ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ : ರೈಲ್ವೆ ಟಿಕೆಟ್ ಕೌಂಟರ್ ಸಮಯ ವಿಸ್ತರಣೆ

|
Google Oneindia Kannada News

ಕೊಪ್ಪಳ, ಅಕ್ಟೋಬರ್ 12 : ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿನ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ಕಾರ್ಯ ನಿರ್ವಹಣೆಯ ಸಮಯವನ್ನು ರಾತ್ರಿ 8 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಾಯೋಗಿಕವಾಗಿ ಸಮಯವನ್ನು ವಿಸ್ತರಣೆ ಮಾಡಿದ್ದು, ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಮನವಿ ಮಾಡಿದ್ದಾರೆ.

ಮೊದಲು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯ ತನಕ ಮಾತ್ರ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶವಿತ್ತು. ಇದರಿಂದ ಜನರಿಗೆ ತೊಂದರೆ ಉಂಟಾಗುತ್ತಿತ್ತು. [ಬೆಂಗಳೂರು-ಮೈಸೂರು ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ]

indian railways

ಈ ಬಗ್ಗೆ ಮಾಹಿತಿ ಪಡೆದ ಸಂಸದ ಸಂಗಣ್ಣ ಕರಡಿ ಅವರು ಟಿಕೆಟ್ ಕೌಂಟರ್ ಸಮಯವನ್ನು ವಿಸ್ತರಣೆ ಮಾಡಬೇಕು ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ರೈಲ್ವೆ ಇದಕ್ಕೆ ಒಪ್ಪಿಗೆ ನೀಡಿದೆ. [ರೈಲ್ವೆ ಇ-ಟಿಕೆಟ್ ಬುಕಿಂಗ್‌ಗೆ 15 ನಿಮಿಷ ಹೆಚ್ಚುವರಿ ಅವಕಾಶ]

ಸದ್ಯ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ಕಾರ್ಯ ನಿರ್ವಹಣೆ ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8ರಿಂದ ರಾತ್ರಿ 8ಗಂಟೆಯ ತನಕ ಕೌಂಟರ್ ಕಾರ್ಯನಿರ್ವಹಿಸಲಿದೆ. ಅಕ್ಟೋಬರ್ 17 ರವರೆಗೆ ಪ್ರಾಯೋಗಿಕವಾಗಿ ಈ ಸಮಯ ಜಾರಿಯಲ್ಲಿರುತ್ತದೆ. [ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಕನಸು ನನಸಾಗುವುದೇ?]

English summary
South western railways extended the reservation ticket booking counter timings at Koppal railway station. Now counter will open from morning 8 to night 8 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X