ಯಲ್ಲಾಲಿಂಗನ ಕೊಲೆ, ಹನುಮೇಶ ನಾಯಕ ಸಿಐಡಿ ವಶಕ್ಕೆ

ಕೊಪ್ಪಳ, ಜೂ. 22 : ಕೊಪ್ಪಳದ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ಸಚಿವ ಶಿವರಾಜ ತಂಗಡಗಿ ಅವರ ಬೆಂಬಲಿಗ ಹನುಮೇಶ ನಾಯಕ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆವಹಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಭಾನುವಾರ ಕೊಪ್ಪಳ ಜಿಲ್ಲಾ ಪೊಲೀಸರ ಸಹಕಾರದಿಂದ ಹನುಮೇಶ ನಾಯಕ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. [ಯಲ್ಲಾಲಿಂಗನ ಕೊಲೆ ಪ್ರಕರಣದ ತನಿಖೆ ಸಿಐಡಿಗೆ]

cid

ಭಾನುವಾರ ಬೆಳಗ್ಗೆ ಹುಲಿಹೈದರ್ ಗ್ರಾಮಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಗಂಗಾವತಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಕಾಳಿಕೃಷ್ಣ ಮತ್ತು ತಂಡ ಹನುಮೇಶ ನಾಯಕ ಅವರನ್ನು ವಶಕ್ಕೆ ಪಡೆದು ಕೊಪ್ಪಳ ಪ್ರವಾಸಿ ಮಂದಿರಕ್ಕೆ ಕರೆದುಕೊಂಡು ಹೋದರು. [ಸಿಐಡಿ ತನಿಖೆ ಹೇಗೆ ನಡೆಯುತ್ತೇ?]

ಪ್ರವಾಸಿ ಮಂದಿರದಲ್ಲಿದ್ದ ಸಿಐಡಿಯ ಹಿರಿಯ ಅಧಿಕಾರಿಗಳು ಹನುಮೇಶ ನಾಯಕ ಅವರನ್ನು ಜಿಲ್ಲಾ ಪೊಲೀಸರಿಂದ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಾಯಕ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

6 ಆರೋಪಿಗಳ ಬಂಧನ : ಯಲ್ಲಾಲಿಂಗನ ಕೊಲೆ ಪ್ರಕರಣದಲ್ಲಿ 9 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 6 ಆರೋಪಿಗಳನ್ನು ಬಂಧಿಸಲಾಗಿದ್ದು, ಹನುಮೇಶ ನಾಯಕ ಸಿಐಡಿ ವಶದಲ್ಲಿದ್ದಾರೆ. ನಂದಕುಮಾರ ನಾಯಕ ಮತ್ತು ಯಮನೂರಪ್ಪ ಚನ್ನದಾಸರ ನಾಪತ್ತೆಯಾಗಿದ್ದಾರೆ. ಬಂಧಿತ 6 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ತನಿಖೆಗೆ ಸಹಕಾರ ನೀಡುತ್ತೇವೆ : ಯಲ್ಲಾಲಿಂಗನ ಕೊಲೆ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳ ತನಿಖೆಗೆ ಜಿಲ್ಲಾ ಪೊಲೀಸರು ಎಲ್ಲಾ ರೀತಿಯ ಸಹಕಾರವನ್ನು ನೀಡಲಿದ್ದಾರೆ. ಸಿಐಡಿ ಅಧಿಕಾರಿಗಳು ಕೊಪ್ಪಳಕ್ಕೆ ಆಗಮಿಸಿದ್ದರು. ಅವರಿಗೆ ಸ್ಥಳೀಯ ಪೊಲೀಸ್ ಇಲಾಖೆ ನೆರವು ನೀಡಿದೆ.

ಹನುಮೇಶ ನಾಯಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಜಾ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+