ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿ ಸರ್ಕಾರ ಅಲ್ಲಾಡುತ್ತಿರುವಾಗ ಕೆಪಿಸಿಸಿ ಅಧ್ಯಕ್ಷರ ವಿದೇಶ ಪ್ರವಾಸ!

|
Google Oneindia Kannada News

ಬೆಂಗಳೂರು, ಜುಲೈ 02: ಈಗಾಗಲೇ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಕೆಲವು ಹಿರಿಯ ಶಾಸಕರು ಬಹಿರಂಗವಾಗಿ ಪಕ್ಷದ ವಿರುದ್ಧ ಗುಟುರು ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಆಪ್ತ ಶಾಸಕರು ಕಾಂಗ್ರೆಸ್‌ ಗೆ ಕೈ ಕೊಡುವ ಸಾಧ್ಯತೆಗಳಿವೆ, ಇಂತಹಾ ಸಂಧಿಗ್ದ ಪರಿಸ್ಥಿತಿಯಲ್ಲಿ ದಿನೇಶ್ ಗುಂಡೂರಾವ್ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಹೌದು, ಸರ್ಕಾರಕ್ಕೆ ಪಥನದ ಭೀತಿ ಪ್ರಾರಂಭವಾಗಿರುವ ಈ ಹೊತ್ತಿನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಎಲ್ಲರ ಆಟ ನನಗೆ ಗೊತ್ತಿದೆ: ಸಚಿವ ಡಿಕೆ ಶಿವಕುಮಾರ್ ಎಲ್ಲರ ಆಟ ನನಗೆ ಗೊತ್ತಿದೆ: ಸಚಿವ ಡಿಕೆ ಶಿವಕುಮಾರ್

ದಿನೇಶ್ ಗುಂಡೂರಾವ್ ಅವರು ಲಂಡನ್ ಪ್ರವಾಸ ಹೊರಟಿದ್ದು, ಕುಟುಂಬ ಸದಸ್ಯರೊಂದಿಗೆ 10 ದಿನಗಳ ಕಾಲ ಲಂಡನ್, ಸಿಂಗಪುರ ಸೇರಿದಂತೆ ಇನ್ನೂ ಹಲವು ಕಡೆ ಸುತ್ತಾಡಿ ವಾಪಸ್ಸಾಗಲಿದ್ದಾರೆ.

KPCC president Dinesh Gundu Rao going to London tour

ದಿನೇಶ್ ಗುಂಡೂರಾವ್ ಅವರ ಈ ಖಾಸಗಿ ಪ್ರವಾಸ ಪುರ್ವ ನಿಗದಿಯಾಗಿದ್ದ ಕಾರಣ, ದಿನೇಶ್ ಗುಂಡೂರಾವ್ ಅವರು ಪ್ರವಾಸಕ್ಕೆ ತೆರಳಿದ್ದಾರೆ. ಆದರೆ ಅವರ ಈ ಪ್ರವಾಸದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.

ಸ್ಪೀಕರ್ ರಮೇಶ್ ಕುಮಾರ್ ಕೈಲಿದೆ ಜೆಡಿಎಸ್ -ಕಾಂಗ್ರೆಸ್ ಸರ್ಕಾರದ ಭವಿಷ್ಯ ಸ್ಪೀಕರ್ ರಮೇಶ್ ಕುಮಾರ್ ಕೈಲಿದೆ ಜೆಡಿಎಸ್ -ಕಾಂಗ್ರೆಸ್ ಸರ್ಕಾರದ ಭವಿಷ್ಯ

ಇನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳು ದಿನೇಶ್ ಗುಂಡೂರಾವ್ ಪ್ರವಾಸವನ್ನು ಸಮರ್ಥಿಸಿಕೊಂಡಿದ್ದಾರೆ. ದಿನೇಶ್ ಗುಂಡೂರಾವ್ ಪ್ರವಾಸದ ಬಗ್ಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಸರ್ಕಾರಕ್ಕೆ ಏನೂ ಆಗದು ಎಂಬ ವಿಶ್ವಾಸ ಅವರಿಗಿದೆ, ಅಲ್ಲದೆ ಅವರಿಗೂ ಕುಟುಂಬವಿದೆ, ಅದಕ್ಕೆ ಅವರು ಸಮಯ ಕೊಡಬೇಕಿದೆ ಎಂದು ಹೇಳಿದ್ದಾರೆ.

English summary
KPCC president Dinesh Gundu Rao is on London tour for 10 days. here in state two congress MLAs already resigned their post, sensitive conditions for Karnataka congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X