ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಫೈಟ್; ಸಿದ್ದರಾಮಯ್ಯ ಭೇಟಿಯಾದ ಡಿಕೆಶಿ

|
Google Oneindia Kannada News

ಬೆಂಗಳೂರು, ಜೂನ್ 16 : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Recommended Video

COVID-19 have connection with the solar eclipse? | Oneindia Kannada

ಮಂಗಳವಾರ ಸಂಜೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದರು. ಕೆಲವು ಹೊತ್ತು ಅವರ ಜೊತೆ ವಿಧಾನ ಪರಿಷತ್ ಚುನಾವಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಪರಿಷತ್ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರಿ ಲಾಬಿ!ಪರಿಷತ್ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರಿ ಲಾಬಿ!

ಜೂನ್ 29ರಂದು ಕರ್ನಾಟಕದ ವಿಧಾನಸಭೆಯಿಂದ 7 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಶಾಸಕ ಬಲದ ಆಧಾರದ ಮೇಲೆ ಕಾಂಗ್ರೆಸ್‌ಗೆ 2 ಸ್ಥಾನ ಸಿಗಲಿದೆ. ಇದಕ್ಕೆ ಡಜನ್‌ಗೂ ಅಧಿಕ ಆಕಾಂಕ್ಷಿಗಳಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಸೋಮವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಯಿತು. ಆದರೆ, ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಜೂನ್ 18 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ವಿಧಾನ ಪರಿಷತ್ ಚುನಾವಣೆ; ಯಡಿಯೂರಪ್ಪ ಮಾತೇ ಅಂತಿಮ! ವಿಧಾನ ಪರಿಷತ್ ಚುನಾವಣೆ; ಯಡಿಯೂರಪ್ಪ ಮಾತೇ ಅಂತಿಮ!

ಟಿಕೆಟ್ ಆಕಾಂಕ್ಷಿಗಳು ಹೆಚ್ಚು

ಟಿಕೆಟ್ ಆಕಾಂಕ್ಷಿಗಳು ಹೆಚ್ಚು

ವಿಧಾನಸಭೆಯಲ್ಲಿ 68 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಯಲ್ಲಿ 2 ಸ್ಥಾನದಲ್ಲಿ ಜಯಗಳಿಸಬಹುದು. ಆದರೆ, ನಿವೃತ್ತಿಯಾಗುವ ಸದಸ್ಯರು ಮರು ಆಯ್ಕೆ ಬಯಸಿದ್ದಾರೆ. ಅಲ್ಪ ಸಂಖ್ಯಾತ, ಮಹಿಳಾ, ಹಿಂದುಳಿದ ವರ್ಗ ಹೀಗೆ ವಿವಿಧ ಕೋಟಾದಡಿ ಹಿರಿಯ ನಾಯಕರು ಟಿಕೆಟ್ ಕೇಳುತ್ತಿದ್ದು ಕಗ್ಗಂಟಾಗಿದೆ.

ರಾಜ್ಯಸಭೆ ಟಿಕೆಟ್ ವಂಚಿತರು

ರಾಜ್ಯಸಭೆ ಟಿಕೆಟ್ ವಂಚಿತರು

ರಾಜ್ಯಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸೀಟು ಬಿಟ್ಟುಕೊಟ್ಟ ರಾಜೀವ್ ಗೌಡ, ತುಮಕೂರು ಕ್ಷೇತ್ರದ ಮಾಜಿ ಸಂಸದ ಮುದ್ದಹನುಮೇಗೌಡ ಸೇರಿದಂತೆ ಹಲವರು ಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂಬ ಕೂಗು ಸಹ ಎದ್ದಿದ್ದು ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ.

ಯಾವ-ಯಾವ ನಾಯಕರು?

ಯಾವ-ಯಾವ ನಾಯಕರು?

ಮಾಜಿ ಸಚಿವ ಎಚ್‌. ಎಂ. ರೇವಣ್ಣ, ಎಂ. ಆರ್. ಸೀತಾರಾಮ್ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಮೋಹನ್ ಬಾಬು, ಐವಾನ್ ಡಿಸೋಜಾ, ನಝೀರ್ ಅಹ್ಮದ್, ಅಬ್ದುಲ್ ಜಬ್ಬಾರ್ ಹೆಸರುಗಳು ಸಹ ಕೇಳಿ ಬರುತ್ತಿವೆ. ಎರಡು ಸೀಟುಗಳನ್ನು ಯಾರಿಗೆ ನೀಡಬೇಕು? ಎಂಬುದು ಭಾರಿ ಚರ್ಚೆಗೆ ಕಾರಣವಾಗಿದೆ.

ಕೆ. ಸಿ. ವೇಣುಗೋಪಾಲ್ ತೀರ್ಮಾನ

ಕೆ. ಸಿ. ವೇಣುಗೋಪಾಲ್ ತೀರ್ಮಾನ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆ ಕಣಕ್ಕಿಳಿದಿದ್ದಾರೆ. ಅವರು ಡಿ. ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

English summary
Karnataka Pradesh Congress Committee president D. K. Shivakumar met the Opposition leader of Karnataka Siddaramaiah and discuss about legislative council elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X