KGF Babu : ಕಾಂಗ್ರೆಸ್ ಪಕ್ಷದ ವಿರುದ್ಧ ಹೇಳಿಕೆ: ಕೆಜಿಎಫ್‌ ಬಾಬು ಅಮಾನತು

ಬೆಂಗಳೂರು, ಜನವರಿ 7: ಪಕ್ಷದ ವಿರೋಧ ಹೇಳಿಕೆಯ ಹಿನ್ನೆಲೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿದೆ.

ಶುಕ್ರವಾರ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕೆಜಿಎಫ್‌ ಬಾಬು ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ನವರು ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸೀಟ್ ಬರಲ್ಲ ಎಂದ‌ ಕೆಪಿಸಿಸಿ ಕಚೇರಿಯಲ್ಲೇ ಹೇಳಿಕೆ ನೀಡಿದ ಕೆಜಿಎಫ್ ಬಾಬು ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ‌ ಆದ ಕಾರಣ ಕೆಪಿಸಿಸಿ ಕಚೇರಿಯಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು.

Kpcc Suspends Kgf Babu For Anti Party Statement

ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಲೀಂ ಅಹ್ಮದ್ ಅಲ್ಪಸಂಖ್ಯಾತ ನಾಯಕರಲ್ಲ. ಕೆಪಿಸಿಸಿ ಕಚೇರಿಯಲ್ಲಿ ಯಾರಿಗೂ ಮರ್ಯಾದೆ ಸಿಗುತ್ತಿಲ್ಲ ಎಂದೆಲ್ಲಾ ಆರೋಪ ಮಾಡಿದ್ದರು. ಈ ನಡುವೆ ಕೆಜಿಎಫ್ ಬಾಬು ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್‌ನ ಎಸ್ ಮನೋಹರ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಪತ್ರವನ್ನು ಬರೆದಿದ್ದರು. ಇದೀಗ ಕೆಜಿಎಫ್‌ ಬಾಬು ಅವರನ್ನು ಅಮಾನತು ಮಾಡಿ ಕಾಂಗ್ರೆಸ್ ಶಿಸ್ತು ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಕ್ರಮ ಕೈಗೊಂಡಿದ್ದಾರೆ.
Kpcc Suspends Kgf Babu For Anti Party Statement

ಅಮಾನತು ಪತ್ರದಲ್ಲಿ ಏನಿದೆ?

ಕಾಂಗ್ರೆಸ್ ಪಕ್ಷದ ಶಿಸ್ತುಪಾಲನಾ ಸಮಿತಿಯಿಂದ ತಮಗೆ ಈಗಾಗಲೆ ಕಾರಣ ಕೇಳಿ ನೋಟಿಸ್‌ ಅನ್ನು ಮೂರು ತಿಂಗಳ ಹಿ೦ದೆಯೇ ತಾವು ಪಕ್ಷದ ನೀತಿ ವಿರುದ್ಧವಾಗಿ ಮಾಧ್ಯಮದವರಿಗೆ ವಿವಿಧ ರೀತಿಯ ಹೇಳಿಕೆ ನೀಡುವ ಬಗ್ಗೆ ನೀಡಿರುತ್ತದೆ ಹಾಗೂ ನೀವು ಶಿಸ್ತು ಸಮಿತಿಯ ಕಾರಣ ಕೇಳಿ ನೋಟಿಸ್‌ಗೆ ಸಮಂಜಸ ಉತ್ತರವನ್ನು ನೀಡಿರುವುದಿಲ್ಲ.

ಶುಕ್ರವಾರ ಸಹ ಸ್ವಯಂಪ್ರೇರಿತರಾಗಿ ನೀವು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದ ಕಾಂಗ್ರೇಸ್ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆಯನ್ನು ಮಾಧ್ಯಮಕ್ಕೆ ನೀಡಿರುವಿರಿ. ನಿಮ್ಮ ಈ ನಡೆಯೂ ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದ್ದ ಹಾಗೂ ಪಕ್ಷದ ಹಿನ್ನಡೆಗೆ ಕಾರಣವಾಗುತ್ತಿದೆ ಎಂದು ಗಂಭೀರವಾಗಿ ಪರಿಗಣಿಸಿ, ಈ ಕೂಡಲೇ ನಿಮ್ಮನ್ನು ಪಕ್ಷದಿಂದ ಅಮಾನುತು ಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+