ಡಿ. ಕೆ. ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು, ಸೆಪ್ಟೆಂಬರ್ 04: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಸೋಂಕಿನಿಂದ ಗುಣಮುಖಗೊಂಡಿದ್ದ ಅವರು ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದರು.

Recommended Video

      ಇದ್ದಕ್ಕಿದ್ದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ DK ಶಿವಕುಮಾರ್ | Oneindia Kannada

      ಜ್ವರ ಮತ್ತು ಕಫದ ಕಾರಣ ಡಿ. ಕೆ. ಶಿವಕುಮಾರ್ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಆಗಸ್ಟ್ 24ರಂದು ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 31ರಂದು ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.

      KPCC President DK Shivakumar Admitted To Hospital Again

      ವೈದ್ಯರ ಸಲಹೆಯಂತೆ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಈಗ ಪುನಃ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಡಿ. ಕೆ. ಶಿವಕುಮಾರ್ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ.

      ಡಿ. ಕೆ. ಶಿವಕುಮಾರ್ ಆಸ್ಪತ್ರೆಯಲ್ಲಿದ್ದಾಗ ಅಲ್ಲಿಂದಲೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಅಭಿಮಾನಿಗಳು, ಕಾರ್ಯಕರ್ತರು ತಮ್ಮನ್ನು ಭೇಡಿ ಮಾಡಲು ಬರಬಾರದು ಎಂದು ಮನವಿ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+