• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನಸಾಮಾನ್ಯರು ಅಭಿವೃದ್ಧಿ ಮತ್ತು ಶಾಂತಿಯನ್ನು ಭಯಸುತ್ತಾರೆ: ಡಿ.ಕೆ ಶಿವಕುಮಾರ್‌

|
Google Oneindia Kannada News

ಬೆಂಗಳೂರು ಡಿಸೆಂಬರ್‌ 8: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ 5:00ರ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಜನಸಾಮಾನ್ಯರು ಅಭಿವೃದ್ಧಿ ಮತ್ತು ಶಾಂತಿಯನ್ನು ಭಯಸುತ್ತಾರೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್‌ ಪಕ್ಷವು ಎಂದಿನಂತೆ ಸಾರ್ವಜನಿಕರ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಶ್ರಮವಹಿಸಿದ ಕಾರ್ಯಕರ್ತರಿಗೂ ಹಾಗೂ ಪಕ್ಷದ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅಭಿನಂದನೆ ತಿಳಿಸಿದ್ದಾರೆ.

ಹಿಮಾಚಲ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಸಂಜೆ 5:00ರ ಫಲಿತಾಂಶದಂತೆ ಕಾಂಗ್ರೆಸ್ ಪಕ್ಷ 16 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. 23 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಬಿಜೆಪಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ, 13 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು 3 ಜನ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ಜನ ಬೆಂಬಲ ಸಿಕ್ಕಿದೆ.

English summary
KPCC President D.K Shivakumar Reaction on Gujarat and Himachal Pradesh Election Result 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X