ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಕಾಂಗ್ರೆಸ್ ಮುಖಂಡರ ಅಮಾನತ್ತು
ಬೆಂಗಳೂರು, ಏಪ್ರಿಲ್ 06: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಇಬ್ಬರು ಕಾಂಗ್ರೆಸ್ ಮುಖಂಡರನ್ನು ಇಂದು ಕೆಪಿಸಿಸಿಯು ಆರು ವರ್ಷಗಳ ಕಾಲ ಅಮಾನತ್ತು ಮಾಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷದ ಚಿಹ್ನೆಯ ಮೂಲಕ ಕಣಕ್ಕೆ ಇಳಿದಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಅವರ ವಿರುದ್ಧ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದ ಅಮೃತ್ ಶಣೈ ಅವರನ್ನು ಕೆಪಿಸಿಸಿಯು ಆರು ವರ್ಷ ಅಮಾನತ್ತು ಮಾಡಿದೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಕಾರಣ ಬಿಎಸ್‌ಪಿ ಟಿಕೆಟ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಎದುರು ಸ್ಪರ್ಧಿಸಿರುವ ಶಾನುಲ್ ಹಖ್ ಬುಖಾರಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಹೊರಗಿಡಲಾಗಿದೆ.

ಈ ಇಬ್ಬರೂ ಮುಖಂಡರನ್ನು ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಯ ಆದೇಶದಂತೆ ಅಮಾನತ್ತು ಮಾಡಲಾಗಿದೆ.
ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುತ್ತಿದ್ದಾರೆ, ಅವರಿಗೆ ಎಚ್ಚರಿಕೆ ನೀಡುವ ಸಲುವಾಗಿ ಇಂದು ಈ ಇಬ್ಬರು ಪಕ್ಷ ವಿರೋಧಿ ಮುಖಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications