ನಮ್ಮ ರಾಜ್ಯದ ಒಂದೂ ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ತಯಾರಿಲ್ಲ: ಡಿ ಕೆ ಶಿವಕುಮಾರ್ ಕಿಡಿ
ಬೆಳಗಾವಿ, ಡಿಸೆಂಬರ್ 27: ನಮ್ಮ ರಾಜ್ಯದ ಒಂದು ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ತಯಾರಿಲ್ಲ, ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದ ಒಂದೂ ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ನಾವು ತಯಾರಿಲ್ಲ. ಅವರ ಒಂದು ಹಳ್ಳಿಯೂ ನಮಗೆ ಬೇಡ. ಎರಡೂ ರಾಜ್ಯಗಳ ಗಡಿ ಅಂತಿಮವಾಗಿದ್ದು, ನಮ್ಮ ಜನ ಅದರಂತೆ ಬದುಕುತ್ತಿದ್ದಾರೆ ಎಂದರು
ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಕುತಂತ್ರದಿಂದ ಅಲ್ಲಿನ ಸಚಿವರು ಇದನ್ನು ಆರಂಭಿಸಿದ್ದು, ಈಗ ಎಲ್ಲಾ ಪಕ್ಷದವರು ಇದಕ್ಕೆ ಸೇರಿಕೊಂಡಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ರಾಜ್ಯವನ್ನು ಕಾಪಾಡಬೇಕು. ನಮ್ಮ ಪಕ್ಷ ಮುಂದಾಳತ್ವ ತೆಗೆದುಕೊಳ್ಳಲಿದೆ. ನಮ್ಮ ಭಾಷೆ, ನೆಲ, ಜಲ ಕಾಪಾಡುವುದು ನಮ್ಮ ಕರ್ತವ್ಯ. ಇದಕ್ಕೆ ಅಗತ್ಯ ಸಹಕಾರ ನೀಡಲು ನಾವು ಸಿದ್ಧ. ಮಹಾರಾಷ್ಟ್ರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ. ಸದನದಲ್ಲಿ ನಾವು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ.

ಇದು ಅಶಾಂತಿ ಮೂಡಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಆಡುತ್ತಿರುವ ನಾಟಕ. ಇಲ್ಲಿನ ಜನರ ಭಾವನೆ ಕೆದಕಿ, ಅವರ ಬದುಕಿನಲ್ಲಿ ದ್ವೇಷ ಹಾಗೂ ಅಸೂಯೆ ಮೂಡಿಸುವ ಪ್ರಯತ್ನ ಇದಾಗಿದೆ. ಎಲ್ಲ ಕನ್ನಡಪರ ಸಂಘಟನೆಗಳು ಒಟ್ಟಾಗಿ ಯಾವುದೇ ಅಳುಕಿಲ್ಲದೆ ಇದನ್ನು ಪ್ರತಿಭಟಿಸೋಣ, ರಾಜ್ಯದ ಗೌರವ ಉಳಿಸಿಕೊಳ್ಳೋಣ.
ಕೇಂದ್ರದಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಚುನಾವಣೆ ಸಮಯದಲ್ಲಿ ಇವರ ರಾಜಕೀಯ ಹಿತಾಸಕ್ತಿಗಾಗಿ ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ರಾಜ್ಯದಲ್ಲಿರುವ ಮರಾಠಿ ಭಾಷಿಗರೂ ನಮ್ಮವರೇ. ಎಲ್ಲರೂ ಶಾಂತಿಯುತವಾಗಿ ಬದುಕಲು ಬಯಸುತ್ತಾರೆ. ಈ ಭಾಗದ ಜನರ ಹಕ್ಕು, ಹಿತಾಸಕ್ತಿ ಕಾಪಾಡಲು ಇಲ್ಲಿ ಸುವರ್ಣಸೌಧ ನಿರ್ಮಾಣ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರದ ಇಂತಹ ನಿರ್ಣಯ ನಾಚಿಕೆಗೇಡಿನ ವಿಚಾರವಾಗಿದ್ದು, ನಾವು ಇದನ್ನು ಖಂಡಿಸುತ್ತೇವೆ ಎಂದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications