ಜ.2 ರಿಂದ 12ರ ವರೆಗೆ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ : ಕೋಟ ಶ್ರೀನಿವಾಸ ಪೂಜಾರಿ
ಬೆಳಗಾವಿ,ಡಿಸೆಂಬರ್ 27: ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ 'ಬೂತ್ ವಿಜಯ ಅಭಿಯಾನ'ವನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 58,156 ಬೂತ್‍ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ. ರಾಜ್ಯ, ಜಿಲ್ಲಾ, ತಾಲ್ಲೂಕು ಮಾತ್ರವಲ್ಲದೆ ಎಲ್ಲ ಘಟಕಗಳು, ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯದಲ್ಲಿರುವ ಪಕ್ಷದ ಕಾರ್ಯಕರ್ತರ ಹಾಗೂ ಮತದಾರರ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಯುವ ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಸೇರಿಸಲಾಗುವುದು, ಪ್ರತಿ ಬೂತ್‍ಗಳಲ್ಲಿ ಶೇ 100 ಮತದಾನ ಆಗುವ ರೀತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 20 ಲಕ್ಷ ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸುವರು ಎಂದರು.

ಪ್ರಧಾನಿಯವರ "ಮನ್ ಕೀ ಬಾತ್" ವೆಬ್ ಲಿಂಕನ್ನು 60 ಸಾವಿರ ಗುಂಪುಗಳು ಡೌನ್‍ಲೋಡ್ ಮಾಡಿಸುವಂತೆ ಪ್ರೇರೇಪಿಸಿ ಕಾರ್ಯಾನುಷ್ಠಾನ ಮಾಡಲಾಗುವುದು. ಪ್ರತಿ ಬೂತ್‍ನಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಭೆಯನ್ನು ಮಾಡಲಿದ್ದೇವೆ ಎಂದು ತಿಳಿಸಿದರು.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಲ್ಲ ಸಚಿವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ, ಜಿಲ್ಲೆ, ಮಂಡಲ ಪದಾಧಿಕಾರಿಗಳು ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಅಭಿಯಾನದ ಯಶಸ್ಸಿಗಾಗಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸಂಚಾಲಕರಾಗಿ ಕೋಟ ಶ್ರೀನಿವಾಸ ಪೂಜಾರಿ, ಸಹ ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ, ಸದಸ್ಯರಾಗಿ ಹೇಮಲತಾ ನಾಯಕ್, ಅರುಣ್ ಶಹಾಪುರ, ರಾಜೇಂದ್ರ ಮೈಸೂರು, ಕೇಶವ ಪ್ರಸಾದ್ ಅವರನ್ನು ನೇಮಿಸಿದ್ದಾರೆ. ಅಭಿಯಾನದ ಮೂಲಕ ರಾಜ್ಯದಲ್ಲಿ ಸಂಘಟನೆ ಬಲಪಡಿಸಲಿದ್ದೇವೆ. ಇದು ಬಿಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿ, ಬಿಜೆಪಿ ಕೇವಲ ಚುನಾವಣೆ ಬಂದಾಗ ಸಕ್ರಿಯವಾಗುವ ಪಕ್ಷವಲ್ಲ; ಅದು ನಿರಂತರ ಚಟುವಟಿಕೆಯಿಂದ ಕೂಡಿರುವ ಪಕ್ಷ ಎಂದರು.
ಕಳೆದ 2 ಚುನಾವಣೆಗಳಿಂದ ಪೇಜ್ ಪ್ರಮುಖ್ ನಿಯೋಜಿಸಿ ಕಾರ್ಯ ಮಾಡಿದ್ದು, ಈ ಬಾರಿ ಅದಕ್ಕೆ ಹೆಚ್ಚಿನ ಒತ್ತು ಕೊಡುತ್ತಿದ್ದೇವೆ. ಬಹುದೊಡ್ಡ ಅಭಿಯಾನ ಇದಾಗಲಿದೆ ಎಂದು ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್, ರಾಜ್ಯ ವಕ್ತಾರ ಮತ್ತು ಶಾಸಕ ಪಿ.ರಾಜೀವ್, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications