ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಮಿತಿಗೆ ಮೇಜರ್ ಸರ್ಜರಿ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 21 : ಕರ್ನಾಟಕ ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಕಾಂಗ್ರೆಸ್ ನಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿವೆ.

ಸಿ ಫೋರ್ ಸಮೀಕ್ಷೆ : ಸಿದ್ದರಾಮಯ್ಯ -ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ಬಹುಮತ

ಇದಕ್ಕೆ ಪೂರಕವೆಂಬಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಲಹೆಯಂತೆ ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಬಲಪಡಿಸಲು ಹಾಗೂ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಜಿಲ್ಲಾವಾರು ಸಭೆಗಳನ್ನು ನಡೆಸಲು ಆರಂಭಿಸಿದ್ದಾರೆ.

KPCC to change Congress chiefs of 23 districts in Karnataka

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರು ಜಿಲ್ಲೆಗಳಲ್ಲಿ ವಿಶೇಷ ಸಭೆಗಳನ್ನು ನಡೆಸಿದ್ದಾರೆ.

ಹಾಸನ, ವಿಜಯಪುರ, ಬಳ್ಳಾರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವಿಶೇಷ ಸಭೆಗಳನ್ನು ನಡೆಸಿ ಎಲ್ಲಾ ನಾಲ್ಕು ಜಿಲ್ಲೆಗಳ ಅಧ್ಯಕ್ಷರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.

ಅದೇ ರೀತಿ 23 ಜಿಲ್ಲೆಗಳ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳವೆ.

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಬಿ.ಶಿವರಾಮ್ ಅವರನ್ನು ನೇಮಕ ಮಾಡಿದ ದಿನದಿಂದ ವ್ಯಾಪಕ ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬದಲಾಯಿಸಲು ಕೆಪಿಸಿಸಿ ನಿರ್ಧರಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Top office-bearers of Karnataka Pradesh Congress Committee started consultations with district leaders on Saturday to sort out problems and discuss measures to strengthen the party at the local level.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X