ಡಿ.ಕೆ.ಶಿವಕುಮಾರ್ ಉಲ್ಲೇಖಿಸಿದ ಬಿಎಸ್ವೈ ಸರಕಾರದ 'ಮೆಂಟಲ್' ಸಚಿವರಾರು?

ಕರ್ನಾಟಕ ಬಿಜೆಪಿ ವಲಯದಲ್ಲಿ ಆಂತರಿಕ ಭಿನ್ನಮತ ಸ್ಪೋಟಗೊಂಡ ನಂತರ, ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ಜೋರಾಗಿದೆ. ಜೊತೆಗೆ, ರಾಜ್ಯಸಭಾ ಚುನಾವಣೆಯೂ ಹತ್ತಿರ ಬರುತ್ತಿರುವುದರಿಂದ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ ಹೆಚ್ಚಾಗುತ್ತಿದೆ.

Recommended Video

      Chiranjeevi Sarja | ಸ್ಯಾಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ | Oneindia Kannada

      ಬಿಜೆಪಿಯ ಭಿನ್ನಮತದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಹೊರತಾಗಿ, ಯಾರೂ ಹೇಳಿಕೆ ನೀಡಬಾರದು ಎಂದು ಡಿ.ಕೆ.ಶಿವಕುಮಾರ್, ಕಾಂಗ್ರೆಸ್ಸಿಗರಿಗೆ ಫರ್ಮಾನು ಹೊರಡಿಸಿದ್ದಾರೆ.

      ಕಾಂಗ್ರೆಸ್ಸಿನ ಇಪ್ಪತ್ತಕ್ಕೂ ಹೆಚ್ಚು ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನುವ ಜಲಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ.

      ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾರಕಿಹೊಳಿ ಹೇಳಿಕೆಗೆ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ, ಮೆಂಟಲ್ ಎಂದು ಕರೆದದ್ದು ಯಾರನ್ನು?

      ರಮೇಶ್ ಜಾರಕಿಹೊಳಿ ಹೇಳಿಕೆ

      ರಮೇಶ್ ಜಾರಕಿಹೊಳಿ ಹೇಳಿಕೆ

      ಚಾಮರಾಜನಗರದಲ್ಲಿ ಮಾತನಾಡುತ್ತಿದ್ದ ಸಚಿವ ರಮೇಶ್ ಜಾರಕಿಹೊಳಿ, "ಬಿಜೆಪಿಯ ಹೈಕಮಾಂಡ್ ಅನುಮತಿ ನೀಡಿದರೆ, ಕಾಂಗ್ರೆಸ್ಸಿನ ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆ. ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ. ಮೊದಲು ಟ್ರಯಲ್ ರನ್ ಎನ್ನುವಂತೆ, ಐವರನ್ನು ಬಿಜಿಪಿಗೆ ಸೇರಿಸುತ್ತೇನೆ. ಬಿಜೆಪಿಯ ವರಿಷ್ಠರು ನನಗೆ ಅನುಮತಿ ನೀಡದರಷ್ಟೇ ಸಾಕು, ಮಿಕ್ಕಿದ್ದನ್ನು ನಾನು ನೋಡಿಕೊಳ್ಳುತ್ತೇನೆ" ಎಂದು ಹೇಳಿದ್ದರು.

      ಬಿಎಸ್ವೈ ಸರಕಾರದ ಕೆಲವು ಮೆಂಟಲ್ ಗಳು

      ಬಿಎಸ್ವೈ ಸರಕಾರದ ಕೆಲವು ಮೆಂಟಲ್ ಗಳು

      ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್,"ಬಿಎಸ್ವೈ ಸರಕಾರದ ಕೆಲವು ಮೆಂಟಲ್ ಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಚುನಾವಣೆ ಎಂದರೆ ಕಡ್ಲೆಪುರಿ ಅಂದುಕೊಂಡಿದ್ದಾರೆ. ಇಪ್ಪತ್ತು, ಮೂವತ್ತು ಎಂದು ಹೇಳಿಕೆ ನೀಡುತ್ತಿದ್ದಾರೆ" ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

      ಪರೋಕ್ಷವಾಗಿ ಜಾರಕಿಹೊಳಿಗೆ ಮೆಂಟಲ್ ಎಂದ ಡಿಕೆಶಿ

      ಪರೋಕ್ಷವಾಗಿ ಜಾರಕಿಹೊಳಿಗೆ ಮೆಂಟಲ್ ಎಂದ ಡಿಕೆಶಿ

      "ಕಾಂಗ್ರೆಸ್ಸಿನಿಂದ ಯಾರೂ ಹೋಗುತ್ತಿಲ್ಲ. ಇಪ್ಪತ್ತು, ಮೂವತ್ತು ಎಂದು ಕೆಲವರು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಯಾವ ಸಚಿವರು, ಯಾರ ಜೊತೆ ಚರ್ಚಿಸುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ನಾವೇನೂ ಇಲ್ಲಿ ಸುಮ್ಮನೆ ಕೈಕಟ್ಟಿ ಕೂತಿಲ್ಲ"ಎಂದು ಪರೋಕ್ಷವಾಗಿ ಜಾರಕಿಹೊಳಿ ಹೆಸರು ಉಲ್ಲೇಖಿಸದೇ ಡಿಕೆಶಿ ಕಿಡಿಕಾರಿದ್ದಾರೆ.

      ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

      ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

      "ಕಾಂಗ್ರೆಸ್ಸಿನ ಯಾರೊಬ್ಬರೂ ಬಿಜೆಪಿಗೆ ಹೋಗುವುದಿಲ್ಲ. ಅಸಲಿಗೆ, ರಮೇಶ್ ಜಾರಕಿಹೊಳಿ ಕಾಂಗ್ರೆಸ್ಸಿಗೆ ವಾಪಸ್ ಬರಲು ಪ್ರಯತ್ನ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿನ ಮಾತುಕತೆಯಲ್ಲಿ ಉತ್ಸುಕರೂ ಆಗಿದ್ದಾರೆ. ಸುಮ್ಮನೆ ಗಾಳಿಗೆ ಗುಂಡು ಹೊಡೆಯುವ ಕೆಲಸವನ್ನು ಅವರು ಮಾಡಿದ್ದಾರೆ. ಅವರೇ ಬಿಜೆಪಿ ತೊರೆಯಲು ಸಿದ್ದರಾಗುತ್ತಿದ್ದಾರೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಾರಕಿಹೊಳಿಗೆ ತಿರುಗೇಟು ನೀಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+