Rape Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ- ಎಲ್ಲೆಲ್ಲಿ ವೈದ್ಯರ ಪ್ರತಿಭಟನೆ? ಏನಾಯ್ತು?

ಶಿವಮೊಗ್ಗ ಆಗಸ್ಟ್ 17: ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿ ಮೇಲೆ ಅತ್ಯಾಚಾರ ಹಾಗೂ ಭೀಕರ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ವೈದ್ಯರು ಇಂದು ಪ್ರತಿಭಟನೆ ಮಾಡಿದರು. ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಓಪಿಡಿ ಬಂದ್ ಮಾಡಿ ಬೀದಿಗಿಳಿದ ವೈದ್ಯರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ನಗರದ ಗೋಪಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ವೈದ್ಯರು ವೈದ್ಯೆಯ ಭೀಕರ ಹತ್ಯೆಯನ್ನು ಖಂಡಿಸಿ ಮೌನಾಚರಣೆ ಪ್ರತಿಭಟನೆ ಮಾಡಿದರು. ಅಲ್ಲದೆ ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದರು.

Kolkata doctor rape case- protest in Shivamogga strike back in Chamarajanagar

ಪ್ರತಿಭಟನೆಗೆ ನಗರದ ಐಎಂಎ ಹಾಗೂ ಐಡಿಎ ಸಂಘಟನೆಗಳು ಬೆಂಬಲ ನೀಡಿವೆ. ಕೂಡಲೇ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಬೇಕು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ನೊಂದ ಕುಟುಂಬಕ್ಕೆ ಎಲ್ಲಾ ರೀತಿಯ ನೆರವಿನ ಜೊತೆಗೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಎಂಎಲ್ಸಿ ಡಾ.ಧನಂಜಯ ಸರ್ಜಿ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು, ಗೃಹ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದರು.

ಗಡಿ ಜಿಲ್ಲೆ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ, ಚಿಕಿತ್ಸೆ ಸಿಗದೇ ವಾಪಾಸ್!!

ಚಾಮರಾಜನಗರ: ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಗಡಿಜಿಲ್ಲೆ ಚಾಮರಾಜನಗರದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳು, ಖಾಸಗಿ ಕ್ಲಿನಿಕ್ ಗಳು ಬಂದ್ದಾಗಿದ್ದು ವೈದ್ಯರು ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಕ್ರೋಶ ಹೊರಹಾಕಿದ್ದಾರೆ.

Kolkata doctor rape case- protest in Shivamogga strike back in Chamarajanagar

ವೈದ್ಯರಿಗೆ ರಕ್ಷಣೆ ಸಿಗುತ್ತಿಲ್ಲ, ಕನಿಷ್ಠ ಗೌರವ ಸಿಗುತ್ತಿಲ್ಲ, ಅತ್ಯಾಚಾರ ಪ್ರಕರಣದಲ್ಲಿ ಪುರಾವೆಗಳನ್ನು ನಾಶ ಪಡಿಸಲಾಗಿದೆ, ಜೀವವನ್ನು ಉಳಿಸುವ ಕೆಲಸ ಮಾಡುವ ವೈದ್ಯರಿಗೆ ಜೀವ, ಮಾನವನ್ನೇ ಕಳೆಯುವ ಕೆಲಸ ಮಾಡಲಾಗುತ್ತಿದ್ದೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ತನಕ ನಮ್ಮ‌ ಹೋರಾಟ ನಿಲ್ಲಲ್ಲ, ನ್ಯಾಯ ಸಿಗುವ ತನಕ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ವೈದ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನಂದಕಿಶೋರ್ ಮತ್ತು ಜಿಲ್ಲಾಸ್ಪತ್ರೆ ವೈದ್ಯೆ ಡಾ.ಗೌತಮಿ ಹೇಳಿದರು.

ಹೊರರೋಗಿಗಳ ಪರದಾಟ:

ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು, ಚೆಕ ಅಪ್ ಗೆ ಬಂದ ರೋಗಿಗಳು ವೈದ್ಯರ ಲಭ್ಯತೆ ಇಲ್ಲದೇ ವಾಪಾಸ್ ಆದರು‌. ಹಲವರು ಗಂಟೆಗಟ್ಟಲೆ ಕಾದು ವೈದ್ಯರು ಇಲ್ಲದಿದ್ದಕ್ಕೆ ಮನೆಗೆ ತೆರಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+