ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ವಿರುದ್ಧ ಎಫ್ಐಆರ್ ರದ್ದು ಮಾಡಲು ದುಂಬಾಲು ಬಿದ್ದ ಡಿಕೆಶಿ

|
Google Oneindia Kannada News

ಬೆಂಗಳೂರು, ಮೇ 21: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮನವಿ ಸಲ್ಲಿಸಿತು.

Recommended Video

ವರ್ಕ್ ಫ್ರಂ ಹೋಂ‌ನಿಂದ ಆಗ್ತಿರೋ ಸಮಸ್ಯೆಗಳು ಅಷ್ಟಿಷ್ಟಲ್ಲ... | Oneindia Kannada

ಜನರನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶ ಹೊಂದಿರುವ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣ ಕೈಬಿಡಬೇಕು. ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಕೆಶಿ ಸಿಎಂ ಬಳಿ ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲುಶಿವಮೊಗ್ಗದಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

''ಕೊರೊನಾ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಪಿಎಂ ಕೇರ್‌ ದುರಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಪೇಜ್‌ನಲ್ಲಿ ಬರೆಯಲಾಗಿತ್ತು. ಇದಕ್ಕೆ ಸೋನಿಯಾ ಗಾಂಧಿ ಅವರೇ ಹೊಣೆ, ಸುಳ್ಳು ಮಾಹಿತಿ ಹರಡುತ್ತಿದ್ದಾರೆ'' ಎಂದು ಸಾಗರದಲ್ಲಿ ಪ್ರವೀಣ್ ಕುಮಾರ್ ಎಂಬ ವಕೀಲರು ದೂರು ದಾಖಲಿಸಿದ್ದಾರೆ. ಈ ಬಗ್ಗೆ ಡಿಕೆಶಿ ಗರಂ ಆಗಿದ್ದಾರೆ. ಮುಂದೆ ಓದಿ....

ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರ

ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರ

ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ''ಶಿವಮೊಗ್ಗದ ಪ್ರವೀಣ್ ಕುಮಾರ್ ಎಂಬ ವಕೀಲ, ಪೊಲೀಸ್ ಅಧಿಕಾರಿಯೊಬ್ಬರ ಜೊತೆ ಸೇರಿ ಒಂದು ದೂರು ಕೊಟ್ಟು ಸೋನಿಯಾಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ, ಇದು ಸೂಕ್ಷ್ಮ ವಿಚಾರ ಇಡೀ ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರ'' ಎಂದರು.

ಅಧಿಕಾರ ದುರುಪಯೋಗದ ವಿಚಾರ

ಅಧಿಕಾರ ದುರುಪಯೋಗದ ವಿಚಾರ

''ದ್ವೇಷದ ಮನೋಭಾವ, ಅಧಿಕಾರ ದುರುಪಯೋಗದ ವಿಚಾರ ಇದು. ವಿರೋಧ ಪಕ್ಷಗಳು ಯಾವ ಮಟ್ಟಕ್ಕೆ ಕೆಲಸ ಮಾಡಬೇಕು ಎನ್ನುವ ದೊಡ್ಡ ಚರ್ಚೆ ಕೂಡ ನಾವು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಗೃಹ ಸಚಿವರ ಜತೆ ಮಾತನಾಡಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ'' ಎಂದರು.

ಸಿಎಂ ಭರವಸೆ ನೀಡಿದ್ದಾರೆ

ಸಿಎಂ ಭರವಸೆ ನೀಡಿದ್ದಾರೆ

''ಇದು ಸೂಕ್ಷ್ಮ ವಿಚಾರ ಹಾಗಾಗಿ ನಾವು ಹೋರಾಟ ಮಾಡುವ ಮೊದಲು ನಮ್ಮ ಪಕ್ಷದ ಪರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಈ ಸಂಬಂಧ ಕ್ರಮಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಇದಕ್ಕೆ 24ಗಂಟೆಯಲ್ಲಿ ಬಿ ರಿಪೋರ್ಟ್, ಸಲ್ಲಿಕೆ ಮಾಡಲಾಗುತ್ತದೆ, ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಒಂದು ನಿಮಿಷದ ಚರ್ಚೆಗೂ ಅವಕಾಶ ನೀಡದೆ ನಮಗೆ ಭರವಸೆ ನೀಡಿದ್ದಾರೆ'' ಎಂದು ಡಿಕೆಶಿ ಹೇಳಿದ್ದಾರೆ.

ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ

ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ

ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಸಾಥ್ ನೀಡಿದ್ದರು‌.

English summary
KPCC President Request To CM Yediyurappa About Rejct Sonia Gandhi FIR At Sagar, Advocate Praveen Kumar Lodged A FIR At Sagar Police Station On Sonia Gandhi About PM Care Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X