ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಕೆಪಿಸಿಸಿಯಿಂದ ಸಮಿತಿ ರಚನೆ
ಬೆಂಗಳೂರು, ಆಗಸ್ಟ್ 17 : ಕರ್ನಾಟಕದಲ್ಲಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಕೆಪಿಸಿಸಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ಸಮಿತಿಯನ್ನು ರಚನೆ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಮಿತಿ ರಚನೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಕೊಡಗು, ಚಾಮರಾಜನರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಂಡ ಸಂಚಾರ ನಡೆಸಲಿದೆ.
ಕಾಂಗ್ರೆಸ್ ಪಕ್ಷ ಜನರೊಂದಿಗೆ ಗುರುತಿಸಿಕೊಂಡಿದ್ದು, ಜನಸಾಮಾನ್ಯರ ನೋವಿನ ಸಂದರ್ಭದಲ್ಲಿ ಪಕ್ಷ ಅವರ ಜೊತೆಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರವಾಹದಿಂದ ಆಗಿರುವ ಜನ-ಜಾನುವಾರು, ಆಸ್ತಿ-ಪಾಸ್ತಿಗಳಿಗೆ ಆಗಿರುವ ಹಾನಿಯ ವರದಿ ತಯಾರಿಸಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಗಿರುವ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಕೆಪಿಸಿಸಿಗೆ ವರದಿ ನೀಡಲು ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ತಕ್ಷಣ ಜಿಲ್ಲೆಗಳಿಗೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ನೀಡಿ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ಸಮಗ್ರ ವರದಿಯನ್ನು ನೀಡಬೇಕು ಎಂದು ವೀಕ್ಷಕರಿಗೆ ಸೂಚನೆ ನೀಡಲಾಗಿದೆ.
ಸಮಿತಿಯ ಸದಸ್ಯರ ವಿವರಗಳು













Click it and Unblock the Notifications