ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು

ಬೆಂಗಳೂರು, ಆಗಸ್ಟ್ 25: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.

Recommended Video

      Annamalai IPS : ಕಮಲ ಹಿಡಿದು ಕಮಾಲ್ ಮಾಡ್ತಾರ ಸಿಂಗಂ | Oneindia Kannada

      ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

      KPCC President DK Shivakumar Tests Positive For COVID 19

      ಡಿ. ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಯಾವ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

      ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಡಿ. ಕೆ. ಶಿವಕುಮಾರ್ ಅವರು ಯಾರ ಯಾರ ಜೊತೆ ಸಂಪರ್ಕದಲ್ಲಿದ್ದರು ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಎರಡು ದಿನದಲ್ಲಿ ಹಲವಾರು ಸಭೆಗಳನ್ನು ಅವರು ನಡೆಸಿದ್ದರು.

      ಕರ್ನಾಟಕದಲ್ಲಿ ಸೋಮವಾರ 5851 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+