾಟಕದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Keralam Assembly Elections 2026: ಎಲ್ಡಿಎಫ್ vs ಯುಡಿಎಫ್ ಪೈಪೋಟಿ, ಶಬರಿಮಲೆ ಚಿನ್ನಾಭರಣ ಕಳ್ಳತನ ವಿಷಯವೇ ಪ್ರಮುಖ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications