ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸೇರುವುದಾಗಿ ಮತ್ತೊಬ್ಬ ಜೆಡಿಎಸ್ ಶಾಸಕನ ಘೋಷಣೆ!

|
Google Oneindia Kannada News

ಕೋಲಾರ, ಸೆಪ್ಟೆಂಬರ್ 19; ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಹಾಲಿ ಶಾಸಕರೊಬ್ಬರು ಘೋಷಣೆ ಮಾಡಿದ್ದಾರೆ. ಈಗಾಗಲೇ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

ಬುಧವಾರ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದರು. ಶನಿವಾರ ಶಾಸಕ ಕೆ. ಶ್ರೀನಿವಾಸ ಗೌಡ ಕಾಂಗ್ರೆಸ್ ಸೇರುತ್ತೇನೆ ಎಂದು ಘೋಷಿಸಿದ್ದಾರೆ.

ದೇವೇಗೌಡರು ಗರಂ; ಜೆಡಿಎಸ್‌ ಶಾಸಕ ಪಕ್ಷದಿಂದ ಉಚ್ಛಾಟನೆ? ದೇವೇಗೌಡರು ಗರಂ; ಜೆಡಿಎಸ್‌ ಶಾಸಕ ಪಕ್ಷದಿಂದ ಉಚ್ಛಾಟನೆ?

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕೆ. ಶ್ರೀನಿವಾಸ ಗೌಡ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ, ಜೆಡಿಎಸ್ ಸೇರುತ್ತೇನೆ ಎಂದು ಹೇಳಿದ್ದಾರೆ.

ಒಂದೇ ದಿನ ಕಾಂಗ್ರೆಸ್‌ ನಾಯಕರನ್ನು ಭೇಟಿಯಾದ ಇಬ್ಬರು ಜೆಡಿಎಸ್ ಶಾಸಕರು! ಒಂದೇ ದಿನ ಕಾಂಗ್ರೆಸ್‌ ನಾಯಕರನ್ನು ಭೇಟಿಯಾದ ಇಬ್ಬರು ಜೆಡಿಎಸ್ ಶಾಸಕರು!

20158ರ ಚುನಾವಣೆಯಲ್ಲಿ ಕೆ. ಶ್ರೀನಿವಾಸ ಗೌಡ ಕೋಲಾರ ಕ್ಷೇತ್ರದಲ್ಲಿ 82,788 ಮತಗಳನ್ನು ಪಡೆದು ಜಯಗಳಿಸಿದ್ದರು. ಮೊದಲು ಕಾಂಗ್ರೆಸ್ ಪಕ್ಷದಲ್ಲಿದಲ್ಲಿಯೇ ಇದ್ದ ಮಾಜಿ ಸಚಿವ ಶ್ರೀನಿವಾಸ ಗೌಡ ಜೆಡಿಎಸ್ ಸೇರಿ ಗೆದ್ದಿದ್ದರು. ಈಗ ಪುನಃ ಕಾಂಗ್ರೆಸ್‌ಗೆ ವಾಪಸ್ ಆಗುತ್ತಿದ್ದಾರೆ. ಇದರಿಂದಾಗಿ ಕೋಲಾರ ಭಾಗದಲ್ಲಿ ಜೆಡಿಎಸ್‌ಗೆ ಹಿನ್ನಡೆ ಉಂಟಾಗಿದೆ.

ಜಿಟಿ ಹರೀಶ್ ಸ್ಪರ್ಧೆಗೆ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ ವಿರೋಧ!ಜಿಟಿ ಹರೀಶ್ ಸ್ಪರ್ಧೆಗೆ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ ವಿರೋಧ!

ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ

ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ

ಮಾಧ್ಯಮಗಳ ಜೊತೆ ಮಾತನಾಡಿದ ಕೆ. ಶ್ರೀನಿವಾಸ ಗೌಡ, "ಎಚ್. ಡಿ. ದೇವೇಗೌಡರು ಮತ್ತು ಅವರ ಮಕ್ಕಳ ಬಗ್ಗೆ ಮಾತನಾಡಿದ್ದಕ್ಕೆ ಜೆಡಿಎಸ್ ಪಕ್ಷದಿಂದ ನನ್ನನ್ನು ಉಚ್ಛಾಟನೆ ಮಾಡಿದ್ದಾರೆ. ರಮೇಶ್ ಕುಮಾರ್ ಮತ್ತು ಕೃಷ್ಣ ಬೈರೇಗೌಡರನ್ನು ಹೊಗಳಿದ್ದೂ ಉಚ್ಛಾಟನೆಗೆ ಕಾರಣ. ಅದಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದೇನೆ" ಎಂದು ಹೇಳಿದರು.

ನನ್ನ ಮೇಲೆ ಕ್ರಮ ಕೈಗೊಂಡಿದ್ದಾರೆ

ನನ್ನ ಮೇಲೆ ಕ್ರಮ ಕೈಗೊಂಡಿದ್ದಾರೆ

"ಎಚ್. ಡಿ. ಕುಮಾರಸ್ವಾಮಿ ಕೆ. ಸಿ. ವ್ಯಾಲಿ ನೀರನ್ನು ಕೊಳಚೆ ನೀರು ಎಂದು ಹೇಳಿದ್ದರು. ಅವರ ಮಾತಿಗೆ ನಾನು ವಿರೋಧ ಮಾಡಿದ್ದಕ್ಕೆ ನನ್ನ ಮೇಲೆ ಕ್ರಮ ಕೈಗೊಂಡಿದ್ದಾರೆ" ಎಂದು ಶಾಸಕ ಕೆ. ಶ್ರೀನಿವಾಸ ಗೌಡ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮಾತನಾಡಿದ್ದ ಕೆ. ಶ್ರೀನಿವಾಸ ಗೌಡ, "ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೆ. ಸಿ. ವ್ಯಾಲಿ ನೀರನ್ನು ಕೊಳಚೆ ನೀರು ಎಂದು ಹೇಳಿರುವುದು ಸರಿಯಲ್ಲ. ಬರಡು ಭೂಮಿ ಎನಿಸಿಕೊಂಡಿರುವ ಕೋಲಾರಕ್ಕೆ ಕೆ. ಸಿ. ವ್ಯಾಲಿ ನೀರು ಬಹಳ ಪ್ರಾಮುಖ್ಯವಾಗಿದೆ. ಯೋಜನೆ ನೀರನ್ನು ನಾನು ಸಹ ಕುಡಿದಿದ್ದೇನೆ. ನಾನೇನು ಸುತ್ತು ಹೋಗಿದ್ದೆನೆಯೇ?" ಎಂದು ಪ್ರಶ್ನಿಸಿದ್ದರು.

ಡಿ. ಕೆ. ಶಿವಕುಮಾರ್ ಜೊತೆ ಮಾತುಕತೆ

ಡಿ. ಕೆ. ಶಿವಕುಮಾರ್ ಜೊತೆ ಮಾತುಕತೆ

"ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ನಾನು ತೀರ್ಮಾನ ಮಾಡಿದ್ದೇನೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಬಂದಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ನನ್ನ ಮಗನಿಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕೇಳಲಾಗಿದೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತೀರ್ಮಾನವನ್ನು ನಾನು ಮಾಡುತ್ತೇನೆ" ಎಂದು ಕೆ. ಶ್ರೀನಿವಾಸ ಗೌಡ ಹೇಳಿದ್ದಾರೆ.

ಪಕ್ಷ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ

ಪಕ್ಷ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ

ಕೆ. ಶ್ರೀನಿವಾಸ ಗೌಡ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಜೆಡಿಎಸ್ ಪಕ್ಷ ಒಂದು ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ದೇವೇಗೌಡರು ಪ್ರಧಾನಿಯಾದರು. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದರು. ರೇವಣ್ಣ ಸಚಿವರಾದರು, ಅವರ ಬಂಧು ಬಳಗದವರು ಶಾಸಕರಾದರು. ಎಲ್ಲಾ ಅಧಿಕಾರ ಅವರಿಗೆ ಬೇಕು. ಒಳ್ಳೆಯ ಖಾತೆಗಳು ಅವರಿಗೆ ಬೇಕು ಎಂದು ಎಚ್. ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ, ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಬೇಕು".

Recommended Video

ಮೋದಿ ನಡೆದು ಬಂದ ಹಾದಿ | Oneindia Kannada
ರಮೇಶ್ ಕುಮಾರ್‌ಗೆ ಸಹಾಯ ಮಾಡಲಿಲ್ಲ

ರಮೇಶ್ ಕುಮಾರ್‌ಗೆ ಸಹಾಯ ಮಾಡಲಿಲ್ಲ

"ನಾನು ಕಳೆದ ಚುನಾವಣೆಯಲ್ಲಿ ರಮೇಶ್ ಕುಮಾರ್‌ಗೆ ನಾನು ಸಹಾಯ ಮಾಡಲಿಲ್ಲ. ಈ ಬಾರಿ ನನ್ನ ಮಗ ಹೊಳೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಆಕಾಂಕ್ಷಿ. ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ನಾನು ಹಿಂದೆಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇತ್ತು. ಆದರೆ ಮಹಾನುಭವ ಮಾಜ ಸಂಸದ ಕೆ. ಎಚ್. ಮುನಿಯಪ್ಪ ಅಡ್ಡಿಪಡಿಸಿದರು. ಅವರಿಗೆ ಜನತಕ್ಕ ಶಾಸ್ತಿ ಮಾಡಿದ್ದಾರೆ" ಎಂದು ಕೆ. ಶ್ರೀನಿವಾಸ ಗೌಡ ಹೇಳಿದ್ದಾರೆ.

English summary
Kolar JD(S) MLA K. Srinivasa Gowda announced that he will quit JD(S) adn joined Congress. K. Srinivasa Gowda who verbally attacked former chief minister H. D. Kumaraswamy recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X