Caste: ಜಾತಿ-ಧರ್ಮ ಚರ್ಚೆಗೆ ಬದಲಾಗಿ ಅಭಿವೃದ್ಧಿ ಮಾತುಕತೆ ಅಗತ್ಯ: ಸಚಿವ ಶಿವರಾಜ ತಂಗಡಗಿ"

ಬೆಂಗಳೂರು, ಸೆಪ್ಟಂಬರ್ 15: ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅಭಿಪ್ರಾಯಪಟ್ಟರು.

ಸೋಮವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Koppal Minister Shivraj Tangadagi Focus on Development Not Caste or Religion

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣೆಗಳಿಗೆ ಅವಕಾಶವಿದೆ. ಆದರೆ, ಇಂದು ವೈಯಕ್ತಿಕವಾಗಿ ಟೀಕೆ ಟಿಪ್ಪಣೆಗಳಾಗುತ್ತಿದ್ದು, ಅರ್ಥಗರ್ಭಿತ ಮತ್ತು ಸಾಮರಸ್ಯವಾದಂತಹ ಟೀಕೆ ಟಿಪ್ಪಣೆಗಳು ಆಗಬೇಕಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಹೆಚ್ಚಿನ ಪ್ರಮಾಣದಲ್ಲಿ ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ನನ್ನ ಮತ ನನ್ನ ಹಕ್ಕು'' ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳ ವಿಶೇಷವಾದ ದಿನವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು, ಡಾ. ಬಾಬಾ ಸಾಹೇಬ ಅಂಬೇಡ್ಕರ್ ರವರು ಮತದಾನಕ್ಕೆ ದೊಡ್ಡ ಶಕ್ತಿಯನ್ನು ನೀಡಿದ್ದರು.

ನಮ್ಮ ದೇಶದಲ್ಲಿ ಮೊದಲು ರಾಜ ಮಹರಾಜರ ಕಾಲದಲ್ಲಿ ಕೆಲವೇ ಕೆಲವು ಜನರಿಗೆ ಮತದಾನ ಸೀಮಿತವಾದಂತಹ ವ್ಯವಸ್ಥೆಗಳಿದ್ದವು. ಭಾರತ ಸಂವಿಧಾನ ರಚನೆಯಾದ ನಂತರ ನಮ್ಮ ದೇಶದಲ್ಲಿನ ಎಲ್ಲಾ ರಾಜ್ಯಗಳಿಗೂ ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಎಲ್ಲರಿಗೂ ಮತದಾನದ ಹಕ್ಕು ನೀಡಲಾಯಿತು. ವಿಶೇಷವಾಗಿ ಮಹಿಳೆಯರಿಗೂ ಹಕ್ಕನ್ನು ಒದಗಿಸಿ ದೇಶಕ್ಕೆ ಅಪಾರ ಕೊಡುಗೆ ಕೊಟ್ಟಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಂದು ಸಮಾಜದವರು ನೆನಪಿಸಿಕೊಳ್ಳಬೇಕು. ನಾನು ಸಹ ಈ ರಾಜ್ಯದ ಮಂತ್ರಿಯಾಗಿ, ಶಾಸಕನಾಗಿರುವುದಕ್ಕೆ ಬಾಬಾ ಸಾಹೇಬರು ಕೊಟ್ಟ ಕೊಡುಗೆಯಾಗಿದೆ ಎಂದರು.

ದೇಶದಲ್ಲಿ ಈ ಹಿಂದೆ 25 ವರ್ಷ ಇದ್ದವರಿಗೆ ಮಾತ್ರ ಮತದಾನ ಹಕ್ಕಿತ್ತು. ಆದರೆ, ಅಂದಿನ ಪ್ರಧಾನ ಮಂತ್ರಿಗಳಾಗಿದ್ದ ದಿ. ರಾಜೀವ್ ಗಾಂಧಿ ಅವರು ಈ ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡುವುದುರ ಜೊತೆಗೆ ದೇಶದ ಯುವಕರಿಗೆ ಮತದಾನದ ಹಕ್ಕನ್ನು 18ನೇ ವರ್ಷಕ್ಕೆ ಇಳಿಕೆ ಮಾಡಿ, ಯುವಜನತೆ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು. ಮತದಾನದ ಹಕ್ಕು ಎಲ್ಲರ ಜವಾಬ್ದಾರಿಯಾಗಿದೆ. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ತಮ್ಮ ಮತ ಚಲಾಯಿಸಬೇಕು. ಸಂವಿಧಾನ, ಪ್ರಜಾಪ್ರಭುತ್ವದ ಅರಿವು ಎಲ್ಲರಿಗೂ ಅತ್ಯವಶ್ಯಕವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿವರ್ಷ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸಲಾಗುತ್ತಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+