KPCC President: ಜನವರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ : ಯಾರಾಗ್ತಾರೆ ನೂತನ ಸಾರಥಿ?
ಬೆಂಗಳೂರು, ಜನವರಿ 01: 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣೀಟ್ಟಿದ ಡಿ ಕೆ ಶಿವಕುಮಾರ್ ಗೆ ಕೊನೆ ಗಳಿಗೆಯಲ್ಲಿ ಸಿಎಂ ಸ್ಥಾನ ಕೈ ತಪ್ಪಿತ್ತು. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ 2024 ರ ಲೋಕಸಭಾ ಚುನಾವಣೆಯವರೆಗೂ ಮುಂದುವರೆಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು.
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿತ್ತು. ಇದೀಗ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ ಎಂದು ಹೇಳಲಾಗಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕೆಳಗಿಳಿದರೆ ಆ ಜಾಗಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಮೇಲೆದ್ದಿದ್ದು, ಅಧ್ಯಕ್ಷರ ಸ್ಥಾನಕ್ಕೆ ಕೈ ಪಾಳಯದಲ್ಲಿ ಹಲವು ಹೆಸರುಗಳು ಕೇಳಿ ಬರುತ್ತಿವೆ. ಅಲ್ಲದೇ ಕಾಂಗ್ರೆಸ್ ಹೈಕಮಾಂಡ್ ಸಹ ನೂತನ ಸಾರಥಿ ಯಾರಾಗ್ಬೇಕು ಎಂದು ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ.

ಇನ್ನೂ ಕೆಪಿಸಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಕುರಿತು ಎಂ ಬಿ ಪಾಟೀಲ್ ಅವರು ಮಾಹಿತಿ ನೀಡಿದ್ರು. ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಬಳಿಕ ಹೈಕಮಾಂಡ್ ನಾಯಕರು ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ತೀರ್ಮಾನ ಮಾಡುತ್ತಾರೆ ಎಂದು ಮಾಧ್ಯಮಗಳ ಮೂಲಕ ಮಾಹಿತಿ ನೀಡಿದ್ರು. ಹೀಗಾಗಿ ಹೈಕಮಾಂಡ್ ಈ ತಿಂಗಳಲ್ಲಿ(ಜನವರಿ) ರಾಜ್ಯ ಕಾಂಗ್ರೆಸ್ ನಾಯಕರಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಹೈಕಮಾಂಡ್ ನಾಯಕರ ಮಟ್ಟದಲ್ಲಿ ಚರ್ಚೆಯಾಗಲಿದೆ. ಆ ಬಳಿಕ ರಾಜ್ಯ ಕಾಂಗ್ರೆಸ್ ಗೆ ಜನವರಿ ಕೊನೆಯಲ್ಲಿ ಹೊಸ ಸಾರಥಿಯನ್ನ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಲಿದೆ ಎಂದು ಹೇಳಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಆದರೆ ಇತ್ತೀಚೆಗೆ ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹೊರ ಬರುವ ಇಂಗಿತವನ್ನೂ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಹಲವು ನಾಯಕರು ಮಾಧ್ಯಮಗಳ ಮೂಲಕ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಅಧ್ಯಕ್ಷ ಸ್ಥಾನದ ಕುರಿತು ಡಿ ಕೆ ಶಿವಕುಮಾರ್ ಬಣ ಹಾಗೂ ಸಿದ್ದರಾಮಯ್ಯ ಅವರ ಬಣದಲ್ಲಿ ಹಲವು ನಾಯಕರು ಬೇಡಿಕೆ ಇಟ್ಟಿದ್ದಾರೆ. ಡಿ ಕೆ ಶಿವಕುಮಾರ್ ಅವರ ತಮ್ಮ ಸಹೋದರಾದ ಡಿ ಕೆ ಸುರೇಶ್ ಅವರಿಗೆ ಅಧ್ಯಕ್ಷ ಸ್ಥಾನವನ್ನ ಕೊಡಿಸುವ ನಿಟ್ಟಿನಲ್ಲಿ ಪ್ಲಾನ್ ಹಾಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇತ್ತ ಲಿಂಗಾಯತ ನಾಯಕರು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿದ್ದಾರೆ. ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಇಳಿದರೇ ಆ ಜಾಗಕ್ಕೆ ಲಿಂಗಾಯತ ನಾಯಕರೊಬ್ಬರನ್ನು ತರಬೇಕು ಅಂತ ಸಿದ್ಧರಾಮಯ್ಯ ಅವರು ಸೇರಿದಂತೆ ಅವರ ಬೆಂಬಲಿಗರು ಚಿಂತಿಸಿದ್ದಾರೆ ಎನ್ನಲಾಗಿದೆ. ಅದರಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲರ ಹೆಸರು ಮುನ್ನಲೆಗೆ ಬಂದಿದೆ. ಅಲ್ಲದೇ ಸಚಿವರಾದ ಈಶ್ವರ್ ಖಂಡ್ರೆ ಅವರು ಸಹ ಅಧ್ಯಕ್ಷ ಸ್ಥಾನದ ಕುರಿತು ಬೇಡಿಕೆ ಇಟ್ಟಿದ್ದಾರೆ. ಇನ್ನು ಹಿರಿತನವನ್ನು ಮಾನದಂಡವಾಗಿಟ್ಟುಕೊಂಡು ಎಸ್.ಆರ್.ಪಾಟೀಲರ ಹೆಸರು ಕೇಳಿ ಬಂದಿದೆ.
ಇನ್ನು ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ದಲಿತ ನಾಯಕರಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಸಹ ರೇಸ್ ನಲ್ಲಿದ್ದಾರೆ. ಅಲ್ಲದೇ ಪರಿಶಿಷ್ಟ ಪಂಗಡದ ನಾಯಕ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಪಟ್ಟ ಅಲಂಕರಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ. ಒಟ್ನಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅನಿವಾರ್ಯವಾದರೇ ಅಳೆದು ತೂಗಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟುತ್ತದೆ ಎಂಬುದನ್ನ ಕಾದು ನೋಡ್ಬೇಕಾಗಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications