ಡಿ.ಕೆ. ಶಿವಕುಮಾರ್‌ಗೆ ಶಾಕ್ ನೀಡಿ, ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ...
ಸಿದ್ದರಾಮಯ್ಯ ಬಣ & ಡಿ.ಕೆ. ಶಿವಕುಮಾರ್ ಬಣ ಎಂದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ನಡೆಯುತ್ತಿದೆ ಅಂತಾ ಬಿಜೆಪಿ & ಜೆಡಿಎಸ್ ನಾಯಕರು ಆರೋಪ ಮಾಡುತ್ತಿದ್ದರು. ಈಗ ಆರೋಪಗಳು ನಿಜವಾಗುತ್ತಿದ್ದು, ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ ಮತ್ತೆ ತೀವ್ರ ಹಿನ್ನಡೆ ಅನುಭವಿಸುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಕರ್ನಾಟಕ ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎನ್ನುವಾಗಲೇ, ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ನೀಡಿ, ದಿಢೀರ್ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ...
ಮುಖ್ಯಮಂತ್ರಿ ಆಗಬೇಕು ಎಂಬುದು ಡಿ.ಕೆ. ಶಿವಕುಮಾರ್ ಅವರ ಕನಸು, ಮತ್ತೊಂದು ಕಡೆ ಸಿದ್ದರಾಮಯ್ಯ ಅವರು ತಮ್ಮ ವರ್ಚಸ್ಸು ಹಾಗೂ ಪ್ರಭಾವ ಬಳಸಿ 2023 ರಲ್ಲಿ ಮತ್ತೊಮ್ಮೆ ಅಂದ್ರೆ 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದರು. ಇದು ಡಿ.ಕೆ. ಶಿವಕುಮಾರ್ ಅವರ ಬೆಂಬಲಕ್ಕೆ ನಿಂತಿರುವ ಶಾಸಕರಿಗೆ ಕೋಪ ತರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನ ಬದಲಾವಣೆ ಮಾಡಲು ತೆರೆಮರೆ ಪ್ರಯತ್ನಗಳು ನಡೆಯುತ್ತಾ ಇದ್ದವು. ಹೀಗಿದ್ದಾಗಲೇ, ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ನೀಡಿ, ದಿಢೀರ್ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ....
ಹೌದು, ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ನೀಡಿ, ದಿಢೀರ್ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಇದೀಗ ಸಿದ್ದರಾಮಯ್ಯ ಅವರ ಬಣ ಎಲ್ಲಾ ರೀತಿಯ ಪ್ರಯತ್ನ ಆರಂಭಿಸಿದೆ ಎಂಬ ಸ್ಫೋಟಕ ಸುದ್ದಿ ಆವರಿಸಿದೆ. ಹಾಗಾದ್ರೆ ದಿಢೀರ್ ಈ ರೀತಿಯ ಸುದ್ದಿಯು ಇದೀಗ ಜೋರಾಗಿ ಹಬ್ಬಲು ಕಾರಣ ಏನು? ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು, ಡಿ.ಕೆ. ಶಿವಕುಮಾರ್ ಅವರು ನಾಳೆಯೇ ತಮ್ಮ ಸ್ಥಾನ ಬಿಟ್ಟು ಕೊಡುತ್ತಾರಾ? ಮುಂದೆ ಓದಿ.
ಸಿದ್ದರಾಮಯ್ಯ ಬೆಂಬಲಿಗ ಸಚಿವರು & ಶಾಸಕರು....
ಅಂದಹಾಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಿನ್ನೆ ಅಂದ್ರೆ ಗುರುವಾರ ರಾತ್ರಿ ಭರ್ಜರಿ ಡಿನ್ನರ್ ಪಾರ್ಟಿ ನಡೆದಿದೆ. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ನಡೆದ ಭರ್ಜರಿ ಡಿನ್ನರ್ ಪಾರ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಈ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗ ಸಚಿವರು & ಶಾಸಕರು ಭಾಗವಹಿಸಿದ್ದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಂದರೆ, ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವ ಚರ್ಚೆ ನಡೆದಿದೆ ಎಂಬ ಸ್ಫೋಟಕ ಸುದ್ದಿ ಹಬ್ಬಿದೆ!
ಹೌದು, ಸಂಪುಟ ಸಭೆ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಅವರ ಅಧಿಕೃತ ನಿವಾಸದಲ್ಲೇ ಈ ಡಿನ್ನರ್ ಪಾರ್ಟಿ ನಡೆದಿದೆ ಎನ್ನಲಾಗಿದೆ. ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ & ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಅದರಲ್ಲೂ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇರುವ ಸಮಯದಲ್ಲೇ ಹೀಗೆ ಸಿದ್ದರಾಮಯ್ಯ ಬಣದ ಸಚಿವರು & ಶಾಸಕರ ಕಡೆಯಿಂದ ಬೃಹತ್ ಮೀಟಿಂಗ್ ನಡೆದಿರುವುದು ಭಾರಿ ಸಂಚಲನ ಸೃಷ್ಟಿ ಮಾಡಿದೆ. ಜನವರಿ ತಿಂಗಳಲ್ಲೇ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾಗುತ್ತಾ? ಎಂಬ ಪ್ರಶ್ನೆ ಮೂಡಿದೆ.












Click it and Unblock the Notifications