KPCC President: 'ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ'
ಬೆಂಗಳೂರು,ಡಿಸೆಂಬರ್ 24: ರಾಜ್ಯದಲ್ಲಿ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ಬಳಿಕ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಕೈ ಪಾಳಯದಲ್ಲಿ ಭಾರೀ ಚರ್ಚೆಯಾಗಿತ್ತು. ಇದೀಗ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಮಾತನಾಡಿ, ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ನಂತರ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಿದರು.

ಸಚಿವ ಸಂಪುಟ ಪುನರ್ ರಚನೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರಿಸಿದ ಎಂ ಬಿ ಪಾಟೀಲ್ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಇನ್ನೂ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಸಿ ಟಿ ರವಿ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು. ಸಿ ಟಿ ರವಿ ಅವರು ಹೇಳಿರುವ ಪದವನ್ನು ಯಾರು ಸೃಷ್ಟಿಸಿ ಹೇಳಲು ಸಾಧ್ಯವಿಲ್ಲ. ಆ ಪದ ಬಳಕೆ ಘೋರ ಅಪರಾಧ, ಕೆಟ್ಟ ಸಂಸ್ಕೃತಿ ಎಂದು ಸಿ ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದರು.
ವಿದ್ಯುತ್ ಪರಿವರ್ತಕಗಳ ಉತ್ಪಾದನೆಯಲ್ಲಿ ರಾಜ್ಯದ ಕೀರ್ತಿಗೆ ಹೊಸ ಆಯಾಮ!
ವಿದ್ಯುತ್ ಪರಿವರ್ತಕಗಳ(TC) ಉತ್ಪಾದನೆಯಲ್ಲಿ ಜಾಗತಿಕ ಮನ್ನಣೆಗಳಿಸುತ್ತಿರುವ ನಮ್ಮ NGEF ಕಾರ್ಖಾನೆಯು ಗುಜರಾತ್'ನ ರೈಲ್ವೆ ಯೋಜನೆಗಳಿಗೆ 14 ಟಿಸಿಗಳನ್ನು ಉತ್ಪಾದನೆ ಮಾಡಿ ಪೂರೈಕೆ ಮಾಡುತ್ತಿದೆ. ಪಂಜಾಬ್ ನ ಭಟಿಂದಾದಲ್ಲಿರುವ NGEF ಘಟಕ 9 ಟಿಸಿಗಳನ್ನು ಉತ್ಪಾದಿಸಿ, ಪರೀಕ್ಷೆಗೆ ಒಳಪಡಿಸಲು ಹುಬ್ಬಳ್ಳಿಯ ಘಟಕಕ್ಕೆ ಕಳುಹಿಸಿಕೊಡುತ್ತಿದೆ ಎಂದು ಎಂ ಬಿ ಪಾಟೀಲ್ ಹೇಳಿದರು.
ಇಲ್ಲಿ ಅವುಗಳ ಕಾರ್ಯಕ್ಷಮತೆಯನ್ನು ಪರೀಕ್ಷಿಸಿ ಗುಜರಾತ್'ನ ರೈಲ್ವೆ ಯೋಜನೆಗಳಿಗೆ ಕಳುಹಿಸಿಕೊಡಲಾಗುವುದು. ಈ ಪ್ರಕ್ರಿಯೆಯಲ್ಲಿ NGEF ತನ್ನ ತಾಂತ್ರಿಕ ತಜ್ಞತೆಯನ್ನು ಪರಿಣಾಮಕಾರಿಯಾಗಿ ಬಳಸುತ್ತಿದ್ದು,ಯಶಸ್ವೀ ಕಾರ್ಯಾಚರಣೆಗಳಿಗೆ ಭದ್ರತೆಯನ್ನು ನೀಡುತ್ತಿರುವುದು ವಿಶೇಷವಾಗಿದೆ. ಈ ಸಾಧನೆ ರಾಜ್ಯದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿದೆ.ನಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ NGEF ಕಾರ್ಖಾನೆಗೆ #ನಮ್ಮಸರ್ಕಾರ ದ ಅವಧಿಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಫಲವಾಗಿ ಸಂಸ್ಥೆ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದಾರೆ.












Click it and Unblock the Notifications