ಭ್ರಷ್ಟ BJP ಸರ್ಕಾರವು ಚುನಾವಣೆಗೆ ಹಣ ಹೊಂದಿಸಲು ಕಾಂಟ್ರಾಕ್ಟರ್‌ಗಳಿಂದ ಕಮಿಷನ್‌ ವಸೂಲಿ: ಡಿಕೆಶಿ ಆರೋಪ

ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರ ಕಾಂಟ್ರಾಕ್ಟರ್‌ಗಳಿಂದ ಕಮಿಷನ್‌ ವಸೂಲಿ ಮಾಡುತ್ತಿದೆ ಎಂದು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು,ಫೆಬ್ರವರಿ15: ಭ್ರಷ್ಟ BJP ಸರ್ಕಾರವು ಚುನಾವಣೆಗೆ ಹಣ ಹೊಂದಿಸಲು ಬೀದಿಯಲ್ಲಿ ನಿಂತು ಕಾಂಟ್ರಾಕ್ಟರ್‌ಗಳಿಂದ ಕಮಿಷನ್‌ ವಸೂಲಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕರಿದ್ದಾರೆ.

ಈ ಕುರಿತು ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರ ಕಾಂಟ್ರಾಕ್ಟರ್‌ಗಳಿಂದ ಕಮಿಷನ್‌ ವಸೂಲಿ ಮಾಡುತ್ತಿದೆ. ಅವರ ಮನೆಬಾಗಿಲಿಗೆ ಹೋಗಿ ಟೆಂಡರ್‌ ನೀಡುತ್ತಿದೆ. ನೀರಾವರಿ, ಆರೋಗ್ಯ ಸೇರಿದಂತೆ ಹಲವು ಇಲಾಖೆಯಲ್ಲಿನ ₹500 ಕೋಟಿ ಟೆಂಡರ್‌ ಅನ್ನು ₹1000 ಕೋಟಿಗೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರಿಗಿರಿ ತಪ್ಪಿದವರಿಗೆ ಸಾವಿರಾರು ಕೋಟಿ ರೂ. ಟೆಂಡರ್ ನೀಡಲಾಗುತ್ತಿದೆ. ನಾವು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟ ಬಿಜೆಪಿ ಸರ್ಕಾರ ಅಕ್ರಮವಾಗಿ ನೀಡಿರುವ ಎಲ್ಲ ಟೆಂಡರ್‌ಗಳನ್ನು ರದ್ದು ಮಾಡುತ್ತೇವೆ. ಗುತ್ತಿಗೆದಾರರು, ರಾಜಕಾರಣಿಗಳು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಇದು ನಾವು ನೀಡುತ್ತಿರುವ ಕಡೆಯ ಎಚ್ಚರಿಕೆ ಎಂದು ಹೇಳಿದರು.

KPCC President DK Shivakumar Outraged On BJP Government

ಇನ್ನೂ ಈ ಬಿಜೆಪಿ ಸರ್ಕಾರದ ಅವಧಿ ಒಂದು ತಿಂಗಳು ಮಾತ್ರ. ಬಜೆಟ್ ಅಧಿವೇಶನದ ನಂತರ ಮುಂದಿನ ತಿಂಗಳು 7-10 ರ ಒಳಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಬಿಜೆಪಿ ಸರ್ಕಾರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಇಂಧನ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಟೆಂಡರ್ ಗಳನ್ನು ತರಾತುರಿಯಲ್ಲಿ ಸಿದ್ಧಪಡಿಸುತ್ತಿದೆ. 500 ಕೋಟಿ ರೂ ಮೌಲ್ಯದ ಟೆಂಡರ್ ಇದ್ದರೆ ಅದರ ಅಂದಾಜು ಮೊತ್ತವನ್ನು 1000 ಕೋಟಿಯಷ್ಟು ಮಾಡಿಸಿದ್ದಾರೆ. ಈ ಬಗ್ಗೆ ನಾವು ಎಲ್ಲ ರೀತಿಯ ದಾಖಲೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದರು.

ಪ್ರಮುಖ ಇಲಾಖೆಗಳಲ್ಲಿ ಪ್ರತಿ ಟೆಂಡರ್ ಮೊತ್ತವನ್ನು ದುಪ್ಪಟ್ಟು ಮಾಡಿ ಕೆಲವನ್ನು ಸಂಪುಟದಲ್ಲಿ ತೀರ್ಮಾನಿಸಿ ನೀಡಿದರೆ, ಮತ್ತೆ ಕೆಲವನ್ನು ಸಂಪುಟದ ತೀರ್ಮಾನವಿಲ್ಲದೇ ಕೇವಲ 7 ದಿನಗಳ ಅಲ್ಪಾವಧಿಯಲ್ಲೇ ನೀಡುತ್ತಿದ್ದಾರೆ. ಶಾಸಕರುಗಳಿಗೆ ಇದರ ಉಸ್ತುವಾರಿ ವಹಿಸಿ, ಅವರೇ ಗುತ್ತಿಗೆದಾರರನ್ನು ಗುರುತಿಸಿ ಟೆಂಡರ್ ನೀಡುವ ಜವಾಬ್ದಾರಿ ನೀಡಲಾಗಿದೆ. ಈ ಶಾಸಕರು ಬೀದಿ, ಬೀದಿಯಲ್ಲಿ ಗುತ್ತಿಗೆದಾರರಿಗೆ ಆಹ್ವಾನ ನೀಡಿ ಈ ಟೆಂಡರ್ ಪಡೆಯಲು ಚುನಾವಣೆಗೂ ಮುನ್ನ ಇಂತಿಷ್ಟು ಹಣ ನೀಡಬೇಕು ಎಂದು ಹೇಳುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ದೂರು ನೀಡಿದ್ದಾರೆ ಎಂದು ಹೇಳಿದರು.

KPCC President DK Shivakumar Outraged On BJP Government

ಬೆಂಗಳೂರು ನಗರದಲ್ಲಿ ಯಾವುದಾದರೂ ಕೆಲಸ ಆಗಬೇಕಾದರೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಡೀಲ್ ಆಗುತ್ತಿವೆ. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸರ್ಕಾರ 7100 ಕೋಟಿ ವೆಚ್ಚ ಮಾಡಿರುವುದಾಗಿ ತಿಳಿಸಿದ್ದು, ಯಾವ ರಸ್ತೆ ಗುಂಡಿ ಮುಕ್ತವಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ. ಸರ್ಕಾರ, ಗುತ್ತಿಗೆದಾರರು, ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದ ನಂತರ ಕಳೆದ 6 ತಿಂಗಳಿಂದ ನಡೆಸಲಾಗಿರುವ ಅಕ್ರಮ ಟೆಂಡರ್ ಗಳನ್ನು ನಾವು ರದ್ದು ಮಾಡಲಿದ್ದೇವೆ. ಎಲ್ಲ ಟೆಂಡರ್ ತನಿಖೆ ಮಾಡಿಸುತ್ತೇವೆ. ಆ ಮೂಲಕ ಈ ಭ್ರಷ್ಟಾಚಾರದ ಕೂಪವನ್ನು ಕಿತ್ತುಹಾಕುತ್ತೇವೆ ಎಂದು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+