ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ವಿಪಕ್ಷ ನಾಯಕರಾಗಿ ಶ್ರೀನಿವಾಸ ಪೂಜಾರಿ ಆಯ್ಕೆ

By Gururaj
|
Google Oneindia Kannada News

ಬೆಂಗಳೂರು, ಜುಲೈ 02 : ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆಯಾದರು. ಕೆ.ಎಸ್.ಈಶ್ವರಪ್ಪ ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಪರಿಷತ್ ವಿಪಕ್ಷ ನಾಯಕರ ಸ್ಥಾನ ತೆರವಾಗಿತ್ತು.

ಸೋಮವಾರ ರಾಜ್ಯಪಾಲರ ಭಾಷಣದ ಬಳಿಕ ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೋಟಾ ಶ್ರೀನಿವಾಸ ಪೂಜಾರಿ ಅವರು ಪರಿಷತ್ ವಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರ

ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದರು. ಆಯನೂರು ಮಂಜುನಾಥ್ ಸೇರಿದಂತೆ ಹಲವು ನಾಯಕರ ಹೆಸರು ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ಕೇಳಿಬಂದಿತ್ತು.

ಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ vs ಎಸ್ ಆರ್ ಪಾಟೀಲ್ಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ vs ಎಸ್ ಆರ್ ಪಾಟೀಲ್

ಜೂನ್ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪರಿಷತ್ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲು ಒಪ್ಪಿಗೆ ನೀಡಲಾಗಿತ್ತು.

ಹಲವು ನಾಯಕರ ಹೆಸರು ಕೇಳಿಬಂದಿತ್ತು

ಹಲವು ನಾಯಕರ ಹೆಸರು ಕೇಳಿಬಂದಿತ್ತು

ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಲು ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆದಿತ್ತು. ಆಯನೂರು ಮಂಜುನಾಥ್, ವೈ.ಎ.ನಾರಾಯಣಸ್ವಾಮಿ, ಕೋಟಾ ಶ್ರೀನಿವಾಸ ಪೂಜಾರಿ, ರಘುನಾಥ ಮಲ್ಕಾಪುರೆ ಅವರ ಹೆಸರು ಕೇಳಿ ಬಂದಿತ್ತು.

ಜೂನ್ 29ರಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆ, ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇಂದು ಪರಿಷತ್ತಿನಲ್ಲಿ ಅಧಿಕೃತವಾಗಿ ಶ್ರೀನಿವಾಸ ಪೂಜಾರಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಕೆಲಸ ನಿರ್ವಹಿಸುವೆ

ಕೆಲಸ ನಿರ್ವಹಿಸುವೆ

ಜೂನ್ 29ರಂದು ಕೋಟಾ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಪ್ರತಿಪಕ್ಷ ನಾಯಕನ ಸ್ಥಾನ ನೀಡಿದರೆ ಸಮರ್ಥವಾಗಿ ನಿರ್ವಹಿಸುವೆ ಎಂದು ಹೇಳಿದ್ದರು.

ಸೋಮವಾರ ವಿಧಾನಮಂಡಲ ಜಂಟಿ ಅಧಿವೇಶನದ ಬಳಿಕ ಪರಿಷತ್ ಕಲಾಪ ಆರಂಭವಾಯಿತು. ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕನಾಗಿ ಘೋಷಣೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಾನ

ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಾನ

ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಮೂರನೇ ಬಾರಿಗೆ ಆಯ್ಕೆಯಾಗಿ ಬಂದಿದ್ದಾರೆ. ಪೂಜಾರಿ ಸಮುದಾಯಕ್ಕೆ ಸೇರಿದ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಬಿಜೆಪಿಯ ಭದ್ರಕೋಟೆ. ವಿಧಾನಪರಿಷತ್ ಪ್ರತಿಪಕ್ಷ ನಾಯಕರ ಸ್ಥಾನವನ್ನು ಜಿಲ್ಲೆಗೆ ನೀಡುವ ಮೂಲಕ ಬಿಜೆಪಿ ಜಿಲ್ಲೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಕೆ.ಎಸ್.ಈಶ್ವರಪ್ಪ ನಾಯಕರಾಗಿದ್ದರು

ಕೆ.ಎಸ್.ಈಶ್ವರಪ್ಪ ನಾಯಕರಾಗಿದ್ದರು

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿದ್ದರು. ಆದರೆ, ಅವರು ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಬಳಿಕ ಅವರ ಪರಿಷತ್ ಸದಸ್ಯತ್ವ ಸ್ಥಾನ ರದ್ದಾಗಿದೆ.

English summary
BJP MLC from Udupi Kota Srinivas Poojary elected as Leader of the Opposition in the Legislative Council Karnataka. The post became vacant following K.S. Eshwarappa’s victory in Karnataka assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X