ನಾಯಕತ್ವ ಇಲ್ಲದ ಬಿಜೆಪಿ ಈಗ ಮೋದಿ ಅವರ ಮುಂದಿಟ್ಟು ಚುನಾವಣೆ ಮಾಡುತ್ತಿದೆ: ಡಿ ಕೆ ಶಿವ ಕುಮಾರ್ ಹೇಳಿದ್ದೇನು.?

ಜನ ಈ ಡಬಲ್ ಇಂಜಿನ ಸರ್ಕಾರಕ್ಕೆ ಅಧಿಕಾರ ಕೊಟ್ಟಾಗಿದೆ. ಯಡಿಯೂರಪ್ಪ ವಿಫಲರಾದರೂ ನಾಯಕತ್ವ ಇಲ್ಲದ ಬಿಜೆಪಿ ಈಗ ಮೋದಿ ಅವರ ಮುಂದಿಟ್ಟು ಚುನಾವಣೆ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಭದ್ರಾವತಿ, ಫೆಬ್ರವರಿ8: ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ನಾವು ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುವುದಾಗಿ ಹೇಳಿದ್ದರು. ಈಗ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದಿದ್ದಾರೆ. ಆ ಮೂಲಕ ಬೊಮ್ಮಾಯಿ ಅವರ ಆಡಳಿತವೂ ವಿಫಲವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಹೇಳಿದ್ದಾರೆ.

ಈ ಕುರಿತು ಬುಧವಾರ ಭದ್ರಾವತಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜನ ಈ ಡಬಲ್ ಇಂಜಿನ ಸರ್ಕಾರಕ್ಕೆ ಅಧಿಕಾರ ಕೊಟ್ಟಾಗಿದೆ. ಯಡಿಯೂರಪ್ಪ ವಿಫಲರಾದರೂ ನಾಯಕತ್ವ ಇಲ್ಲದ ಬಿಜೆಪಿ ಈಗ ಮೋದಿ ಅವರ ಮುಂದಿಟ್ಟು ಚುನಾವಣೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಕೇವಲ ಅರ್ಧ ಗಂಟೆಯಲ್ಲಿ ತೀರ್ಮಾನ ಮಾಡಬಹುದು. ಆದರೆ ಈ ಬಗ್ಗೆ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.

KPCC President D K Shivakumar Outraged On bjp government

ಭದ್ರಾವತಿಯಲ್ಲಿ ಪ್ರಜಾಧ್ವನಿ ಸಮಾವೇಶಕ್ಕೂ ಮುನ್ನ ವಿಐಎಸ್ಎಲ್ ಕಾರ್ಮಿಕರ ಜತೆ ಚರ್ಚೆ ಮಾಡಿ ಅವರ ಅಳಲು ಕೇಳಿದ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನದ ಬಗ್ಗೆ ಕಿಡಿಕಾರಿದರು. ಅಲ್ಲದೆ ಈ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಪುನರಾರಂಭ ಮಾಡಬೇಕು ಎಂದು ಆಗ್ರಹಿಸಿದರು.

'ನಾವು ಮಲೆನಾಡು ಭಾಗಕ್ಕೆ ಬಂದಿದ್ದು, ಶಿವಮೊಗ್ಗ, ಭದ್ರಾವತಿಯಲ್ಲಿ ಮಾತ್ರ ನಮ್ಮ ಪಕ್ಷದ ಶಾಸಕರಾಗಿದ್ದಾರೆ. ಕಳೆದ ಚುನಾವಣೆ ನಂತರ ತೀರ್ಥಹಳ್ಳಿಯ ಮಂಜುನಾಥ್ ಗೌಡ, ಸೊರಬದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ ಸರ್ಕಾರವಿದೆ. ಈ ಜಿಲ್ಲೆ ಬಹಳ ನಾಯಕರನ್ನು ನೀಡಿದೆ. ರಾಜ್ಯದ ಗೃಹ ಸಚಿವರು ಈ ಜಿಲ್ಲೆಯವರು.

ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ. ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್ಎಲ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹೋದಾಗ, ಸಿದ್ದರಾಮಯ್ಯ ಅವರ ಸರ್ಕಾರವಿತ್ತು. ಆಗ ಸಂಗಮೇಶ್ ಅವರು ಮಾಜಿ ಶಾಸಕರಾಗಿದ್ದರೂ ಈ ಕಾರ್ಖಾನೆಗೆ ಗಣಿ ಜಾಗ ಮಂಜೂರು ಮಾಡಿಸಿದ್ದರು. ಆದರೂ ಕೇಂದ್ರ ಸರ್ಕಾರ ಈ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ ಮತ್ತೆ ಆರಂಭಕ್ಕೆ ಆದ್ಯತೆ ನೀಡಲಿಲ್ಲ.

KPCC President D K Shivakumar Outraged On bjp government

ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು 1 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದರು. ನಂತರ ಕೇಂದ್ರ ಸಚಿವರು ಬಂದು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ನೀಡುವುದಾಗಿ ಹೇಳಿದ್ದರು. ಇದ್ಯಾವುದನ್ನು ಮಾಡಲಿಲ್ಲ. ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ.

ಜನರಿಗೆ ಉದ್ಯೋಗ ನೀಡಿ, ಸುಸ್ಥಿರ ವ್ಯಾಪಾರ ವಹಿವಾಟು ನಡೆಸಲು ನೆಹರೂ ಅವರು ಅನೇಕ ಸಾರ್ವಜನಿಕ ಕಾರ್ಖಾನೆ , ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಉಕ್ಕಿನ ಕಾರ್ಖಾನೆ ಹಾಗೂ ಕಾಗದ ಕಾರ್ಖಾನೆ ಎರಡು ಸರ್ಕಾರದ ಸ್ವಾಮ್ಯದಲ್ಲೇ ಮುಂದುವರಿಯಬೇಕು, ಅವುಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಖಾಸಗಿಯವರಿಂದ ನಡೆಸಲಾಗುವ ಕಾರ್ಖಾನೆಯನ್ನು ಸರ್ಕಾರ ಯಾಕೆ ನಡೆಸಲು ಸಾಧ್ಯವಾಗುತ್ತಿಲ್ಲ? ಅಂದರೆ ನಿಮಗೆ ಆಡಳಿತ ನಡೆಸಲು ಆಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+