ಕೊಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಸಿಸಿ ರಸ್ತೆಯಾಗಿ ಅಭಿವೃದ್ಧಿ

Posted By:
Subscribe to Oneindia Kannada

ಕೊಪ್ಪಳ, ಸೆಪ್ಟೆಂಬರ್ 10 : 'ಕೊಪ್ಪಳ ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 63 ಅನ್ನು ಸಿಸಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ 10 ದಿನಗಳ ಒಳಗಾಗಿ ಅಂದಾಜು ಪಟ್ಟಿಯನ್ನು ತಯಾರಿಸಿ ಸಲ್ಲಿಸುವಂತೆ' ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶುಕ್ರವಾರ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ನಗರದಲ್ಲಿನ ರಾಷ್ಟ್ರೀಯ ಹೆದ್ದಾರಿ 63ನ್ನು ಸಿಸಿ ರಸ್ತೆಯನ್ನಾಗಿ (cement concrete road) ಅಭಿವೃದ್ಧಿಪಡಿಸುವ ಯೋಜನೆಗೆ ಸಂಬಂಧಿಸಿದಂತೆ ಅಂದಾಜು ಪಟ್ಟಿಯನ್ನು ತಯಾರಿಸುವಂತೆ ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. [ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಹೈಕೋರ್ಟ್ ಸೂಚನೆ]

koppal

'ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 63 ಅನ್ನು ಒನ್ ಟೈಮ್ ಅಭಿವೃದ್ಧಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ಸೂಚಿಸಿದ್ದಾರೆ' ಎಂದು ಸಚಿವರು ಹೇಳಿದರು.[ಹಾಸನ- ಮಾರನಹಳ್ಳಿ ರಸ್ತೆ ವಿಸ್ತರಣೆಗೆ 3 ಸಾವಿರ ಮರಕ್ಕೆ ಕೊಡಲಿ]

'ರಾಷ್ಟ್ರೀಯ ಹೆದ್ದಾರಿ 63 ಅನ್ನು ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದೆ. ಗಿಣಿಗೇರಾದಿಂದ ರಾಷ್ಟ್ರೀಯ ಹೆದ್ದಾರಿ 63ಕ್ಕೆ ಬೈಪಾಸ್ ರಸ್ತೆಗೂ ಸಹ ಯೋಜನೆ ಸಿದ್ಧವಾಗಿದೆ. ನಗರದಲ್ಲಿ ಹಾದುಹೋಗಿರುವ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ. ಇದಕ್ಕೆ ಸುಮಾರು 20 ಕೋಟಿ ರೂ. ವೆಚ್ಚವಾಗಲಿದೆ' ಎಂದರು.[ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಹೊಸ ರಸ್ತೆ]

ಕೊಪ್ಪಳ ನಗರದಲ್ಲಿನ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಪೈಪ್‍ಲೈನ್, ಯುಜಿಡಿ ಕಾಮಗಾರಿ, ಜೆಸ್ಕಾಂಗೆ ಸಂಬಂಧಿಸಿದ ವಿದ್ಯುತ್ ಕಂಬಗಳ ಸ್ಥಳಾಂತರ, ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್ಸ್ ಇಲಾಖೆಗಳೊಂದಿಗೆ ಜಂಟಿ ಸಮೀಕ್ಷೆ ಕೈಗೊಂಡು, 10 ದಿನಗಳ ಒಳಗಾಗಿ ಸಂಪೂರ್ಣ ವರದಿಯನ್ನು ಸಿದ್ಧಪಡಿಸಿ ಎಂದು ಅಂದಾಜು ಪಟ್ಟಿಯನ್ನು ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
National Highway Authority Of India will convert National-Highway 63 in Koppal city in to cement concrete road.
Please Wait while comments are loading...